Heavy rain Alert;
ಕಾರವಾರ; ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಜು.20 ರ ಬೆಳಗ್ಗೆ 5.30 ವರೆಗೆ 24 ಗಂಟೆಗಳ ಹಠಾತ್ ಪ್ರವಾಹ ಅಪಾಯದ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಎಚ್ಚರಿಕೆಗಳು..!
ಸಂಪೂರ್ಣವಾಗಿ ನ್ಯಾಚುರೇಟೆಡ್ ಮಣ್ಣು ಮತ್ತು ಕಳವಳಕಾರಿ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ಮೇಲ್ಮೆ ಹರಿವು /ಮುಳುಗಡೆ ಸಂಭವಿಸಬಹುದೆಂದು ಮುನ್ಸೂಚನೆ ನೀಡಲಾಗಿರುವುದರಿಂದ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವುದು.
ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ನೀರಿನ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸುವುದು.
ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವುದು. ಅಘನಾಶಿನಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬಗ್ಗೆ ಕೇಂದ್ರಿಯ ಜಲ ಆಯೋಗ ಮುನ್ಸೂಚನೆಯನ್ನು ನೀಡಿರುತ್ತದೆ. ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಕೂಡಾ ಮಳೆಯ ತೀವ್ರತೆಯನುಸಾರ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು ಮತ್ತು ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.
ತುರ್ತು ಸೇವೆಗೆ 24×7 ಕಂಟ್ರೋಲ್ ರೂಮ್ ಟೋಲ್ ಪ್ರೀ ಸಂಖ್ಯೆ 08382-229857 ಮತ್ತು ವಾಟ್ಸಪ್ ಸಂಖ್ಯೆ 9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.