ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಹಾಸನ, ಮೈಸೂರು, ತುಮಕೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ.

ಅಲ್ಲದೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೂ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಅಕ್ಟೋಬರ್ 24ರ ಶುಕ್ರವಾರವೂ ರಾಜ್ಯವ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಮಂಡ್ಯ, ತುಮಕೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

error: Content is protected !!