ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!


Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.

ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ತನ್ನ ನೋವನ್ನು ವಿಡಿಯೋ ಮೂಲಕ ಹಂಚಿಕೊಂಡಿರೋ ಶಿವರಾಜ್, ಕಾರಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹುಬ್ಬಳ್ಳಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸುದ್ದಿ ತಿಳಿದ ಅಕ್ಷಯ ಚಲವಾದಿ ಹಾಗೂ ಸ್ನೇಹಿತರು, ಕಾರಲ್ಲಿ ಒದ್ದಾಡುತ್ತಿರೋದನ್ನು ನೋಡಿ ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ‌.

ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!

ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪದರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ‌.

ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!

 

error: Content is protected !!