ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಇಡೀ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಖುದ್ದು ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟನೆ ಕಾರ್ಯಕರ್ತರೇ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಾಧ್ಯಂತ ಹಲವು ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ, ಜವಾಬ್ದಾರಿಗಳಿಗೆ ಹಿಂಡು ಹಿಂಡಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ನಡುವೆ ನಾಳೆಯೇ ಮಾನ್ಯ “ಬೊಮ್ಮಾಯಿ ಸರ್ಕಾರ” ಒಂದು ವರ್ಷ ಪೂರೈಸಿದ ಸಂಭ್ರಮೋತ್ಸವ ಆಚರಣೆಯಲ್ಲಿ ಬ್ಯುಸಿಯಾಗಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಣಾನೇಂದ್ರ ವಿರುದ್ಧ ಇನ್ನಿಲ್ಲದಂತೆ ಆಕ್ರೋಶ ಹೊರ ಹಾಕ್ತಿದಾರೆ. ಬಹುಶಃ ಇತಿಹಾಸದಲ್ಲಿ ಆಡಳಿತಾರೂಢ ಪಕ್ಷವೊಂದರ ಕಾರ್ಯಕರ್ತರು ತಮ್ಮ ಪಕ್ಷದ ಆಡಳಿತದ ವಿರುದ್ಧವೇ ಇಷ್ಟೊಂದು ಆಕ್ರೋಶ ಹೊರಹಾಕಿದ್ದು ಇದೇ ಮೊದಲು ಇರಬೇಕು. ಹಾಗಿದ್ರೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೇಗೆಲ್ಲ ಆಕ್ರೋಶ ವ್ಯಕ್ತವಾಗ್ತಿದೆ ಗೊತ್ತಾ..? ಹೇಗೆಲ್ಲ ಸರ್ಕಾರದ ಬಿಜೆಪಿ ಕಾರ್ಯಕರ್ತರು ಕಿಡಿ ಕಾರ್ತಿದಾರೆ ಗೊತ್ತಾ..? ಇಲ್ಲಿದೆ ಕೆಲವು ತುಣುಕುಗಳು..
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!
ಉಗ್ನಿಕೇರಿಯಲ್ಲಿ ವಿಶಿಷ್ಟವಾಗಿ ಆಚರಣೆಗೊಂಡ ಕಾರ್ಗಿಲ್ ವಿಜಯ್ ದಿವಸ್..!
ಮುಂಡಗೋಡ: ತಾಲೂಕಿನ ಉಗ್ನಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶ್ರೀರಾಮ ಸೇನೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಲಾಯಿತು. ಹಲವು ದಿನಗಳಿಂದ ಸ್ವಚ್ಚತೆ ಮಾಡದೇ ಇದ್ದಿದ್ದ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಿದ ಕಾರ್ಯಕರ್ತರು, ಟ್ಯಾಂಕ್ ಸುತ್ತಮುತ್ತಲಿನ ಗಿಡಗಂಟಿಗಳನ್ನು ಹಾಗೂ ಕೊಳಚೆಯನ್ನು ಸ್ವಚ್ಚಗೊಳಿಸಿದ್ರು. ಈ ಮೂಲಕ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದ್ರು.
ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!
ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು. ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸಂಘದ ಪ್ರಚಾರಕ ಸತೀಶ್ ಕಟ್ಟಿಯವರಿಗೆ ಶೃದ್ಧಾಂಜಲಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ನಲ್ಲಿ ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ದಿ. ಸತೀಶ್ ಕಟ್ಟಿವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ನಿಧನರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸತೀಶ್ ಕಟ್ಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕಾ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚಿ ಶೃದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಭಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಭಕ್ತಿಪೂರ್ವಕವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.
ಹುನಗುಂದದ ಸಹಕಾರಿ ಧುರೀಣ ಸಿದ್ದಪ್ಪ ಬೀರವಳ್ಳಿ ವಿಧಿವಶ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಸಹಕಾರಿ ಧುರೀಣ, ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿದ್ದಪ್ಪ ಸಣ್ಣಕಲ್ಲಪ್ಪ ಬೀರವಳ್ಳಿ(65) ಹೃದಯಾಘತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿರೋ ಸಿದ್ದಪ್ಪ ಬೀರವಳ್ಳಿ, ಮೃದುಸ್ವಭಾವದ, ಜನಾನುರಾಗಿ ವ್ಯಕ್ತಿತ್ವದವರಾಗಿದ್ದರು. ಈ ಹಿಂದೆ ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಿದ್ದಪ್ಪ ಬೀರವಳ್ಳಿ, ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದರು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರೋ, ಸಿದ್ದಪ್ಪ ಬೀರವಳ್ಳಿಯವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ ಕ್ಲಾಸ್ ನಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯ ಆತಂಕಕ್ಕೂ ಕಾರಣವಾಗಿತ್ತು. ನಿಜ ಅಂದ್ರೆ, ಶಿಕ್ಷಣ ಇಲಾಖೆಯ ದೊಡ್ಡ ದೊಡ್ಡ ತಾಲೂಕಾಧಿಕಾರಿಗಳೇ ಅಲ್ಲಿ ಹಾಜರಿದ್ರು. ಆದ್ರೂ ಆ ಅಧಿಕಾರಿಗಳ ಕಣ್ಣಿಗೆ ಇದೇಲ್ಲ ಕಾಣಲೇ ಇಲ್ಲ. ಅವ್ರು ಸಚಿವರ ಆಗಮನಕ್ಕಾಗಿ ಕಾಯುತ್ತ ಹರಟೆ ಹೊಡೆಯುವುದರಲ್ಲೇ ಬ್ಯುಸಿಯಾಗಿದ್ರು. ತುಂಡು ತುಂಡಾದ ವೈಯರ್..! ಅಂದಹಾಗೆ, ಸಚಿವರು ನೂತನವಾಗಿ ನಿರ್ಮಾಣಗೊಳ್ಳುತ್ತಿರೋ ಶಾಲಾ ಕಟ್ಟಡದ ಶಂಕು ಸ್ಥಾಪನೆಗೆ ಬಂದಿದ್ರು. ಹಾಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಸ್ಪೆಂಡರ್ ಪ್ರೊ ಬೈಕ್, ಬೆಳಗಾಗುವಷ್ಟರಲ್ಲೇ ಕಳ್ಳರು ಎಗರಿಸಿಕೊಂಡು ಹೋಗಿದ್ದರು. ಹೀಗಾಗಿ, ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿರಾಜ್ ಬೊಮ್ಮನಳ್ಳಿ ಕಳೆದು ಹೋಗಿದ್ದ ಬೈಕ್ ಹುಡುಕಿಕೊಡುವಂತೆ ಮನವಿ ಮಾಡಿದ್ದರು. ಹೀಗಾಗಿ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು ಬೈಕ್ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿ ತಂದಿದ್ದಾರೆ. ಈ ಪ್ರಕರಣವನ್ನು ಭೇದಿಸಲು ಎಸ್ಪಿ ಡಾ. ಸುಮನ ಪೆನ್ನೆಕರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್ ಬದರಿನಾಥ, ಶಿರಸಿ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಹೀಗಾಗಿ, ಕಾರಲ್ಲಿದ್ದ ಮಹಿಳೆಯರೂ ಸೇರಿ ಐವರು ಕಾರಲ್ಲೇ ಸಿಲುಕಿದ್ದಾರೆ. ಹೊರಬರಲು ಚೀರಾಟ ಶುರುವಿಟ್ಟಿದ್ದಾರೆ. ತಕ್ಷಣವೇ ಸ್ಥಳೀಯರು ಪಲ್ಟಿಯಾದ ಕಾರನ್ನು ಮೇಲಕ್ಕೆ ಎತ್ತಿ ಕಾರಲ್ಲಿದ್ದವರನ್ನು ರಕ್ಷಿಸಿದ್ದಾರೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನ ಎಂಜಿನ್ ನಲ್ಲಿ ಹೊಗೆ ತುಂಬಿಕೊಂಡು ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು, ಘಟನೆಯಲ್ಲಿ ತೀವ್ರ ಗಾಯದಿಂದ ಬಳಲುತ್ತಿದ್ದ ಮಹಿಳೆಯರೂ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









