ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶಿವು ಮೊಬೈಲ್ ಅಂಗಡಿಗೆ ಕಳ್ಳರು ನುಗ್ಗಿ ₹63,920 ಮೌಲ್ಯದ ಮೊಬೈಲ್ ಪರಿಕರಗಳು ಹಾಗೂ ಹಳೆಯ ಮೊಬೈಲ್‌ಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.
FIRನಲ್ಲಿ ದಾಖಲಾಗಿರುವ ಮಾಹಿತಿಯಂತೆ, ಶಿರಸಿ ರಸ್ತೆಯಲ್ಲಿಯಲ್ಲಿರೋ ಲಕ್ಷ್ಮಣ ಶಿವಪ್ಪ ಲಮಾಣಿ ಎಂಬುವವರಿಗೆ ಸೇರಿದ, ಮೊಬೈಲ್ ಅಂಗಡಿಯಲ್ಲಿ ಕಳ್ಳರು ಅಂಗಡಿಯ ಶಟರ್‌ಗೆ ಯಾವುದೋ ಗಟ್ಟಿಯಾದ ವಸ್ತುವಿನಿಂದ ಹೊಡೆದು ಮುರಿದು ಒಳನುಗ್ಗಿದ್ದಾರೆ ಎನ್ನಲಾಗಿದೆ.
ಅಂಗಡಿಯಲ್ಲಿದ್ದ ಹೆಡ್‌ಫೋನ್‌ಗಳು, ಕೀಪ್ಯಾಡ್ ಮೊಬೈಲ್, ಡೆಮೋ ಸಿಮ್‌ಗಳು, ಮೆಮೊರಿ ಕಾರ್ಡ್‌ಗಳು, ಪೆನ್‌ಡ್ರೈವ್‌ಗಳು, ವಿವೋ ಚಾರ್ಜರ್, ಕಾರ್ಡ್ ರೀಡರ್‌ಗಳು, ಪವರ್ ಬ್ಯಾಂಕ್‌ಗಳು, ಬ್ಲೂಟೂತ್ ಸ್ಪೀಕರ್‌ಗಳು, ಮೊಬೈಲ್ ಕವರ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಇದರ ಜೊತೆಗೆ ವಿವಿಧ ಕಂಪನಿಗಳ 5 ಹಳೆಯ ಮೊಬೈಲ್‌ಗಳನ್ನೂ ಕಳ್ಳತನ ಮಾಡಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹50,000 ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಒಟ್ಟಾರೆ ಕಳುವಾದ ವಸ್ತುಗಳ ಅಂದಾಜು ಮೌಲ್ಯ ₹63,920 ಎಂದು FIRನಲ್ಲಿ ದಾಖಲಿಸಲಾಗಿದೆ.
ಘಟನೆ ಕುರಿತು ಅಂಗಡಿ ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
