ನಾಳೆ ಗುರುವಾರ 12 ರಂದು ​ಮುಂಡಗೋಡ ಬಂದ್‌ಗೆ ಕರೆ..! ರಾಕ್ಷಸೀ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಕರೆ..!!

​ಮುಂಡಗೋಡ ತಾಲೂಕಿನಲ್ಲಿ 12 ವರ್ಷದ ಬಾಲಕಿಯ ಮೇಲೆ ನಡೆದ ಅಮಾನುಷ ಲೈಂಗಿಕ ದೌರ್ಜನ್ಯ ಹಾಗೂ ರಾಕ್ಷಸೀ ಕೃತ್ಯ ಎಸಗಿದ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ನವೆಂಬರ್ 12 ರಂದು ಅಂದ್ರೆ ನಾಳೆ ಗುರುವಾರ “ಮುಂಡಗೋಡ ಸಂಪೂರ್ಣ ಬಂದ್‌” ಗೆ ಹಿಂದೂ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.

ರಾಕ್ಷಸನಿಗೆ ಕಠಿಣ ಶಿಕ್ಷೆಯಾಗಲಿ..!
​ಸಂತ್ರಸ್ತ ಬಾಲಕಿಗೆ ನ್ಯಾಯ ಸಿಗಬೇಕು ಮತ್ತು ಇಂತಹ ಹೇಯ ಕೃತ್ಯಗಳನ್ನು ಎಸಗುವ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಮುಂಡಗೋಡದ ಐಬಿ ಆವರಣದಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸಲಿದ್ದಾರೆ ಅಂತಾ ಸಂಘಟಕರು ತಿಳಿಸಿದ್ದಾರೆ.

​ಬಾಲಕಿಯರ ಸುರಕ್ಷತೆಯನ್ನು ಖಾತ್ರಿಪಡಿಸಲು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಲು ನಾಗರಿಕರು, ವರ್ತಕರು ಸ್ವಯಂಪ್ರೇರಿತರಾಗಿ ಈ ಬಂದ್‌ಗೆ ಸಹಕರಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.