ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!


ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿ ಸಮೀಪ, ತಟ್ಟಿಹಳ್ಳಿ ಬಳಿ ಕಾರ್ ಹಾಗೂ ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಕಾರಲ್ಲಿದ್ದ ಒಂದು ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಮುಂಡಗೋಡಿನಿಂದ ಯಲ್ಲಾಪುರಕ್ಕೆ ತೆರಳುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಮುಂಡಗೋಡಿನ ಕಡೆಗೆ ಬರುತ್ತಿದ್ದ ಟ್ರಾಕ್ಟರ್ ಗೆ ಮುಖಾಮುಕಿ ಡಿಕ್ಕಿಯಾಗಿದೆ. ಡಿಕ್ಕಿಯಾದ ಕಾರು ಸಿನಿಮಿಯ ರೀತಿಯಲ್ಲಿ ಪಲ್ಟಿಯಾಗಿದೆ. ಯಾವುದೇ ಪ್ರಾಣಾಪಾಯ ಆಗಿರೋ ಮಾಹಿತಿ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ👉 ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!