ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು. ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು.. ಪಿಎಸ್ಐ ಅಕ್ರಮ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ, ತನಿಖೆ ಮುಗಿಯುವವರೆಗೂ ತಾಳ್ಮೆಯಿಂದ ಇರಬೇಕು, ಈಗಾಗಲೇ ಸಾಕಷ್ಟು ಆರೋಪಿಗಳನ್ನ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಇನ್ನೂ ಹಲವರನ್ನು ಈ ಕೇಸ್ ನಲ್ಲಿ ಬಂಧಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಹೀಗಿರುವಾಗ ಇಲ್ಲ ಸಲ್ಲದ ಆರೋಪ ಮಾಡುವುದು ಸರಿಯಲ್ಲ ಅಂತಾ ಇದೇ ವೇಳೆ ಶಿವರಾಮ್ ಹೆಬ್ಬಾರ್ ಹೇಳಿದ್ರು.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ವಿ.ಎಸ್.ಪಾಟೀಲ್ “ಹಸ್ತ”ಲಾಘವಕ್ಕೆ ವೇದಿಕೆ ಸಜ್ಜು, ಅಷ್ಟಕ್ಕೂ “ಕೈ”ಮುಂದೆ ಪಾಟೀಲರ ಕಂಡೀಶನ್ಸ್ ಏನು..?
ಯಲ್ಲಾಪುರ ಕ್ಷೇತ್ರದಲ್ಲಿ ಸದ್ಯ ವಿಲಿ ವಿಲ ಒದ್ದಾಡುತ್ತಿರೋ ಕೈ ಪಾಳಯಕ್ಕೆ ಆಕ್ಸಿಜನ್ ಒದಗಿಸಬಲ್ಲ ವಿದ್ಯಮಾನಗಳು ಒಳಗೊಳಗೆ ಜಾರಿಯಲ್ಲಿವೆ. ಬಿಜೆಪಿಯ ಮಾಜಿ ಶಾಸಕ ಹಾಲಿ ವಾಯುವ್ಯ KSRTC ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಆದ್ರೆ, ಚಾಣಾಕ್ಷ ವಿ.ಎಸ್. ಪಾಟೀಲ್ ಸುಮ್ಮ ಸುಮ್ಮನೇ ಕಾಂಗ್ರೆಸ್ ಸೇರ್ತಿಲ್ಲ, ಬದಲಾಗಿ ಅದಕ್ಕೊಂದು ಬಲಿಷ್ಟ “ಕಣ” ಕಾರ್ಯತಂತ್ರ ರೂಪಿಸಿಕೊಂಡೇ ಕೈ ಪಡೆಗೆ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಪ್ರಶಾಂತ್ ಯಡವಟ್ಟು..? ನಿಜ, ಸದ್ಯ ಯಲ್ಲಾಪುರ ಕಾಂಗ್ರೆಸ್ ಪರಿಸ್ಥಿತಿ ಚಿಂತಾಜನಕವಾಗಿದೆ. ಪ್ರಶಾಂತ್ ದೇಶಪಾಂಡೆಯವರ ಯಡವಟ್ಟು ನಿರ್ಧಾರಗಳಿಂದ ಈಗಷ್ಟೇ ಬಲಿಷ್ಟವಾಗುತ್ತಿದ್ದ “ಕೈ” ಬಲ ಕಳೆದುಕೊಂಡಿದೆ. ಪಕ್ಷಕ್ಕಾಗಿ ಹಗಲು ರಾತ್ರಿ ಬೆವರು ಹರಿಸಿದ್ದವರನ್ನು ಒಂದೇ ಏಟಿನಲ್ಲಿ ಚಿಮ್ಮಿ ಹಾಕಿದ್ದಾರೆ ಪ್ರಶಾಂತಣ್ಣ. ಹಾಗಂತ, ಇಲ್ಲಿ ನಾವು ಈ ಮಾತು ಹೇಳ್ತಿಲ್ಲ. ಬದಲಾಗಿ, ನೊಂದ ಕಾರ್ಯಕರ್ತರೇ ಬಾಯಿ ಬಾಯಿ ಬಡಕೊತಿದಾರೆ. ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಅಕ್ಷರಶಃ ಎರಡು ಹೋಳಾಗಿದೆ. ಪ್ರಶಾಂತ್ ದೇಶಪಾಂಡೆ ಮುಂದಿನ ಚುನಾವಣೆಗೆ...
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!
ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್ ಮೇಲೆ ಹೋಗುತ್ತಿದ್ದ ಮೂವರು, ತಡಸ ಕಡೆಯಿಂದ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮಕ್ಕೆ ಬರುತ್ತಿದ್ದ ಉಮೇಶ್ನ ಬೈಕ್ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಗಳು ನುಜ್ಜು ಗುಜ್ಜಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡು ನರಳುತ್ತಿದ್ದ ವೇಳೆ ಅದೇ ಮಾರ್ಗದಿಂದ ತೆರಳುತ್ತಿದ್ದ ರಾಜು ಹಾಗೂ ಅವರ ಸ್ನೇಹಿತರು ಉಪಚರಿಸಿದ್ದಾರೆ. ಅಲ್ದೆ ಅಂಬ್ಯುಲೆನ್ಸ್ ಹಾಗೂ ಪೊಲೀಸರಿಗೆ ಕರೆಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ. ಇನ್ನು...
ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.
ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ ದಂಪತಿಗಳಿಬ್ಬರು ದಾರುಣ ಸಾವು ಕಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಆತಂಕಕ್ಕೆ ಕಾರಣವಾಗಿದೆ. ಆದ್ರೆ, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಅನಾಹುತಗಳು ಸಂಭವಿಸಿಲ್ಲ.
ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪುಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೈನಳ್ಳಿ ಒಂದು ಸ್ಥಾನಕ್ಕೆ ಚುನಾವಣೆ..! ಅದ್ರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 8 ಗ್ರಾಮ ಪಂಚಾಯತಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅದ್ರಲ್ಲಿ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪಚುನವಾಣೆ ನಡೆಯಲಿದೆ. ಯಾವಾಗ ಪ್ರಕ್ರಿಯೆ ಶುರು..? ಮೇ 5 ರಂದೇ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆ...
ಇಂದೂರಿನಲ್ಲಿ ಸಿಡಿಲಾಘಾತ, ಹೊತ್ತಿ ಉರಿದ ತೆಂಗಿನ ಮರಗಳು..!
ಮುಂಡಗೋಡ: ತಾಲೂಕಿನ ಹಲವೆಡೆ ಮಳೆ ಗಾಳಿ, ಸಿಡಿಲಿನ ಅರ್ಭಟ ಜೋರಾಗಿತ್ತು. ತಾಲೂಕಿನ ಇಂದೂರು ಗ್ರಾಮದಲ್ಲಿ ಭರಸಿಡಿಲು ಬಡಿದು ಎರಡು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಇಲ್ಲಿನ ಕಲ್ಮೇಶ್ ದುಗ್ಗಳ್ಳಿ ಎಂಬುವವರ ಮನೆಯ ಹಿತ್ತಲಿನಲ್ಲಿರೋ ತೆಂಗಿನ ಮರಕ್ಕೆ ಭರಸಿಡಿಲು ಬಡಿದು ಹೊತ್ತಿ ಉರಿದಿವೆ. ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ. ಹೀಗಾಗಿ ಆತಂಕಗೊಂಡ ಗ್ರಾಮಸ್ಥರು ನಿಬ್ಬೆರಗಾಗಿ ಆ ಸಿಡಿಲಾಘಾತದ ರೋಮಾಂಚಕ ಕ್ಷಣ ನೋಡಿದ್ದಾರೆ. ಸಿಡಿಲಿನ ಹೊಡೆತಕ್ಕೆ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.









