Minority Scheme : ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಸತಿ ಇಲಾಖೆ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಈ ಕುರಿತಾದ ಪ್ರಸ್ತಾಪವನ್ನು ಸಂಪುಟ ಸಭೆಯಲ್ಲಿ ಇಟ್ಟಿದ್ದರು. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ. ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ ಅವರು, “ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..!
ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಎನ್. ಚಲವರಾಯ ಸ್ವಾಮಿ
Agriculture News; ಕಾರವಾರ; ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು. ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿ ಹೊಂದಲಾಗಿದೆ. ಕಳೆದ 2 ವರ್ಷದಲ್ಲಿ ರೈತರಿಗೆ 344 ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 50 ಲಕ್ಷ ಹಾಗೂ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ. ಸ್ಪಿಂಕ್ಲರ್ ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು,...
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
Agriculture News; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಲ್ಲಿರುವ ಭೂಮಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಸಾವಯವ ರೀತಿಯಲ್ಲಿ ಬಳಕೆ ಮಾಡುವ ಮೂಲಕ ಮೂಲಕ ದೇಶದ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಹೇಳಿದರು. ಅವರೂ ಮಂಗಳವಾರ, ಜೋಯಿಡಾದಲ್ಲಿ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಸಂಬoಧಿತ ಇಲಾಖೆಗಳು ಹಾಗೂ ಐ.ಸಿ.ಎ ಆರ್- ಕೃಷಿ ವಿಜ್ಞಾನ ಕೇಂದ್ರ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮದ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜೋಯಿಡಾ ತಾಲೂಕು 70% ಅರಣ್ಯದಿಂದ ಕೂಡಿದ್ದು ಇಲ್ಲಿನ ವಾತಾವರಣ ಬೇರೆ ಕಡೆ ಎಲ್ಲೂ ನೋಡಲು ಸಾಧ್ಯವಿಲ್ಲ, ನೈಸರ್ಗಿಕವಾದ ಭೂಮಿ, ಅರಣ್ಯ ಪ್ರದೇಶ, ಪರಿಸರ ನೈಸರ್ಗಿಕ ಸಂಪತ್ತಿನಿoದ ಕೂಡಿದ್ದು, ಇಲ್ಲಿನ ಭೂಮಿಯಲ್ಲಿ ರಾಸಾಯನಿಕವಲ್ಲದ ಕೃಷಿ ಚಟುವಟಿಯಲ್ಲಿ ತೊಡಗಿಸಿಕೊಂಡು, ಸಂಪೂರ್ಣ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲು ರೈತರ ಸಹಕಾರವು ಅಗತ್ಯವಾಗಿದೆ ಎಂದರು....
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ ಆಕ್ರೋಶ.. ಹೌದು, ಮುಂಡಗೋಡ ತಾಲೂಕಿನಲ್ಲಿ ರೈತರ ಗದ್ದೆಗಳಲ್ಲಿನ ಬೋರವೆಲ್ ಗೆ ಅಳವಡಿಸಿದ, ಕೇಬಲ್ ಕಳ್ಳತನವಾಗ್ತಿದೆ. ನಿತ್ಯವೂ ಒಂದಿಲ್ಲೊಂದು ಕಡೆ ಕಳ್ಳರು ಕೈಚಳಕ ತೋರಿಸ್ತಾನೇ ಇದಾರೆ. ಅದ್ರಲ್ಲೂ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಕಳ್ಳರ ಕರಾಮತ್ತುಗಳು ರೈತರ ನಿದ್ದೆಗೆಡಿಸಿವೆ. ಕಳ್ಳತನ ನಡೆದಾಗಲೊಮ್ಮೆ ಪೊಲೀಸರಿಗೆ ದೂರು ಕೊಡೋದು, ಪೊಲೀಸ್ರು ಬಂದು ಪರಿಶೀಲನೆ ಮಾಡೋದು, ಅಷ್ಟೆ ಬಿಟ್ರೆ ಬೇರೆ ಏನಂದ್ರೆ, ಏನೂ ನಡೆಯುತ್ತಿಲ್ಲ. ಕೇವಲ್...
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
Rain Problem News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಿರುಸಾಗಿದ್ದು, ಧಾರಾಕಾರ ಮಳೆಗೆ ಮಲೆನಾಡು ಭಾಗದ ವಿವಿದೆಡೆ ಗುಡ್ಡ ಕುಸಿತ ಮುಂದುವರಿದಿದೆ.ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ದೇವಿಮನೆ, ಶೃಂಗೇರಿ ತಾಲೂಕಿನ ನೆಮ್ಮಾರ್, ಮಂಗಳೂರಿನ ಕದ್ರಿ, ಕಂಕನಾಡಿಗಳಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲೂ ಮಳೆ ಅಬ್ಬರಿಸುತ್ತಿದ್ದು, ಭಟ್ಕಳದಲ್ಲಿ 50 ವರ್ಷದ ವೃದ್ಧ ಹಾಗೂ 2 ವರ್ಷದ ಚಿಕ್ಕ ಮಗು ನೀರಲ್ಲಿ ಕೊಚ್ಚಿಹೋಗಿದ್ದಾರೆ. ಬೆಳ್ತಂಗಡಿ ಸಮೀಪ ಮರ ಬಿದ್ದು, ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಇದೇ ವೇಳೆ, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6, ಮಂಗಳೂರಿನ 5, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಂಗಳವಾರ ಜೂನ್ 17 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ಲಗದ್ದೆ ಗ್ರಾಮದ ರಾಮಾನಗುಳಿ ಮಜರೆಯ ಕಾರವಾರ –...
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡ ತಾಲೂಕಿನಲ್ಲೂ ನಿರಂತರ ಮಳೆಯಾಗುತ್ತಿದ್ದು, ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಗಳಿಗೆ ರಜೆ ಕೊಡಬಹುದು ಅನ್ನೋ ನಿರಿಕ್ಷೆ ಇತ್ತು. ಆದ್ರೆ, ಮುಂಡಗೋಡ ತಾಲೂಕಾಡಳಿತ ಅದ್ಯಾಕೋ ಏನೋ ಇಲ್ಲಿ ರಜೆಯ ಶಿಫಾರಸು ಮಾಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
Sugar Factory News; ಕಾರವಾರ: ಜಿಲ್ಲೆಯ ಕಬ್ಬು ಬೆಳಗಾರರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಕುರಿತಂತೆ, ಸದ್ರಿ ಸ್ಥಳದ ಪರಿಶೀಲನೆ ನಡೆಸುವಂತೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಕಬ್ಬು ಬೆಳಗಾರರ ಮತ್ತು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಳಿಯಾಳದ ಐ.ಇ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ ಯಂತ್ರವನ್ನು ಅಳವಡಿಸಿದ್ದು ಇದರಿಂದಾಗಿ ಕಬ್ಬಿನ ತೂಕದ ಪ್ರಮಾಣದ ಪ್ರತಿ ಬಾರಿ ಗೊಂದಲವಾಗುತ್ತಿದೆ, ಇದನ್ನು ಬಗೆಹರಿಸುವ ದೃಷ್ಠಿಯಿಂದ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಬಗ್ಗೆ ಕಬ್ಬು ಬೆಳೆಗಾರರ ಪ್ರತಿನಿಧಿಗಳು ಕೋರಿದ್ದು, ಈ ಕುರಿತಂತೆ ಕಾರ್ಖಾನೆಯ ಮುಂಭಾಗದಲ್ಲಿ ಸೂಕ್ತ ಸ್ಥಳ ಇಲ್ಲವೆಂದು ಕಾರ್ಖಾನೆಯ ಪ್ರತಿನಿಧಿಗಳು ತಿಳಿಸಿದರು. ಈ ಬಗ್ಗೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ...
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
Stock Market Highlights : ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸತತ ನಷ್ಟದಿಂದ ಚೇತರಿಸಿಕೊಂಡಿದೆ. ಕಳೆದ ಕೆಲವು ಸೆಷನ್ಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿದ್ದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕವು ಸೋಮವಾರ ಜಿಗಿತ ಸಾಧಿಸಿದೆ. ಎರಡು ಪ್ರಮುಖ ಸೂಚ್ಯಂಕಗಳು ಸುಮಾರು 1% ನಷ್ಟು ಹೆಚ್ಚಾಗಿವೆ. ಸೆನ್ಸೆಕ್ಸ್ ಮಾರುಕಟ್ಟೆ ಮುಕ್ತಾಯಕ್ಕೆ 677 ಪಾಯಿಂಟ್ಸ್ ಅಥವಾ 0.84% ಏರಿಕೆಗೊಂಡು 81,796 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ 50 ಸೂಚ್ಯಂಕವು 227.90 ಪಾಯಿಂಟ್ಸ್ ಅಥವಾ 0.90% ಹೆಚ್ಚಾಗಿ 24,946.50 ಮಾರ್ಕ್ನಲ್ಲಿ ಮುಚ್ಚಿದೆ. ನಿಫ್ಟಿ ಮಿಡ್ಕ್ಯಾಪ್ 100 ಮತ್ತು ನಿಫ್ಟಿ ಸ್ಮಾಲ್ಕ್ಯಾಪ್ 100 ಸೂಚ್ಯಂಕವು ಶೇಕಡಾ 1ರಷ್ಟು ಇಂದು ಏರಿಕೆಯಾಗಿದೆ. ಭಾರತದ ಷೇರುಪೇಟೆ ಏರಿಕೆಗೆ ಪ್ರಮುಖ ಕಾರಣವೇನು? ಇಸ್ರೇಲ್ ಹಾಗೂ ಇರಾನ್ ದೇಶದ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಾಗತೊಡಗಿದೆ. ಹೀಗಿರುವಾಗ ಭಾರತದ ಷೇರು ಮಾರುಕಟ್ಟೆ ಸೋಮವಾರ ಜಿಗಿಯಲು ಐದು ಪ್ರಮುಖ ಕಾರಣಗಳನ್ನು ಕಾರಣಬಹುದಾಗಿದೆ. ಷೇರು...
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
Yoga Day News;ಕಾರವಾರ: ಜೂನ್ 21 ರಂದು ನಡೆಯುವ ಅಂತರಾಷ್ರ್ಟೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತರಾಷ್ರ್ಟೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಮುನ್ಸೂಚನೆಯಂತೆ ಕೋವಿಡ್ 19 ಮುನ್ನೆಚ್ಚರಿಕೆ ನಿಯಮಗಳನ್ನು ಅನುಸರಿಸಿ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಚರಿಸಬೇಕು, ಜಿಲ್ಲೆಯ ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಸಿ.ಸಿ. ರೋಟರಿ ಕ್ಲಬ್, ಯೋಗ ತರಬೇತಿ ನೀಡುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಿಗಧಿತ ಸಂಖ್ಯೆಯ ಸಾರ್ವಜನಿಕರನ್ನು ಒಳಗೊಂಡು ಕಾರ್ಯಕ್ರಮ ಆಯೋಜಿಸುವಂತೆ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಯೋಗಾಭ್ಯಾಸ ಮಾಡಲು ಅಗತ್ಯ ಪೂರಕ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಹಾಗೂ ತರಬೇತಿ ನೀಡಲು ಯೋಗ ಶಿಕ್ಷಕರನ್ನು ನಿಯೋಜಿಸುವಂತೆ ತಿಳಿಸಿದರು. Yoga Day News; ಕೆಮ್ಮು ನೆಗಡಿ, ಶೀತಜ್ವರದಿಂದ ಬಳಲುತ್ತಿರುವವರು...
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
Gold Price Today: ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಈ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆಗಳನ್ನು ಗಗನಕ್ಕೇರಿಸುತ್ತಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಹೂಡಿಕೆದಾರರು ತಮ್ಮ ಹಣಕ್ಕೆ ಭದ್ರತೆಯನ್ನು ಬಯಸುತ್ತಾರೆ.ಈ ಸಮಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಯಾವುದೇ ಅಪಾಯವಿಲ್ಲದ ಹೂಡಿಕೆ ಸಾಧನವಾಗಿರುವ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿದೆ. ಇದರಿಂದ ಸಹಜವಾಗಿಯೇ ಚಿನ್ನದ ದರಗಳು ವಿಪರೀತವಾಗಿ ಹೆಚ್ಚಾಗುತ್ತವೆ. ಆದರೆ, ಜೂನ್ 16ರಂದು ಸೋಮವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಭಾರೀ ಏರಿಕೆಯಾಗಿತ್ತು. ಆದರೆ, ಈ ವಾರ ಮೊದಲ ದಿನವೇ ಅಂದರೆ, ಸೋಮವಾರ ಬಂಗಾರದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಬೆಂಗಳೂರಲ್ಲಿ ಪ್ರತಿ 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ 170 ರೂಪಾಯಿ ಇಳಿಕೆಯಾಗಿದ್ದು, ₹101510ರಲ್ಲಿ ವಹಿವಾಟು ನಾಡೆಸುತ್ತಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ...









