ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತವಾಗಿದೆ. ಪರಿಣಾಮ ಇಬ್ಬರು ದುರಂತ ಸಾವು ಕಂಡಿದ್ದಾರೆ. ಹಾವೇರಿ ನಗರದ ಆರ್ ಟಿ ಓ ಬೈ ಪಾಸ್ ಬಳಿ ನಡೆದಿರೋ ಆಪಘಾತದಲ್ಲಿ ಎರಡು ವರ್ಷದ ಮಗುವಿಗೂ ಗಾಯವಾಗಿದೆ. ಮಲೆಬೆನ್ನೂರಿನಿಂದ ಧಾರವಾಡಕ್ಕೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪಲ್ಟಿಯಾಗಿದೆ. ಕಾರ್ ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಗಾಯಗೊಂಡಿದ್ದ ಎರಡು ವರ್ಷ ದ ಮಗು ಹುಬ್ಬಳ್ಳಿಯ ಕಿಮ್ಸ ಗೆ ರವಾನೆ ಮಾಡಲಾಗಿದೆ. ಧಾರವಾಡ ಮೂಲದ ಚೇತನಾ(35) ಸ್ಥಳದಲ್ಲೇ ಸಾವು ಕಂಡಿದ್ದರೆ, ದುಂಡೆಪ್ಪ (60), ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮಾರುತಿ ಎಕ್ಸ್ಪ್ರೆಸ್ ಕಾರ್ ನಲ್ಲಿ ಧಾರವಾಡ ಕ್ಕೆ ಹೊರಟಿದ್ದ ಒಂದೇ ಕುಟುಂಬದ ಸದಸ್ಯರುಬ ಇವರಾಗಿದ್ದು, ಇನ್ನುಳಿದ ನಾಲ್ಕು ಜನ್ರಿಗೆ ಸಣ್ಣಪುಟ್ಟ ಗಾಯವಾಗಿದೆ. ಹಾವೇರಿ ರೂರಲ್ ಟ್ರಾಫಿಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!
ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?
ಭಟ್ಕಳ: ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಿಳಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಗೆ ಬಹುಮುಖ್ಯ ಸುಳಿವು ಲಭ್ಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆಗಂತುಕ ಕೊಲೆಯಾದವರ ಸಂಬಂಧಿಯೇ ಆಗಿದ್ದಾನೆ ಅಂತಿದೆ ಪೊಲೀಸ್ ಮೂಲಗಳು. ಹೌದು, ಭಟ್ಕಳ ತಾಲೂಕಿನ ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್(35) ಎಂಬುವ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಿರೋ ಆರೋಪಿ ಕುಟುಂಬದ ಸಂಬಂಧಿ ಅಂದ್ರೆ, ಶಂಭು ಭಟ್ಟರ ಸೊಸೆ ವಿದ್ಯಾ ಭಟ್ ರ ಸಹೋದರ, ವಿನಯ್ ಶ್ರೀಧರ ಭಟ್ ಅನ್ನೋ ಮಾತು ಕೇಳಿ ಬರ್ತಿದೆ. ಏನಿದೆ ಕಾರಣ..? ಅಂದಹಾಗೆ, ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ...
ಭಟ್ಕಳದ ಹಾಡವಳ್ಳಿಯಲ್ಲಿ ಭೀಕರ ಕೊಲೆ, ಒಂದೇ ಕುಟುಂಬದ ನಾಲ್ವರ ಹತ್ಯೆ, ಹಾಡಹಗಲೇ ನಡೀತು ಭಯಾನಕ ಕೃತ್ಯ..!
ಭಟ್ಕಳ: ನಿಜಕ್ಕೂ ಭಟ್ಕಳ ತಾಲೂಕು ಬೆಚ್ಚಿ ಬಿದ್ದಿದೆ. ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ಹಾಡಹಗಲೇ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಡಿ ಇಡಿಯಾಗಿ ನಾಲ್ವರನ್ನು ಬಲಿ ಪಡೆಯಲಾಗಿದೆ. ಹೀಗಾಗಿ, ಆ ಪ್ರದೇಶದಲ್ಲಿ ಈಗ ರಕ್ತ ಸಿಕ್ತ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಹಾಡವಳ್ಳಿ ಗ್ರಾಮದ ಶಂಭು ಹೆಗಡೆ (65) ಆತನ ಪತ್ನಿ ಮಾದೇವಿ ಹೆಗಡೆ (40) ಮಗ ರಾಜೀವ್ ಹೆಗಡೆ (34) ಕುಸುಮಾ ಹೆಗಡೆ (30) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಇನ್ನು ಶವಗಳು ಮನೆಯ ಹೊರಗಡೆ ದಿಕ್ಕಿಗೊಂದರಂತೆ ಬಿದ್ದಿವೆ. ಭಯಾನಕವಾಗಿದೆ. ಆಸ್ತಿ ವಿಚಾರಕ್ಕಾ..? ಯಸ್, ಇಂತಹದ್ದೊಂದು ಅನುಮಾನ ಈಗ ಭಟ್ಕಳ ಪೊಲೀಸರಿಗೆ ಬಂದಿದೆ. ಯಾಕಂದ್ರೆ, ಇಷ್ಟೊಂದು ಕ್ರೂರವಾಗಿ ಹತ್ಯೆ ಮಾಡಿರೋ ಹಿಂದೆ ಆಸ್ತಿ ವಿವಾದ ಕಾರಣವಾಗಿದೆ ಎನ್ನಲಾಗಿದೆ. ಆದ್ರೆ, ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬದುಕಿತು ಪುಟ್ಟ ಕಂದಮ್ಮ..! ಇನ್ನು ಪ್ರಕರಣದಲ್ಲಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಲು ಬಂದಿದ್ದ ಆಗಂತುಕನ ಕೈಯಿಂದ ಪುಟ್ಟ ಹೆಣ್ಣು ಮಗು ಬಚಾವ್ ಆಗಿದೆ. ಕಾರಣ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ ಹೋಗಿದೆ ಅಂತೇಲ್ಲ ದೊಡ್ಡ ದೊಡ್ಡ ಬ್ಯಾನರುಗಳು ಪ್ಲೆಕ್ಸ್ ಗಳು ರಾರಾಜಿಸುತ್ತವೆ. ಆದ್ರೆ ಅಂತಹ ಪ್ಲೆಕ್ಸು ಬ್ಯಾನರುಗಳ ನೆರಳಲ್ಲೇ ಅದೊಂದು ಗ್ರಾಮದ ಶಾಲಾ ವಿದ್ಯಾರ್ಥಿಗಳು ಕುಡಿಯಲು ನೀರು ಕೊಡಿ ಅಂತಾ ಪಾಠ ಬಿಟ್ಟು ರಸ್ತೆಯ ಮೇಲೆ ಬಂದು ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಹೌದು, ಮುಂಡಗೋಡ ತಾಲೂಕಿನ ಸಿಂಗನಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಮಗೆ ಕುಡಿಯಲು ನೀರು ಕೊಡಿ ಅಂತಾ ಖಾಲಿ ಕೊಡಗಳೊಂದಿಗೆ ರಸ್ತೆ...
ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಎಲ್ಲಿ ಗೊತ್ತಾ..?
ಸವಣೂರಿನಲ್ಲಿ ಕರುಳು ಹಿಂಡುವ, ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಾಲಮಾಡಿ ಮಗಳಮದುವೆ ಮಾಡಿದ್ದ ದಂಪತಿಗಳು ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ತಂದೆ, ತಾಯಿಯ ಸಾವು ಕಂಡ ಮಗಳೂ ಕೂಡ ನೇಣಿಗೆ ಶರಣಾಗಿದ್ದಾಳೆ. ಇದ್ರೊಂದಿಗೆ ಒಂದೇ ಕುಟುಂಬ ಮೂವರು ಸಾವಿನ ಹಾದಿ ಹಿಡಿದಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟಮೆ ನಡೆದಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ ಮಾಡಿ ಮಗಳ ಮದುವೆಯನ್ನ ಮಾಡಿದ್ದ ಪಾಲಕರು, ಸಾಲ ತೀರಿಸಲಾಗದೆ ಮನನೊಂದಿದ್ದರು. ಸಾಲಬಾಧೆ ತಾಳಲಾರದೆ ತಂದೆ ತಾಯಿ ಆತ್ಮಹತ್ಯೆಮಾಡಿಕೊಂಡಿದ್ದನ್ನು ಕಂಡ ಮಗಳೂ ಕೂಡ, ನನ್ನಿಂದ ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಅಂದಹಾಗೆ, ಮಗಳ ಮದುವೆಗಾಗಿ ಸುಮಾರು 25 ಲಕ್ಷರೂಪಾಯಿ ಸಾಲ ಮಾಡಿದ್ದ ಹನುಮಂತಗೌಡ ಪಾಟೀಲ್ ಸಾಲ ತೀರಿಸಲಾಗದೆ ಪರದಾಡಿದ್ದರು ಎನ್ನಲಾಗಿದೆ.. ಇನ್ನು ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರ...
ಇಂದೂರು ಜಿ.ಪಂ ಕ್ಷೇತ್ರದಲ್ಲಿ ಬಿಜೆಪಿಗೆ ಶಾಕ್, 250 ಕ್ಕೂ ಹೆಚ್ಚು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ: ಇಂದೂರಿನಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ. ಇಷ್ಟು ದಿನ ಬಲಿಷ್ಟವಾಗಿದ್ದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಬಿಜೆಪಿಗೆ ಇವತ್ತು ಕಾಂಗ್ರೆಸ್ ಶಾಕ್ ನೀಡಿದೆ. ಸುಮಾರು 250 ಕ್ಕೂ ಹೆಚ್ಚು ಬಿಜೆಪಿ ಮುಖಂಡರು, ಕಾರ್ಯಕರ್ತರು ಕೈ ಹಿಡಿದಿದ್ದಾರೆ. ಇದ್ರೊಂದಿಗೆ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಇಂದೂರು, ಕೊಪ್ಪ, ಇಂದಿರಾನಗರದಲ್ಲಿ ಕಾಂಗ್ರೆಸ್ ಗೆ ಬೂಸ್ಟ್ ಸಿಕ್ಕಂತಾಗಿದೆ. ಇಂದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹ್ಮದ್ ರಫೀಕ್ ದೇಸಳ್ಳಿ, ಮಾಜಿ ಉಪಾಧ್ಯಕ್ಷ ಬಿಷ್ಟನಗೌಡ ಪಾಟೀಲ್, ಸೊಸೈಟಿ ಮಾಜಿ ಅಧ್ಯಕ್ಷ ರವಿಚಂದ್ರ ದುಗ್ಗಳ್ಳಿ ಸೇರಿದಂತೆ ಇಂದೂರು, ಕೊಪ್ಪ, ಇಂದಿರಾನಗರದ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ರು. ವಿ.ಎಸ್. ಪಾಟೀಲ್ ಮಾತು..! ಇನ್ನು, ಮಾಜಿ ಶಾಸಕ, ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ವಿ.ಎಸ್.ಪಾಟೀಲ್ ಕಾರ್ಯಕ್ರಮದಲ್ಲಿ ಮಾತನಾಡಿದ್ರು, ಜನ ಬಲವೋ..? ಹಣ ಬಲವೋ..? ಎಂಬ ಜಿದ್ದಿನ ಚುನಾವಣೆ ನಮ್ಮ ಮುಂದಿದೆ, ನಿಮ್ಮೆಲ್ಲರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿ ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ಮಾಡಿ ಕೊಡಿ ಅಂತಾ ಮನವಿ ಮಾಡಿದ್ರು. ರೇಶನ್ ಅಕ್ಕಿಯಲ್ಲೂ ಪರ್ಸೆಂಟೇಜ್..! ಬಿಜೆಪಿ...
ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಅಗಡಿ ಮಿಲ್ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದೆ. ಅಗಡಿ ಶಾಂತಿನಗರದ ಸುರೇಶ್ ಎಂಬುವ ಯುವಕ, ನಂದಿಕಟ್ಟಾ ಗ್ರಾಮದ ಮಹಮದ್ ದುಂಡಸಿ (37), ಈಸಾಕ್ ಯಲ್ಲಾಪುರ (35) ಇಬ್ಬರು ಯುವಕರಿಗೆ ಹಾಗೂ ಕಲಘಟಗಿ ತಾಲೂಕಿನ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ನೆಲ್ಲಿಹರವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ.
ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಅಗಡಿ ಮಿಲ್ ಬಳಿ ಮತ್ತೊಂದು ಬೈಕ್ ಅಪಘಾತವಾಗಿದೆ. ಪರಿಣಾಮ ಓರ್ವ ಯುವಕನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿವೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಮಲ್ಲಿಕಜಾನ್ ವಾಲೀಕಾರ್ ಎಂಬುವವನೇ ಬೈಕ್‌ಅಪಘಾತದಲ್ಲಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಅಗಡಿ ಸಮೀಪದ ಪೆಟ್ರೊಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಕೆಲಸ ಮುಗಿಸಿ ಹೊರಟಿದ್ದಾಗ ಘಟನೆ ನಡೆದಿದೆ. ಇನ್ನು ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಅಗಡಿಯ ಯುವಕ ಸಂಜು ಸಿದ್ದಪ್ಪ ಗಳಗಿ, ನೇತ್ರದಾನ, ಅಂಗಾಂಗ ದಾನ ಮಾಡಿ ಮಾದರಿಯಾದ ಕುಟುಂಬ..!
ಶಿವರಾತ್ರಿಯ ದಿನವೇ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ ಅಗಡಿಯ ಯುವಕ ಸಾವು ಕಂಡಿದ್ದಾನೆ. ಆದ್ರೆ ಈ ಯುವಕನ ಕುಟುಂಬಸ್ಥರು ನಿಜಕ್ಕೂ ತನ್ನ ಕರುಳಿನ ಕುಡಿಯ ಸಾವಿಗೂ ಒಂದು ಸಾರ್ಥಕತೆಯ ಮೆರಗು ಕೊಟ್ಟಿದ್ದಾರೆ. ಮಣ್ಣಿನಲ್ಲಿ ಮಣ್ಣಾಗ ಹೊರಟಿದ್ದ ಅಮೂಲ್ಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆಯ ಆದರ್ಶ ಮೆರೆದಿದ್ದಾರೆ. ನೋವಿನಲ್ಲೂ ಕುಟುಂಬಸ್ಥರ ಕಳಕಳಿ..! ಅಗಡಿ ಗ್ರಾಮದ ಸಂಜು ಸಿದ್ದಪ್ಪ ಗಳಗಿ (23) ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದ. ಸಂಜುವಿನ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಸಂಪೂರ್ಣ ನಿಸ್ತೇಜ ಸ್ಥಿತಿಗೆ ತಲುಪಿದ್ದ. ಮೆದುಳು ನಿಶ್ಕ್ರೀಯವಾಗಿತ್ತು. ಹೀಗಾಗಿ, ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಮಲಗಿದ್ದ ಯುವಕ ಸಂಜು, ಬದುಕಿಳಿಯುವುದು ಅಸಾಧ್ಯದ ಮಾತು ಎಂದು ಅರಿತ ಕುಟುಂಬಸ್ಥರು, ಆ ನೋವಿನಲ್ಲೂ ಸಮಾಜದ ಕಾಳಜಿ ತೋರಿದ್ದಾರೆ. ಹೀಗಾಗಿ, ಸಂಜು ಗಳಗಿ ಕುಟುಂಬಸ್ಥರ ಕಳಕಳಿ ಮಾದರಿಯಾಗಿದೆ. ನೇತ್ರದಾನ..! ಇನ್ನು, ಮಂಗಳವಾರ ತಡರಾತ್ರಿ ಮೃತಪಟ್ಟ ಯುವಕ ಸಂಜು ಗಳಗಿಯ ನೇತ್ರದಾನ ಕೂಡ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಕಿಮ್ಸ್ ನಲ್ಲಿ ತಡರಾತ್ರಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









