ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.
Top Stories
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ ಸೋಂಕು ದೃಢ ಪಟ್ಟಿದೆ.
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?
ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ ಮತ್ತೋರ್ವ ಯುವಕ ಏಕಾಏಕಿ ಬಂದು ಬಸ್ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ದೆ, ಬಸ್ ನಿಂದ ಚಾಲಕನನ್ನು ಎಳೆದು ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪರಿಣಾಮ ಚಾಲಕನ ಕೈಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಯುವಕರು ಪರಾರಿ..? ಹಾಗೆ, ಚಾಲಕನ ಮೇಲೆ ಹಲ್ಲೆ ಮಾಡಿ ಇನ್ನೇನು ಘಟನೆ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತೆ ಅಂತಾ ತಿಳಿದ ತಕ್ಷಣವೇ ಹಲ್ಲೆಮಾಡಿರೋ ಇಬ್ಬರೂ ಯುವಕರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ....
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ ಮಾಡಿದ್ದಾರೆ ಅಂತಾ ದೂರುದಾರರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಮುಂಡಗೋಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಅಂತಾ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇಡೀ ಟಿಬೇಟಿಯನ್ ಕಾಲೋನಿಯ ಗಲ್ಲಿಗಳು ಈಗ ಭಿಕೋ ಅಂತಿವೆ. ಜನರು ಹೊರಗಡೆ ಅನಗತ್ಯ ತಿರುಗುವುದನ್ನು ನಿಲ್ಲಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸಂದೇಶ ಕಳಿಸಿದ್ದಾರೆ. ನಿರ್ಲಕ್ಷ ತೋರಿರುವ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ
ವಿದ್ಯಾರ್ಥಿಗಳಿಗೂ ಕಾಡ್ತಿದೆ ಕೊರೋನಾ..!! ಮುಂಡಗೋಡ ತಾಲೂಕಿನಲ್ಲಿ ಇಂದು 53 ಪಾಸಿಟಿವ್, ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಇಂದು ಕೊರೋನಾ ಮಹಾ ಸ್ಪೋಟಗೊಂಡಿದೆ. ತಾಲೂಕಿನಲ್ಲಿ ಇಂದು 53 ಜನರಿಗೆ ಸೋಂಕು ದೃಢಪಟ್ಟಿದೆ. ಈ ಬಾರಿ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಮಾಣ ಗಣನೀಯವಾಗಿ ಏರಿದೆ. ಅದ್ರಲ್ಲೂ ಲೊಯೊಲಾ ಶಿಕ್ಷಣ ಕೇಂದ್ರದ ಪ್ರೌಢಶಾಲೆ, ಕಾಲೇಜು ವಿಭಾಗದ ಬರೋಬ್ಬರಿ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಯಾವ್ಯಾವ ಶಾಲೆ, ಎಷ್ಟು ವಿದ್ಯಾರ್ಥಿಗಳು? ತಾಲೂಕಿನ ಬಡ್ಡಿಗೇರಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಐವರು, ಪಾಳಾ ಉರ್ದು ಶಾಲೆಯ ಇಬ್ಬರು, ಕಲಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಹಾಗೂ ಇಂದೂರಿನ ಓರ್ವ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಪುಟ್ಟ ಮಕ್ಕಳಿಗೂ ಸೋಂಕು..! ಇನ್ನು, ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 4 ವರ್ಷದ ಓರ್ವ ಬಾಲಕ, ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ವರ್ಷದ ಮತ್ತೋರ್ವ ಬಾಲಕನಿಗೂ ಸೋಂಕು ದೃಢ ಪಟ್ಟಿದೆ. ಅಲ್ಲದೇ, ಕಲಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 7...
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..!
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರಲಾಗಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಶಿವಪ್ಪ ಸಾಥ್ ನೀಡಿದ್ರು.









