ಮುಂಡಗೋಡ ತಾಲೂಕಿನ ಕಾವಲಕೊಪ್ಪ ತಿರುವಿನಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಹಾನಗಲ್ ನಿಂದ ಮುಂಡಗೋಡಿಗೆ ಬರುತ್ತಿದ್ದ ಬಸ್ ಹಾಗೂ ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಭೀಕರ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿಗಳು ನಜ್ಜು ಗುಜ್ಜಾಗಿವೆ. ಬಸ್ ಚಾಲಕ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ.

ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
