ವಿಜಯಪುರ-ಮರಾಠಾ ಅಭಿವೃದ್ಧಿ ಪ್ರಾಧಿಕಾರದ ಮಾಡಿದ ನಿರ್ಣಯ ನಾವು ಸ್ವಾಗತಿಸಲೇ ಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹೇಳಿದ್ದಾರೆ.. ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ಮರಾಠಾ ಸಮಾಜದ ಸಲುವಾಗಿ ಮಾಡಿದ ಪ್ರಾಧಿಕಾರವದು, ಅವರು ಕೂಡಾ ಹಿಂದುಗಳಲ್ಲಿ ಇರುವ ವಿಶೇಷ ಜನಾಂಗ. ಅವರಲ್ಲೂ ಸಹಿಹ ಸಾಕಷ್ಟು ಕಡು ಬಡವರು, ನಿರುದ್ಯೋಗಿಗಳಿದ್ದಾರೆ, ಅವರಿಗೆ ಸರ್ಕಾರದಿಂದ ಸೌಲತ್ತು ಸಿಗುತ್ತಿಲ್ಲ. ಇದು ಮರಾಠಿ ಭಾಷೆಗರಿಗೆ ನೀಡಿದ ಅನುದಾನಲವಲ್ಲ. ಕನ್ನಡಪರ ಸಂಘಟನೆಗಳು ಇದನ್ನು ತಪ್ಪಾಗಿ ಭಾವಿಸಿವೆ. ಗಡಿ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಬೀದರ, ಕಲಬುರಗಿಯಲ್ಲಿ ಆ ಜನಾಂಗ ಹೆಚ್ಚಾಗಿ ವಾಸಿಸುತ್ತಾರೆ. ಅವರೆಲ್ಲ ಕನ್ನಡಿಗರೇ, ಅವರಿಗಾಗಿ ಮುಖ್ಯಮಂತ್ರಿಗಳು ತೆಗೆದುಕೊಂಡ ನಿರ್ಣಯ ಸ್ವಾಗತಾರ್ಹ ಎಂದರು. ಇನ್ನೂ ಕನ್ನಡ ಪರ ಸಂಘಟನೆಗಳು ಇದನ್ನು ತಪ್ಪಾಗಿ ಭಾವಿಸಿ, ಬಂದ್ ಕರೆ ನೀಡಿವೆ, ಬೇರೆ ಬೇರೆ ಸಮುದಾಯಕ್ಕೆ ಸಾಕಷ್ಟು ಅಭಿವೃದ್ಧಿ ಪ್ರಾಧಿಕಾರವನ್ನು ಸರ್ಕಾರ ಮಾಡಿದೆ. ಲಿಂಗಾಯತರಿಗಾಗಿಯೇ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದಾರೆ, ಇನ್ನೂ ಮರಾಠಾ ಸಮುದಾಯಕ್ಕೆ ಮಾಡಿದ್ದು ತಪ್ಪೇನು. ಕನ್ನಡಪರ ಸಂಘಟನೆಗಳು ನೀಡಿರುವ ಬಂದ್ ಕರೆಯನ್ನು...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಮರಾಠಾ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ಶ್ಲಾಘನೀಯ ಕಾರ್ಯ; ಮಾಜಿ ಸಚಿವ ಪಟ್ಟಣಶೆಟ್ಟಿ
ನನಗೆ ಧರ್ಮ ಒಡೆದವನು ಅಂತಾ ಪಟ್ಟ ಕಟ್ಟಿದ್ರು; ಮಾಜಿ ಸಚಿವ ಎಂ.ಬಿ.ಪಾಟೀಲ್ ಕಿಡಿ
ವಿಜಯಪುರ- ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರವಾಗಿ ನಿಗಮ ಸ್ಥಾಪನೆಗಳಿಗೆ ಮಾಜಿ ಸಚಿವ ಎಂ ಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ. ನಿಗಮ ಸ್ಥಾಪನೆಯಿಂದ ಯಾವುದೇ ಸಮಾಜ ಮುಂದೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಆಯಾ ಸಮಾಜಗಳು ಮುಂದೆ ಬರುತ್ತವೆ ಎಂದು ಸಲಹೆ ನೀಡಿದ್ದಾರೆ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಸ್ಥಾಪನೆಯಿಂದ ಸಹಾಯ ವಾಗಬಹುದು, ಆದ್ರೆ ದೊಡ್ಡ ಸಮುದಾಯಗಳಿಗೆ ನಿಗಮದಿಂದ ಯಾವುದೇ ಲಾಭವಿಲ್ಲ ಎಂದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಲಿಂಗಾಯತ ಸಮುದಾಯ 1.8 ಕೋಟಿ ಜನಸಂಖ್ಯೆ ಇದೆ, ಒಟ್ಟು ರಾಜ್ಯದ ಜನ ಸಂಖ್ಯೆಯಲ್ಲಿ, ಶೇಕಡಾ 16 ರಿಂದ 18 ರಷ್ಟು ಜನ ಲಿಂಗಾಯತರಿದ್ದಾರೆ , ಈ ನಿಗಮಕ್ಕೆ 100 ಅಥವಾ 200 ಕೋಟಿ ರೂಪಾಯಿ ಅನುದಾನ ನೀಡಿದರೆ ಯಾವುದೇ ಉಪಯೋಗವಿಲ್ಲ, ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದರೂ ಸಾಲದು ಎಂದು ತಿಳಿಸಿದ್ದಾರೆ. 1000 ಕೋಟಿ ಅನುದಾನ...
ಮುಂಡಗೋಡ ತಾಲೂಕಿನಲ್ಲಿ ಗಜಪಡೆಯ ಅರ್ಭಟ
ಮುಂಡಗೋಡ- ತಾಲೂಕಿನಲ್ಲಿ ಗಜಪಡೆಯ ಅರ್ಭಟ ಜೋರಾಗಿದೆ.. ಗಜಪಡೆಯ ದಾಳಿಯಿಂದ ಇಲ್ಲಿನ ಅನ್ನದಾತ ಕಂಗಾಲಾಗಿದ್ದಾನೆ. ತಾನು ಬೆವರು ಹರಿಸಿ ಬೆಳೆದಿದ್ದ ಬೆಳೆಯನ್ನು ಆನೆಗಳ ಹಿಂಡು ನಾಶಗೊಳಿಸುತ್ತಿವೆ.. ಮುಂಡಗೋಡ ತಾಲೂಕಿನ ಅರಷಿಣಗೇರಿ, ಮಜ್ಜಿಗೇರಿ, ಅತ್ತಿವೇರಿ, ಹುನಗುಂದ ಭಾಗದ ರೈತರು ಆನೆದಾಳಿಯಿಂದ ತಮ್ಮ ಬೆಳೆ ನಾಶವಾಗುವ ಭೀತಿಯಲ್ಲಿದ್ದಾರೆ.. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಆದಷ್ಟು ಬೇಗ ಆನೆಗಳ ಹಾವಳಿಯಿಂದ ರೈತರ ಬದುಕನ್ನ ರಕ್ಷಿಸಬೇಕಾಗಿದೆ.
ಮುಂಡಗೋಡ- ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಟಿ.ಆಸ್ತಕಟ್ಟಿ ವಿಧಿವಶ- ಗಣ್ಯರ ಸಂತಾಪ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹನ್ಮಂತಪ್ಪ ಆಸ್ತಕಟ್ಟಿ ಇಂದು ವಿಧಿವಶರಾಗಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಯವರ ಕಟ್ಟಾ ಬೆಂಬಲಿಗರಾಗಿದ್ದ ಹನ್ಮಂತಪ್ಪ ಆಸ್ತಕಟ್ಟಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಹನ್ಮಂತಪ್ಪ ಆಸ್ತಕಟ್ಟಿಯವರ ನಿಧನಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ
ಮುಂಡಗೋಡ; ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮನೆಪಾಠ; ಹುನಗುಂದ ಶಾಲೆ ಶಿಕ್ಷಕರ ಅವಿರತ ಪ್ರಯತ್ನ
ಮುಂಡಗೋಡ- ಕೊರೋನಾ ಸಂಕಷ್ಟದ ಮದ್ಯೆ ಸದ್ಯ ಮನೆಯಲ್ಲಿರೋ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಶಿಕ್ಷಣ ನೀಡಲಾಗ್ತಿದೆ. ತಾಲೂಕಿನ ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಮನೆ ಪಾಠ ನೀಡುತ್ತಿದ್ದು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ವಾಟ್ಸ್ ಅಪ್ ಮೂಲಕವೇ ಪಾಠ ಮಾಡ್ತಿರೋ ಶಿಕ್ಷಕರು, ತಮ್ಮ ವಿದ್ಯಾರ್ಥಿಗಳ ಜೊತೆ ವಾಟ್ಸ್ ಅಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಪಾಠ ಮಾಡ್ತಿದಾರೆ. ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ವಾಟ್ಸ್ ಅಪ್ ಮೂಲಕವೇ ಉತ್ತರಿಸುತ್ತಿದ್ದಾರೆ. ಒಟ್ನಲ್ಲಿ, ಕೊರೋನಾದಿಂದ ನಿಂತು ಹೋಗಿದ್ದ ಶಿಕ್ಷಣ ಸದ್ಯ ವಾಟ್ಸ್ ಅಪ್ ಮೂಲಕ ಮತ್ತೆ ಚೇತರಿಕೆ ಕಂಡುಕೊಂಡಿದೆ
ಮುಂಡಗೋಡ- ಹುನಗುಂದದಲ್ಲಿ ಒಂದು ಪಾಸಿಟಿವ್: ಸೋಂಕಿತನ ಮನೆ ಸುತ್ತ ಸೀಲ್ ಡೌನ್
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಕೊರೋನಾ ಮೊದಲ ಪಾಸಿಟಿವ್ ಪ್ರಕರಣ ದೃಡವಾಗಿದ್ದು, ಸೋಂಕಿತನ ಮನೆ ಸುತ್ತ ಸೀಲ್ ಡೌನ್ ಮಾಡಲಾಗಿದೆ. ಇಂದು ಪ್ರಕರಣ ದೃಢವಾಗುತ್ತಿದ್ದಂತೆ ಹುನಗುಂದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಸೀಲ್ ಡೌನ್ ಮಾಡಿದ್ರು. ಹುನಗುಂದ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಸೋಂಕಿತನ ಮನೆ ಸುತ್ತ ಮುತ್ತ ಫಾಗಿಂಗ್ ಮಾಡಿದ್ರು.
ಮುಂಡಗೋಡ; ಹುನಗುಂದ ಗ್ರಾಮಕ್ಕೂ ವಕ್ಕರಿಸಿದ ಕೊರೋನಾ..?
ಮುಂಡಗೋಡ- ಮಹಾರಾಷ್ಟ್ರದ ಪೂನಾದಿಂದ ಸ್ವಗ್ರಾಮ ಹುನಗುಂದಕ್ಕೆ ವಾಪಸ್ ಆಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕನಿಗೆ ಕೊರೋನಾ ಸೋಂಕು ದೃಢವಾಗಿದ್ದು ಮದ್ಯಾಹ್ನದ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ. ಹೀಗಾಗಿ ಹುನಗುಂದ ಗ್ರಾಮದಲ್ಲಿ ಮೊದಲ ಪ್ರಕರಣ ಇದಾಗಿದ್ದು ಆತಂಕ ಶುರುವಾಗಿದೆ.
ಉತ್ತರ ಕನ್ನಡದಲ್ಲಿ ಮುಂದುವರೆದ ಮಳೆ, ನಾಳೆ ಸಚಿವ ಆರ್.ಅಶೋಕ್ ಜಿಲ್ಲೆಗೆ ಭೇಟಿ
ಕಾರವಾರ- ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮತ್ತೆ ಮುಂದುವರೆದಿದೆ.. ಬೆಳಿಗ್ಗೆಯಿಂದ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಸಂಜೆಗೆ ಮಲೆನಾಡು ತಾಲೂಕುಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ಮುಂಡಗೋಡು, ಹಳಿಯಾಳ ಗಳಲ್ಲಿ ಮತ್ತೆ ವರುಣನ ಅಬ್ಬರ ಪ್ರಾರಂಭವಾಗಿದೆ.. ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗುತ್ತಿರೋ ಹಿನ್ನೆಲೆ ಶರಾವತಿ, ಅಘನಾಶಿನಿ ನದಿಗಳ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ನಾಳೆ ಹೊನ್ನಾವರಕ್ಕೆ ಕಂದಾಯ ಆರ್.ಅಶೋಕ್ ಭೇಟಿ ನೀಡಲಿದ್ದಾರೆ. ಶರಾವತಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರೋ ಸಚಿವ ಅಶೋಕ, ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಉತ್ತರ ಕನ್ನಡ ಇಬ್ಬರು ಕಳ್ಳರ ಬಂಧನ
ಕುಮಟಾ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದರಿಂದ ಶೀಘ್ರವೇ ಪ್ರಕರಣಗಳನ್ನು ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಒಂದು ತಂಡವನ್ನು ರಚಿಸಿದ್ದರು. ಈ ತಂಡ ಆರೋಪಿಗಳಾದ ಚಂದಾವರದ ಸಜ್ಜಾದ ಅಹ್ಮದ್ ಹಾಗೂ ಮುಬಾಸೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹೊನ್ನಾವರ ಪೊಲೀಸ್ ಠಾಣೆಯ 11 ಪ್ರಕರಣಗಳು ಹಾಗೂ ಕುಮಟಾ ಠಾಣೆಯ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಆರೋಪಿತರ ಕಡೆಯಿಂದ ಜಪ್ತಿಪಡಿಸಿಕೊಳ್ಳಲಾಗಿದೆ. ಅಲ್ಲದೇ ಆರೋಪಿತರು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಸುಮಾರು 2,50,000 ರೂ. ಬೆಲೆಯ ಮಾರುತಿ ಕಂಪನಿಯ ರಿಟ್ಜ್ ಕಾರು ಹಾಗೂ ಸುಮಾರು 25,000 ರೂ. ಬೆಲೆಯ ಪಲ್ಸರ್ ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಭಟ್ಕಳ ಉಪ ವಿಭಾಗದ ಎಎಸ್ ಪಿ ನಿಖಿಲ್ ಬಿ. ಮಾರ್ಗದರ್ಶನದಲ್ಲಿ ಹೊನ್ನಾವರ ಠಾಣೆಯ ಸಿಪಿಐ ವಸಂತ...
ಉತ್ತರ ಕನ್ನಡ; ಮಳೆ..ಮಳೆ..ಮಳೆ.. ಹಲವು ರಸ್ತೆ ಸಂಚಾರ ಬಂದ್
ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..