School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಬುಧವಾರ, ಅಗಷ್ಟ 20 ರಂದು ಮುಂಡಗೋಡ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ, ಜಿಲ್ಲೆಯ 11 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಂತರ, ಮುಂಡಗೋಡ ತಾಲೂಕಾಡಳಿತ ಮುಂಡಗೋಡ ತಾಲೂಕಿನ ಶಾಲೆಗಳಿಗೆ ಮಳೆಯ ರಜೆ ಅಂತಾ ಘೋಷಣೆ ಮಾಡಿದ್ದಾರೆ.
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ, ಅಗಷ್ಟ 19 ರಂದು ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿನಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ.
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಬಸ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಏಳು ಮಂದಿ ಪ್ರಯಾಣಿಕರಿಗೆ ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ, ಯಲ್ಲಾಪುರ ಸಿಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು ಶಿಗ್ಗಾವ್ ಪಟ್ಟಣದ ಅಪೋಲೋ ಫಾರ್ಮಸಿ ಎದರು ಕರೆದು, ಕಣ್ಣಿಗೆ ಕಾರಪುಡಿ ಎರಚಿ ಮಚ್ಚಿನಿಂದ ಹೊಡೆದಿದ್ದಾನೆ. ಅದೃಷ್ಟವಶಾತ್ ಗಂಗಪ್ಪ ಮಚ್ಚಿನ ಏಟಿನಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪಾರಾಗಿದ್ದಾನೆ. ಕತ್ತಿಗೆ ಬೀಳಬೇಕಾದ ಮಚ್ಚಿನ ಏಟು ಬೆನ್ನಿಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೀಗಾಗಿ, ಗಾಯಾಳುವನ್ನು ತಕ್ಷಣವೇ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿ ಮಹ್ಮದ್ ಸಲೀಂ ನನ್ನು ಪೊಲೀಸ್ರು ಬಂಧಿಸಿದ್ದಾರೆ. ಇದನ್ನೂ ಓದಿ👉ಹೆಂಡತಿಯ ಅಪ್ಪ,...
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ತನ್ನ ನೋವನ್ನು ವಿಡಿಯೋ ಮೂಲಕ ಹಂಚಿಕೊಂಡಿರೋ ಶಿವರಾಜ್, ಕಾರಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹುಬ್ಬಳ್ಳಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸುದ್ದಿ ತಿಳಿದ ಅಕ್ಷಯ ಚಲವಾದಿ ಹಾಗೂ ಸ್ನೇಹಿತರು, ಕಾರಲ್ಲಿ ಒದ್ದಾಡುತ್ತಿರೋದನ್ನು ನೋಡಿ ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..! ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಳಕ್ಕೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು ಹಾಗೂ ಸಂಬಂಧಿಕರಲ್ಲಿ ಹುಡುಕಾಡಿ ವಿಚಾರಿಸಿದ್ರೂ ಈವರೆಗೂ ಸಿಕ್ಕಿಲ್ಲ, ಹೀಗಾಗಿ, ಹುಡುಕಿ ಕೊಡುವಂತೆ ಅವ್ರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ👉ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ED Raid; ಕಾರವಾರ -ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆಯ ಮೇಲೆ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ದಾಳಿಯ ಸಮಯದಲ್ಲಿ ಶಾಸಕ ಸತೀಶ್ ಸೈಲ್ ಅವರು ಅಧಿವೇಶನಕ್ಕಾಗಿ ಬೆಂಗಳೂರಿಗೆ ತೆರಳಿದ್ದ ಕಾರಣ ಮನೆಯಲ್ಲಿ ಇರಲಿಲ್ಲ. ಇಡಿ ಅಧಿಕಾರಿಗಳ ತಂಡವು 4-6 ಕಾರುಗಳಲ್ಲಿ ಬಂದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ, ಮತ್ತು ಮನೆಯ ಮುಂಭಾಗದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ಪ್ರಕರಣದಲ್ಲಿ ಸತೀಶ್ ಸೈಲ್ ಅವರು ಈ ಹಿಂದೆ ಜಾಮೀನಿನ ಮೇಲೆ ಹೊರಗಿದ್ದರು. ಇದಕ್ಕೂ ಮೊದಲು, ಬೇಲೆಕೇರಿ ಅದಿರು ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರನ್ನು ದೋಷಿಯೆಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು, ಆದರೆ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಈ ದಾಳಿಯು ಕರ್ನಾಟಕ, ಗೋವಾ, ಮತ್ತು ಮುಂಬೈನಲ್ಲಿ 15 ಸ್ಥಳಗಳಲ್ಲಿ ನಡೆಯುತ್ತಿದೆ ಎಂದು ಇಡಿ...
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ ಹುಬ್ಬಳ್ಳಿ ಕಡೆಗೆ ಗಾಂಜಾ ಮಾರಾಟ ಮಾಡಲು ಹೊರಟಿದ್ದವರ ಹಿಂದೆ, ಹಾನಗಲ್ಲಿನ ಚೋರ್ ಇಮ್ರಾನ್ ಕೈಚಳಕ ಇತ್ತು. ಆತನಿಂದಲೇ ಗಾಂಜಾ ಪಡೆದುಕೊಂಡು ಮಾರಾಟ ಮಾಡಲು ಹೊರಟಿದ್ದ ಇಬ್ಬರು ಮುಂಡಗೋಡ ಪೊಲೀಸರ ಬಲೆಗೆ ಬಿದ್ದಿದ್ದಾರೆ. 60 ಸಾವಿರ ಮೌಲ್ಯದ್ದು..! ಇನ್ನು, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಬಳಿ PSI ಪರಶುರಾಮ್ ಮಿರ್ಜಿಗಿ, ಮತ್ತವರ ಕ್ರೈಂ ಟೀಂ ಗೆ ಸಿಕ್ಕಿಬಿದ್ದಿರೋ ಆರೋಪಿಗಳ ಹತ್ರ ಇದ್ದ ಗಾಂಜಾ ಹಾನಗಲ್ಲಿನಿಂದ...