Covid News: ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,000 ದಾಟಿದ್ದು, ಈಗ ಒಟ್ಟು 3,395 ಪ್ರಕರಣಗಳಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, 685 ಹೊಸ ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದೆಹಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು ಸಾವು ಸೇರಿ ಒಟ್ಟು ನಾಲ್ಕು ಸಾವುಗಳು ವರದಿಯಾಗಿವೆ. ದೆಹಲಿಯಲ್ಲಿ, 71 ವರ್ಷದ ವ್ಯಕ್ತಿಯೊಬ್ಬರು ನ್ಯುಮೋನಿಯಾ ಮತ್ತು ತೀವ್ರ ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದರು. ಅವರು ಸಾವಿಗೀಡಾಗಿದ್ದು, ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ನ್ಯುಮೋನಿಯಾ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿರುವ 63 ವರ್ಷದ ವ್ಯಕ್ತಿಯೊಬ್ಬರು ಕರ್ನಾಟಕದಲ್ಲಿ ಸಾವಿಗೀಡಾಗಿದ್ದಾರೆ. ಕೇರಳದಲ್ಲಿ, ನ್ಯುಮೋನಿಯಾ, ಟೈಪ್ -2 ಉಸಿರಾಟದ ವೈಫಲ್ಯ ಮತ್ತು ಸೆಪ್ಸಿಸ್ನಿಂದ ಬಳಲುತ್ತಿದ್ದ 59 ವರ್ಷದ ವ್ಯಕ್ತಿಯೊಬ್ಬರು ಸಹ...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!
PUC admission: ಕಾರವಾರ: ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ PCMB & PCMC ಸಂಯೋಜನೆಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಎಲ್ಲಾ ಅರ್ಜಿಗಳನ್ನು ಕ್ರೂಢೀಕರಿಸಿ, ಪ್ರಥಮ ಆಯ್ಕೆ ಪಟ್ಟಿಯನ್ನು ದಿನಾಂಕ:29/05/2025 ರಂದು ಬಿಡುಗಡೆ ಮಾಡಲಾಗಿದಾಗ್ಯೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳ ಕೊರತೆ ಇರುವ ಕಾರಣ ಆ ಸ್ಥಾನಗಳು ಭರ್ತಿ ಆಗದೇ ಇರುವುದರಿಂದ ಉಳಿದಿರುವ ಸ್ಥಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮೊರಾರ್ಜಿ ದೇಸಾಯಿ/ಕಿತ್ತೂರುರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಅನುದಾನಿತ ಶಾಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರಥಮ...
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!
Covid News: ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ. ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ ವಾರದಲ್ಲಿ ಸೋಂಕುಗಳು ಐದು ಪಟ್ಟು ಏರಿಕೆಯಾಗಿವೆ. ಮೇ 26 ರಂದು 1,010 ಪ್ರಕರಣಗಳಿದ್ದದ್ದು ಮೇ 30 ರಂದು 2,710 ಪ್ರಕರಣಗಳಿವೆ ಏರಿದೆ. ಅಂದರೆ ಕೇವಲ ನಾಲ್ಕು ದಿನಗಳಲ್ಲಿ ತ್ವರಿತ ಏರಿಕೆ ಕಂಡುಬಂದಿದೆ ಎಂದು ಸರ್ಕಾರಿ ದತ್ತಾಂಶಗಳು ತೋರಿಸುತ್ತವೆ. ಈ ವರ್ಷದ ಮೊದಲ ಐದು ತಿಂಗಳಲ್ಲಿ ಸಾವಿನ ಸಂಖ್ಯೆ 22 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಎರಡು ಸಾವುಗಳು, ದೆಹಲಿ, ಗುಜರಾತ್, ಕರ್ನಾಟಕ, ಪಂಜಾಬ್ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಸಾವು ಸೇರಿ ಏಳು ಸಾವುಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ...
ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!
Job News:ಕಾರವಾರ: ರಾಷ್ಟೀಯ ಆರೋಗ್ಯ ಅಭಿಯಾನದ PM-ABHIM ಯೋಜನೆಯಡಿ, ನಮ್ಮ ಕ್ಲಿನಿಕ್ ಕೇಂದ್ರ ಕಾರವಾರ, ಅಂಕೋಲಾ, ಭಟ್ಕಳ, ಹಳಿಯಾಳ, ಮಂಕಿ ಮತ್ತು ಮುಂಡಗೋಡನಲ್ಲಿ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಮಾಸಿಕ ರೂ. 75,000/- ವೇತನ ಅನುಮೋದನೆಯಾಗಿದೆ. ಆಸಕ್ತ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್ನಲ್ಲಿ ನೊಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಪ್ರತಿ ದಿನ ಕಛೇರಿ ವೇಳೆಯಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿಯಲ್ಲಿ ಮೂಲ ದಾಖಲಾತಿಯೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!
Job News:ಕಾರವಾರ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ PM-ABHIM ಕಾರ್ಯಕ್ರಮದಡಿ ಆಯುಷ್ಮತಿ ಕ್ಲಿನಿಕ್, ನಮ್ಮ ಕ್ಲನಿಕ್ ಕುಮಟಾದಲ್ಲಿ ಖಾಲಿ ಇರುವ ಸ್ತ್ರಿ ರೋಗ ತಜ್ಞರು, ಮೂಳೆ ಮತ್ತು ಕೀಲು ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ಕಿವಿ ,ಮೂಗು ಮತ್ತು ಗಂಟಲು ತಜ್ಞರ ಹುದ್ದೆಗಳಿಗೆ ಪ್ರಕರಣ/ಗಂಟೆ ಆಧಾರದಲ್ಲಿ ತಾತ್ಕಾಲಿಕವಾಗಿ ತಜ್ಞ ವೈದ್ಯರ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾಹರ್ತೆ: ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು, ಸ್ನಾತಕೋತ್ತರ ಪದವಿ ಹೊಂದಿರಬೇಕು, ಕಡ್ಡಾಯವಾಗಿ ಇಂಟರ್ನ್ಶಿಫ್ ಪೂರೈಸಿರಬೇಕು ಹಾಗೂ ಕೆ.ಎಮ್.ಸಿ.ಯ ನೋಂದಣಿಯನ್ನು ಹೊಂದಿರತಕ್ಕದ್ದು . ಮಾನ್ಯತೆ ಪಡೆದ ವಿದ್ಯಾಲಯದಿಂದ ಕಾನ್ವಕೇಶನ್, ಪದವಿ ಪ್ರಮಾಣ ಪತ್ರ, ಪಿ.ಜಿ. ಪ್ರಮಾಣ ಪತ್ರ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಉತ್ತರ ಕನ್ನಡ, ಕಾರವಾರ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7019629664 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು...
ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!
Education news: ಕಾರವಾರ: 2025-26 ನೇ ಸಾಲಿನಲ್ಲಿ 2 ವರ್ಷಗಳ ಐ.ಟಿ.ಐ/ ದ್ವಿತೀಯ ಪಿಯುಸಿ (ವಿಜ್ಞಾನ) ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾತಂರ 2 ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್ ಲೈನ್ ಮೂಲಕ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್, ಕಾರವಾರ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಂಸ್ಥೆಗೆ ಜೂ.14 ರೊಳಗಾಗಿ ಸಂಬಂಧಿಸಿದ ಎಲ್ಲಾ ಪ್ರಮಾಣ ಪತ್ರಗಳ ಝೇರಾಕ್ಸ್ ಪ್ರತಿಯೊಂದಿಗೆ ಸಲ್ಲಿಸತಕ್ಕದ್ದು. ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂ.16 ರಂದು ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಇದನ್ನೂ ಓದಿ👉 ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..! ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಮೂಲ ದಾಖಲೆಗಳು ಮತ್ತು ನಿಗದಿತ ಶುಲ್ಕದೊಂದಿಗೆ ಜೂ.17 ಮತ್ತು 18 ರೊಳಗಾಗಿ ಪ್ರವೇಶ ಪಡೆಯತಕ್ಕದ್ದು. ಸೀಟುಗಳು ಭರ್ತಿಯಾಗದೇ ಉಳಿಕೆಯಾಗಿದಲ್ಲಿ ಪ್ರಾಂಶುಪಾಲರ...
ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!
Environment News:ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ಹಾಗೂ ನಗರಸಭೆ, ಕಾರವಾರ ಇವರ ಸಹಯೋಗದೊಂದಿಗೆ ನಗರಸಭೆ ಸಭಾಭವನದಲ್ಲಿ ವಿಶ್ವ ಪರಿಸರ ದಿನಾಚರಣೆ-2025 ರನ್ವಯ ಘೋಷವಾಕ್ಯ “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ವಿಷಯದ ಕುರಿತಾಗಿ ಪೌರಕಾರ್ಮಿಕರಿಗೆ ಕಾರ್ಯಾಗಾರವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ ಹಾಗೂ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಉಪಯೋಗಿಸದಂತೆ ಜಾಗೃತಿ ಮೂಡಿಸಿ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉಪಯೋಗವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಾಗಿ ಅಡಿಕೆ ಎಲೆ / ಕಟ್ಟಿಗೆ / ಗಾಜು / ಪೇಪರ್ / ಸ್ಟೀಲ್ನಿಂದ ತಯಾರಿಸಿದ ವಸ್ತುಗಳನ್ನು ಬಳಸುವಂತೆ ಮತ್ತು ಕೇವಲ ಬಟ್ಟೆ ಚೀಲಗಳನ್ನು ಬಳಸುವಂತೆ ಹಾಗೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಿದಲ್ಲಿ ದಂಡವನ್ನು ವಿಧಿಸಲಾಗುವುದು ಎಂದರು. ಕರ್ನಾಟಕ ರಾಜ್ಯ ಮಾಲಿನ್ಯ...
ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!
Lokayukta Raid: ಹಾವೇರಿ ಜಿಲ್ಲೆ ಶಿಗ್ಗಾವ ತಾಲೂಕಿನ ಬಾಡ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ದಾಖಲೆಗಳ ಪರಿಶೀಲನೆ ನಡೆದಿದ್ದಾರೆ. ಬಾಡ ಗ್ರಾಮ ಪಂಚಾಯಿತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಪಿಡಿಓ ರಾಮಕೃಷ್ಣಪ್ಪ ಗುಡಗೇರಿ ಮೇಲೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸದ್ಯ ದಾಖಲಾತಿಗಳ ಪರಿಶೀಲನೆ ಕಾರ್ಯ ನಡೆದಿದ್ದು ಅಕ್ರಮಗಳ ಬಗ್ಗೆ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಲಿದ್ದಾರೆ.
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ ಯಾವಾಗ..? ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ. ಖುದ್ದು ಅಧ್ಯಕ್ಷರೇ ಪ.ಪಂ ಸಭಾಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ. ಆತನ ಹೆಸರು ರಮೇಶ್ ಬೋವಿ..! ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಕಳೆದ ಎರಡು ದಶಕದಿಂದಲೂ ದಿನಗೂಲಿ ನೌಕರನಾಗಿ ಕಾರ್ಯ ನಿರ್ವಹಿಸ್ತಿರೋ ರಮೇಶ್ ಬೋವಿ ಸದ್ಯ ಇಂತಹದ್ದೊಂದು ಆರೋಪ ಹೊತ್ತವ. ಅಧ್ಯಕ್ಷರು ಆರೋಪಿಸುವ ಪ್ರಕಾರ ಈತ ಪಟ್ಟಣ ಪಂಚಾಯತಿಯ ಚೀಪ್ ಆಫೀಸರ್, ಇಂಜಿನೀಯರ್ ಹಾಗೂ ಅಧ್ಯಕ್ಷರು ಹೀಗೆ ಮೂವರ ಕೀ ಬಳಸಿ...
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ, ಕಚೇರಿ ಸೇರಿದಂತೆ 6 ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಗದಗದ ಹುಡ್ಕೋ ಕಾಲೋನಿಯಲ್ಲಿರುವ ಗಂಗಾಧರ ಶಿರೋಳ ಮನೆ, ಸಂಬಂಧಿಕರ ಮನೆ ಸೇರಿದಂತೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ ಪಿಡಬ್ಲ್ಯುಡಿ (PWD) ಸುಪರಿಡೆಂಟ್ ಇಂಜಿನಿಯರ್ ಅಮೀನ್ ಮುಕ್ತಾರ್ ಮನೆ...