ಮುಂಡಗೋಡ: ತಾಲೂಕಿನ ಸಾಲಗಾಂವ್ ಬಾಣಂತಿದೇವಿ ದೇವಸ್ಥಾನದ ಹತ್ತಿರ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ನಂದಿಪುರ ಗ್ರಾಮದ 26 ವರ್ಷ ವಯಸ್ಸಿನ ಪವಿತ್ರ ಶಿವಾನಂದ ಹರಕುಣಿ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಸಾಲಗಾಂವ ಬಾಣಂತಿದೇವಿ ಮತ್ತು ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು ಮಾಡಿಸಲಾಯಿತು. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಸಿ. ಬಳೂರ್, ಚಾಲಕ ಪ್ರಕಾಶ್ ಬಾಗೇವಾಡಿ ಸೇರಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಸದ್ಯ, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದು, ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಸಾಲಗಾಂವ್ ಬಾಣಂತಿ ದೇವಿ ದೇವಸ್ಥಾನದ ಬಳಿ ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆ. ಲಕ್ಷ್ಮಣ ಸವದಿ, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ಘೋಷಣೆ ಮಾಡಿದೆ. ಲಿಂಗಾಯತ ಕೋಟಾದಡಿ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ., ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಹಾಗೂ ನಾಯಕ್ ಕೋಟಾದಡಿ ಹೇಮಲತಾ ನಾಯಕ್ ಗೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ.
ಇಂದು ಮತ್ತೆ ಭಾರೀ ಮಳೆಯಾಗುವ ಸಂಭವ, ಎಲ್ಲೇಲ್ಲಿ ಮಳೆಯಾಗತ್ತೆ ಗೊತ್ತಾ..?
ಬೆಂಗಳೂರು: ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇದು ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದ್ರಂತೆ ದಾವಣಗೇರೆಯಲ್ಲಿ ಹೆಚ್ಚು ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕೊಡಗು,ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮುನ್ಸೂಚನೆ ನೀಡಲಾಗಿದೆ.
ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆಯಾ..? ಆ ನಾಲ್ವರು ಆಕಾಂಕ್ಷಿಗಳಿಗೆ ಬಿಜೆಪಿಯ ಪ್ರಮುಖ ನಾಯಕರುಗಳಿಂದ ಪೋನ್ ಕರೆ ಬಂದಿದ್ದು, ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುವಂತೆ ಕರೆ ಮಾಡಲಾಗಿದೆ ಅನ್ನೊ ಮಾತುಗಳು ಕೇಳಿ ಬಂದಿವೆ. ಲಿಂಗರಾಜ್ ಪಾಟೀಲ್, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಸಿ. ಮಂಜುಳಾಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ. ಲಿಂಗಾಯತ ಕೋಟಾದಡಿ ಲಿಂಗರಾಜ್ ಪಾಟೀಲ್ ಗೆ ಟಿಕೆಟ್ ಫಿಕ್ಸ್, ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಕೋಟಾದಡಿ ಸಿ.ಮಂಜುಳಾ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ಫಿಕ್ಸ್ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿ ಬಂದಿವೆ.
ಭೀಕರ ರಸ್ತೆ ಅಪಘಾತ 8 ಜನರ ದುರ್ಮರಣ, 25 ಕ್ಕೂ ಹೆಚ್ಚು ಜನ್ರಿಗೆ ಗಾಯ, ಹಲವರ ಸ್ಥಿತಿ ಚಿಂತಾಜನಕ..!
ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಂಟು ಜನ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿಯೇ ಆರು ಜನರ ಸಾವನ್ನಪ್ಪಿದ್ದರೆ, ಓರ್ವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ. ಘಟನೆಯಲ್ಲಿ 25 ಜನರಿಗೆ ಗಾಯಗಳಾಗಿವೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ ಸಣ್ಣಪುಟ್ಟ ಗಾಯಗಳಾಗಿದೆ. ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಸಿ ಬಳೂರು ಮತ್ತು ಚಾಲಕ ಪ್ರಕಾಶ ಬಾಗೇವಾಡಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಂದಿಕಟ್ಟಾದ ಈ ಆರೋಗ್ಯ ಕೇಂದ್ರದ “ನರ್ಸಮ್ಮ” ಬರೋದು ಲೇಟಾದ್ರೂ, ಹೋಗೋದು ಮಾತ್ರ ಫಸ್ಟೇ..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಅನುಷ್ಟಾನಗೊಂಡಿರೋ “ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಇದ್ದೂ ಇಲ್ಲದಂತಾಗಿದೆ. ಇಲ್ಲಿ ನೇಮಕಗೊಂಡಿರೋ ಸ್ಟಾಪ್ ನರ್ಸ್ ಮೇಡಂ ಈ ಆರೋಗ್ಯ ಕೇಂದ್ರದ ಆರೋಗ್ಯವನ್ನೇ ಹಾಳು ಮಾಡಿದ್ದಾರೆ ಅಂತಿದಾರೆ ಇಲ್ಲಿನ ಜನ. ಯಾಕಂದ್ರೆ, “ತಮಗಿಷ್ಟ ಬಂದಾಗ ಬರೋದು, ಬೇಕಾದಾಗ ಹೋಗೋದು” ಅನ್ನೋ ರೂಢಿ ಇಟ್ಕೊಂಡಿರೋ ನರ್ಸಮ್ಮ ಇಲ್ಲಿನ ಜನ್ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋದು ಮದ್ಯಾಹ್ನ..! ಅಂದಹಾಗೆ, ನಂದಿಕಟ್ಟಾ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸ್ಥಾಪನೆಗೊಂಡಿರೋ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಓರ್ವ ಅಟೆಂಡರ್ ಹಾಗೂ ಮುಖ್ಯವಾಗಿ ಓರ್ವ ಸ್ಟಾಪ್ ನರ್ಸ್ ನಿಯೋಜನೆ ಮಾಡಲಾಗಿದೆ. ನಿತ್ಯವೂ ಇಲ್ಲಿನ ರೋಗಿಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆರೈಕೆ ಮಾಡಲು ಅಂತಾ ನರ್ಸ್ ಮೇಡಂ ನಿಯೋಜನೆಗೊಂಡಿದ್ದಾರೆ. ಆದ್ರೆ, ಇಲ್ಲಿ ಒಂದು ದಿನವೂ ಈ ತಾಯಿ ಸಮಯಕ್ಕೆ ಸರಿಯಾಗಿ ಬಂದೇ ಇಲ್ಲವಂತೆ. ಇದು ಸರಿನಾ..? ಅಂದಹಾಗೆ, ಬೆಳಿಗ್ಗೆ 9.30 ಕ್ಕೆ ನಿತ್ಯವೂ ಡ್ಯೂಟಿಗೆ ಹಾಜರಾಗಿ, ಸಂಜೆ 4.30 ವರೆಗೂ ತಮ್ಮ ಕರ್ತವ್ಯ ನಿಭಾಯಿಸಬೇಕಿರೋದು ಇವ್ರ...
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು ಪ್ರಾರಂಭವಾಗತ್ತದೆ. ಹೀಗಾಗಿ ಇಡೀ ರೈತನ ಕುಟುಂಬಗಳು ಈಗ ಗೋವಿನಜೋಳದ ಒಣ ಹಾಕುವ ಕೆಲಸ ಹಾಗು ಮತ್ತೆ ಕೂಡಿಡುವ ಕೆಲಸದಲ್ಲೇ ಕಾಲ ಕಳೆಯುವಂತಾಗಿದೆ.
ಪಾಳಾ ಮಾವು ಬೆಳೆಗಾರರ ಮಾರುಕಟ್ಟೆಗೆ ನೂತನ ಐಡಿಯಾ..!
ಮುಂಡಗೋಡ: ತಾಲೂಕಿನ ಪಾಳಾದ ಆಪೂಸ್ ಮಾವಿನ ಹಣ್ಣು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದೆ. ಆದ್ರೆ ಪ್ರಸಕ್ತ ವರ್ಷದ ನಿರಂತರ ಮಳೆಯಿಂದ ಮಾವಿನ ಬೆಳೆಗಾರ ಸಂಕಷ್ಟದಲ್ಲಿದ್ದಾನೆ. ಮಾವಿಗೆ ಬೇಡಿಕೆ ಕಡಿಮೆಯಾಗಿದೆ. ಅಲ್ಲದೇ ಮಳೆಯಿಂದ ಮಾವು ಕೊಳೆತು ಹೋಗುತ್ತಿದೆ. ಹೀಗಾಗಿ ಇಲ್ಲಿನ ಮಾವು ಬೆಳೆಗಾರರು ಒಗ್ಗಟ್ಟಾಗಿ ಮಾವು ಬೆಳೆಗಾರರೇ ಖುದ್ದಾಗಿ ಸಂಘವೊಂದನ್ನ ಕಟ್ಟಿಕೊಂಡಿದ್ದಾರೆ. ಈ ಮೂಲಕ ತಾವು ಬೆಳೆದ ಮಾವುಗಳನ್ನು ಯಾವುದೇ ರಾಸಾಯನಿಕ ಬಳಸದೇ ಹಣ್ಣುಗಳನ್ನು ದಾಸ್ತಾನು ಮಾಡಿ, ಅದಕ್ಕಾಗೇ ರಕ್ಷಣಾ ವಿಧಾನಗಳನ್ನು ಅನುಸರಿಸಿ, ತಮ್ಮ ಮಾವುಗಳನ್ನು ವ್ಯವಸ್ಥಿತವಾಗಿ ಮಾರಾಟ ಮಾಡಲು ರೆಡಿಯಾಗಿದ್ದಾರೆ. ಈ ಮೂಲಕ ದಲ್ಲಾಳಿಗಳು ಹಾಗೂ ಮದ್ಯವರ್ತಿಗಳ ಹಾವಳಿಯಿಂದ ತಮಗೆ ಆಗುತ್ತಿದ್ದ ನಷ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಯಶಸ್ಸು ಕಾಣುತ್ತಿದ್ದಾರೆ.
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ. ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಟಿ ಭತ್ತಕ್ಕೆ ಹಾನಿ..! ಇನ್ನು ಇದೇ ಗ್ರಾಮದ ರೈತ ಪುಟ್ಟಪ್ಪ ದೇವೇಂದ್ರಪ್ಪ ಗುಲ್ಯಾನವರ ಎಂಬುವವರ ಒಂದು ಎಕರೆ ನಾಟಿ ಭತ್ತದ ಗದ್ದೆಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.









