
ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.
ಮುಂಡಗೋಡ ಪಟ್ಟಣದ ಶಿರಸಿ ಹುಬ್ಬಳ್ಳಿ ರಸ್ತೆಯ, KSRTC ಡೀಪೋ ಬಳಿ ದಾಳಿ ನಡೆದಿದ್ದು, ಇಂದೂರಿನ ಅಕ್ಬರ್ ಮೌಲಾಸಾಬ್ ಸೈಯದ್ ಅಲಿ (32) ಎಂಬುವ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

ಮುಂಡಗೋಡ ಪಟ್ಟಣದ ಶಿರಸಿ-ಹುಬ್ಬಳ್ಳಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಆರೋಪಿತನಾದ ಅಕ್ಬರ್ ಮೌಲಾಸಾಬ ಸೈಯದ್‌ಅಲಿ ಈತನು ಬಿಳಿ ಬಣ್ಣದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ದಾಳಿ ಮಾಡಿ ಆರೋಪಿತನನ್ನು ಬಂದಿಸಲಾಗಿದೆ.

ದಾಳಿಯ ವೇಳೆ ಸುಮಾರು 12 ಸಾವಿರ ಮೌಲ್ಯದ 184 ಗ್ರಾಂ ತೂಕದ ಗಾಂಜಾ ಹಾಗೂ ಅಂಗ ಶೋಧನೆ ವೇಳೆ ಸಿಕ್ಕ ನಗದು 360 ರೂ. ವಶಪಡಿಸಿಕೊಳ್ಳಲಾಗಿದೆ.
ಉತ್ತರ ಕನ್ನಡ ಎಸ್ಪಿ ದೀಪನ್ ಎಮ್.ಎನ್,
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ಮಾರ್ಗದರ್ಶನದಲ್ಲಿ ಅಕ್ರಮ ಗಾಂಜಾವನ್ನು ಮಾರಾಟ ಮಾಡುವ ಆರೋಪಿತನನ್ನು ಬಂಧಿಸುವಲ್ಲಿ ಮುಂಡಗೋಡ ಪಿಐ ರಂಗನಾಥ ನೀಲಮ್ಮನವರ, ಪಿಎಸ್ಐ ಮಂಜುನಾಥ ಗೌಡರ ಸಿಬ್ಬಂದಿಗಳಾದ ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ಮಹಾಂತೇಶ ಮುಧೋಳ, ನಾಗಪ್ಪ ಮೊರಟಗಿ ಹಾಗೂ ಬಸವರಾಜ ಒಡೆಯರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇವರುಗಳಿಗೆ ಎಸ್ಪಿ ದೀಪನ್ ಎಂ.ಎನ್ ಪ್ರಶಂಸಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
