ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ‌ ಮುನ್ಸೂಚನೆ..!

Rain Alert; ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ 5 ರಂದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ವೇಳೆ ಜೋರಾದ ಗಾಳಿ ಬೀಸಲಿದ್ದು, ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ.

ಧಾರವಾಡ, ಗದಗ, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬೀ ಸಮುದ್ರದ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕರಾವಳಿ ತೀರಗಳಲ್ಲಿ ಟ್ರಫ್ (ದಟ್ಟಮೋಡ) ನಿರ್ಮಾಣ ಆಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇವುಗಳನ್ನೂ ಓದಿ

ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!

ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!

error: Content is protected !!