ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ ಅದರದ್ದೇ ಆದ ಸಿದ್ಧಾಂತಗಳಿವೆ. ಆ ಸಿದ್ಧಾಂತಗಳನ್ನು ಒಪ್ಪಿ ಕೋಟ್ಯಾಂತರ ಜನ ಕಾರ್ಯಕರ್ತರು ಆಯಾ ಪಕ್ಷಗಳ ಜೊತೆಗೆ ಬೆನ್ನೆಲುಬಾಗಿ ನಿಂತಿರ್ತಾರೆ. ಅದು ಅವರವರ ಸಿದ್ಧಾಂತಗಳು, ಅವರವರ, ಆಯ್ಕೆ.. ಆದ್ರೆ, ಯಾವುದೋ ಒಂದು ವಿಭಿನ್ನ ನಿಲುವಿನ, ವಿಶಿಷ್ಟ ಸಂಪ್ರದಾಯಗಳ, ವಿಶೇಷ ಕಾಳಜಿ ಇರುವ ಸಂಘಟನೆಯೊಂದರ ಅಧ್ಯಕ್ಷರಾಗಿದ್ದು ಮತ್ಯಾವುದೋ ಪಕ್ಷದ ಜೊತೆ ಜೋತು ಬೀಳೋದು ಸರಿನಾ..? ಈ ಪ್ರಶ್ನೆ ಸದ್ಯ ಮುಂಡಗೋಡಿನ ಪ್ರಜ್ಞಾವಂತ ಸಾಹಿತ್ಯಾಭಿಮಾನಿಗಳದ್ದು. ಅವ್ರು ಸಹದೇಪ್ಪ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ. ರಸ್ತೆಯೋ ಕೆರೆಯೋ..? ಅಸಲು, ಇಂದು ಸಂಜೆ ಸುರಿದ ಭಾರೀ ಮಳೆಯಿಂದ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮಳೆಯ ನೀರು ತುಂಬಿ ಅದ್ವಾನವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ. ಮೊಣಕಾಲಿನವರೆಗೂ ಮಳೆಯ ನೀರು ತುಂಬಿದೆ. ಹೀಗಾಗಿ, ಇದೇನು ರಸ್ತೆಯೋ ಕೆರೆಯೋ ಎಂಬ ಅನುಮಾನದಲ್ಲೇ ವಾಹನ ಸವಾರರು ಪರದಾಡುವಂತಾಗಿದೆ. ಹೀಗಾಗಿ, ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕ್ತಿದಾರೆ ಇಲ್ಲಿನ ಜನ.. ಅವೈಜ್ಞಾನಿಕ ಕಾಲುವೆ..! ಅಸಲು,...
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ, ಇಬ್ಬರ ಮೃತ ದೇಹ ಪತ್ತೆ..!
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಮಲುಗಿದ್ದಾಗ ಗುಡ್ಡ ಕುಸಿದು ನಾಲ್ವರು ಮನೆಯ ಅಡಿಯಲ್ಲ ಸಿಲುಕಿದ್ದರು, ಹೀಗಾಗಿ, ಸದ್ಯ ಇಬ್ಬರ ಶವವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಗಿದ್ದಾರೆ. ಲಕ್ಷ್ಮಿ ನಾಯ್ಕ ಎನ್ನುವವರ ಮನೆಯ ಮೇಲೆ ಗುಡ್ಡ ಕುಸಿತ ವಾಗಿತ್ತು. ಲಕ್ಷ್ಮೀ ನಾಯ್ಕ, ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ, ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಗುಡ್ಡ ಕುಸಿತದಿಂದ ಸಿಲುಕಿಕೊಂಡಿದ್ದರು. ಅವರಲ್ಲಿ ಓರ್ವ ಮಹಿಳೆ, ಓರ್ವ ಪುರುಷನ ಶವ ಹೊರತೆಗೆಯಲಾಗಿದೆ.
ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!
ಮುಂಡಗೋಡ: ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚೌಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಾದಿಯ ಫೈಟ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ನೇತ್ರಾವತಿ ಬಿಸವಣ್ಣವರ್ ರಾಜೀನಾಮೆಯಿಂದ ಖಾಲಿಯಾಗಿದ್ದ ಅಧ್ಯಕ್ಷ ಖುರ್ಚಿಗೆ ಮಂಜುನಾಥ್ ಕಟಗಿ ನೂತನ ಅಧ್ಯಕ್ಷರಾಗಿ ಪಟ್ಟಕ್ಕೆ ಏರೋದು ಬಹುತೇಕ ಕನ್ಫರ್ಮ್ ಆದಂತಾಗಿದೆ. ಅವಿರೋಧ ಆಯ್ಕೆನಾ..? ಬಿಜೆಪಿಯಲ್ಲೇ ಎರಡೆರಡು ಬಣಗಳಾಗಿ ಕಚ್ಚಾಡಿಕೊಂಡಿದ್ದ ಚೌಡಳ್ಳಿ ಪಂಚಾಯತಿಯ ಅಧಿಕಾರದ ತಿಕ್ಕಾಟ, ಇಡೀ ತಾಲೂಕಿನ ಬಿಜೆಪಿ ಮುಖಂಡರುಗಳಿಗೆ ಮುಜುಗರ ತಂದಿಟ್ಟಿತ್ತು. ಕೋರ್ಟ್ ಅಂಗಳಕ್ಕೂ ಹೋಗಿ ಬಂದಿದ್ದ ಅಧ್ಯಕ್ಷರ ಬದಲಾವಣೆ ಪ್ರಹಸನಗಳು ಖುದ್ದು ಸಚಿವ ಶಿವರಾಮ್ ಹೆಬ್ಬಾರ್ ರಿಗೂ ಬಿಸಿ ತುಪ್ಪದಂತಾಗಿತ್ತು. ಹೀಗಾಗಿ, ನಿರ್ಭಿಡೆಯಿಂದ ಎರಡೂ ಬಣಗಳ ಜೊತೆ ಮಾತನಾಡಿ ಕೊನೆಗೂ ಒಳ ಬೇಗುದಿ ಹತೋಟಿಗೆ ತರಲಾಗಿತ್ತು. ಹೀಗಾಗಿ, ಒಳಗಿನ ಒಪ್ಪಂದದಂತೆ ಮಂಜುನಾಥ್ ಕಟಗಿ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಫಿಕ್ಸ್ ಆದಂತಾಗಿದೆ.
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32), ಇವರ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಈ ಮನೆಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ತಡರಾತ್ರಿ ಸುರಿದ ಭರ್ಜರಿ ಮಳೆಯಿಂದ ಅವಘಡ ಉಂಟಾಗಿದೆ. ಭಾರಿ ಮಳೆಯಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಇಲ್ಲಿಗೆ ಜೆಸಿಬಿ ಕೂಡ ಆಗಮಿಸಲು ತಡವಾಯಿತು. ಸ್ಥಳೀಯರೇ ಸೇರಿ ಮನೆಯವರ ರಕ್ಷಣೆ ಮಾಡಲು ಹರಸಾಹಸಪಟ್ಟಿದ್ದಾರೆ. ಇದೀಗ ಸ್ಥಳಕ್ಕೆ ಜೆಸಿಬಿ ಬಂದಿದ್ದು, ಗುಡ್ಡ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಮಟ್ಯಾಶ್, ತಡರಾತ್ರಿ ಅಮೇರಿಕ ಸೇನೆಯಿಂದ ಉಗ್ರನ ಸಂಹಾರ..!
ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಮೇರಿಕಾದ ದಾಳಿಯನ್ನು ಮುಜಾಹಿದ್ ಖಂಡಿಸಿದ್ದಾನೆ. ಈ ಕಾರ್ಯಾಚರಣೆಯ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸೋಮವಾರ ತಡರಾತ್ರಿ ಸ್ಪಷ್ಟಪಡಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಮ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.ಜಗತ್ತಿಗೆ ಕಂಟಕವಾಗಿರುವ...
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!
ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ 4×100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲಿಂದಲೇ, ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಸದ್ಯ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿರೊ ಎನ್.ಎಸ್.ಸಿಮಿ, ಹುರುಪಿನಿಂದಲೇ ಭಾರತ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ. ಹೀಗಾಗಿ, ಈ ಕ್ರೀಡಾಪಟುವಿನ ಸಾಧನೆಗೆ ತಾಲೂಕಿನ ಜನ ಹೆಮ್ಮೆ ಪಡುತ್ತಿದ್ದಾರೆ. ಯಶಸ್ಸು ಸಿಗಲಿ ಅಂತಾ ಹಾರೈಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವಂತಾಗಲಿ ಅಂತಾ ಶುಭ ಹಾರೈಸುತ್ತಿದ್ದಾರೆ.
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ. ಹೀಗಾಗಿ ನಾವು ಬದುಕು ನಡೆಸುವುದೇ ದುಸ್ತರವಾಗಿದೆ. ಈ ಕಾರಣಕ್ಕಾಗಿ, ಕಷ್ಟದಲ್ಲಿರುವ ನಮಗೆ ಗೌರವಧನ ಹೆಚ್ಚಳದೊಂದಿಗೆ ಗೌರವಧನ ಶೀಘ್ರ ಬಿಡುಗಡೆ ಮಾಡಬೇಕು. ಗೌರವಧನ ಬಿಡುಗಡೆಯ ನಂತರ ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ಅಲ್ಲದೇ, ತಿಂಗಳಿಗೆ ಒಂದು ರಜೆ ಪಡೆಯಲು ಅವಕಾಶ ನೀಡಬೇಕು. ಅತಿಥಿ ಶಿಕ್ಷಕರಿಗೂ ಗುರುತಿನ ಚೀಟಿ ವಿತರಣೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಅಂತಾ ಅತಿಥಿ ಶಿಕ್ಷಕರು ಸರ್ಕಾರಕ್ಕೆ ಮನವಿ ಮೂಲಕ...









