Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ.

ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಬಸ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಏಳು ಮಂದಿ ಪ್ರಯಾಣಿಕರಿಗೆ ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ, ಯಲ್ಲಾಪುರ ಸಿಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!