Karwar News: ಕಾರವಾರ: ಜೂನ್ 12 ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಮ್ಷೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..! ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಕಾರ್ಮಿಕ ಸಂಘಗಳು, ಉದ್ಯೋಗದಾತರ ಸಂಘಗಳು, ಮತ್ತು ಬಾಲಕಾರ್ಮಿಕ ಪದ್ಧತಿ ವಿರುದ್ಧ ಆಂದೋಲನ ನಡೆಸುತ್ತಿರುವ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಸಹಕಾರದೊಂದಿಗೆ, ಬಾಲ ಕಾರ್ಮಿಕ ಪದ್ದತಿ ವಿರೋಧದ ಕುರಿತು ಅರ್ಥವತ್ತಾದ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಂಡು, ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ ಕಡೆಗೆ ಹೋಗುವ ರಸ್ತೆ ಮೇಲ್ಗಡೆಯಿಂದ ಸರ್ವಿಸ್ ರೋಡ್ ಗರುಡ ಹೋಟೆಲ್ ಪಕ್ಕ ತೆಗ್ಗಿನಲ್ಲಿ ಬಿದ್ದಿದೆ. ಪರಿಣಾಮ ಸುಮಾರು ಹತ್ತು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಶಿಗ್ಗಾವಿ ಸರ್ಕಾರಿ ಆಸ್ಪತ್ರೆ ಕಳುಹಿಸಲಾಗಿದೆ.
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
Environment day: ಕಾರವಾರ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮರಿಯಮ್ಮಾ ದೇವಿ ದೇವಸ್ಥಾನದ ಹತ್ತಿರವಿರುವ ಬಳ್ಳಿಗಟ್ಟಿ ಕೆರೆ ದಡದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ ಸಾಂಕೇತಿಕವಾಗಿ ಸಸಿ ನೆಟ್ಟು, ನೀರುಣಿಸುವ ಮೂಲಕ ಕೆರೆ ದಡದ ಸುತ್ತಲು ಗಿಡ ನೆಟ್ಟು, ಪೋಷಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ, ಸ್ಮಶಾನ, ಸರ್ಕಾರಿ ಖಾಲಿ ಜಾಗ, ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಆವರಣ ಸೇರಿದಂತೆ ಇತ್ಯಾದಿ ಅನುಕೂಲಕರ ಪ್ರದೇಶದಲ್ಲಿ ಸಸಿ ನೆಡುವುದಕ್ಕೆ ಅವಕಾಶ ನೀಡಿ, ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. ಇದನ್ನೂ ಓದಿ👉ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಈ ವೇಳೆ ಮನೋವಿಕಾಸ ಎನ್ಜಿಒ ವತಿಯಿಂದ ಕೆರೆ ದಡದ ಸುತ್ತಲೂ 50ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗುತ್ತಿದ್ದು, ಅವುಗಳಿಗೆ ಸೂಕ್ತ ರಕ್ಷಣೆ ಮತ್ತು ಪೋಷಣೆ ನೀಡಿ,...
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Bakrid Peace Meeting; ಕಾರವಾರ: ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ , ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಡೆದ , ಬಕ್ರೀದ್ ಹಬ್ಬದ ಪ್ರಯುಕ್ತದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..! ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಸಾಂಪ್ರದಾಯಿಕ ರೀತಿಯಲ್ಲಿ , ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದೇ, ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಬಕ್ರೀದ್ ಸಮಯದಲ್ಲಿ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಿ, ಅದನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ನಗಾಭಿವೃಧ್ದಿಕೋಶದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು,...
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
PM Kisaan Yojana: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಇದೇ ಜೂನ್ ತಿಂಗಳಲ್ಲಿ 20ನೇ ಕಂತು ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಅಂದರೆ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ನಲ್ಲಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2000 ಹಣ ಬಿಡುಗಡೆ ಮಾಡಲಾಗುತ್ತದೆ. ದು ವರ್ಷಕ್ಕೆ ಒಟ್ಟು 6,000 ರೂಪಾಯಿ ಆಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತದೆ. ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..! ಕಳೆದ ಫೆಬ್ರವರಿಯಲ್ಲಿ 19ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ 20 ನೇ ಕಂತಿನ ಹಣ ಜೂನ್ ತಿಂಗಳಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆದರೆ, 20 ನೇ ಕಂತು ಬಿಡುಗಡೆಗೂ ಮೊದಲು ಫಲಾನುಭವಿ ರೈತರು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಪಿಎಂ ಕಿಸಾನ್ ವೆಬ್ಸೈಟ್ ಪ್ರಕಾರ, “ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇಕೆವೈಸಿ...
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
Census News: ನವದೆಹಲಿ: ಜಾತಿ ದತ್ತಾಂಶವನ್ನು ಒಳಗೊಂಡ ರಾಷ್ಟ್ರವ್ಯಾಪಿ ಜನಗಣತಿಯು 2027ರ ಮಾರ್ಚ್ 1ರಂದು ಪ್ರಾರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜನಸಂಖ್ಯೆಯನ್ನು ಗಣತಿ ಮಾಡುವ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. “ಜನಸಂಖ್ಯಾ ಗಣತಿಯ ಉಲ್ಲೇಖ ದಿನಾಂಕ ಮಾರ್ಚ್ 2027 ರ ಮೊದಲ ದಿನದ 00:00 ಗಂಟೆಗಳು. ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಸಿಂಕ್ರೊನಸ್ ಅಲ್ಲದ ಹಿಮಪಾತ ಪ್ರದೇಶಗಳಿಗೆ, ಉಲ್ಲೇಖ ದಿನಾಂಕವು ಅಕ್ಟೋಬರ್ 2026 ರ ಮೊದಲ ದಿನದ 00.00 ಗಂಟೆಗಳು ಆಗಿರುತ್ತದೆ” ಎಂದು ಗೃಹ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ,,👉 ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..! ಜನಗಣತಿ ಪ್ರಕ್ರಿಯೆಯು ಏಪ್ರಿಲ್ 2020 ರಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಅದು ವಿಳಂಬವಾಯಿತುದೆ.ಭಾರತದ ಜನಗಣತಿಯನ್ನು ಜನಗಣತಿ ಕಾಯ್ದೆ, 1948 ಮತ್ತು ಜನಗಣತಿ ನಿಯಮಗಳು, 1990 ರ...
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು. ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರು ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ ತೂಗುವಂತೆ ಸಸಿಯನ್ನು ತೊಟ್ಟಿಲಲ್ಲಿಟ್ಟು ತೂಗಿ ಅದನ್ನು ವಿದ್ಯಾರ್ಥಿಗಳಿಗೆ ದತ್ತು ನೀಡಿದರು. ಅಂತಿಮ ವರ್ಷ ಮುಗಿಯುವವರೆಗೆ ಆ ವಿದ್ಯಾರ್ಥಿಗಳು ಆ ಗಿಡದ ಜವಾಬ್ದಾರಿಯನ್ನು ವಹಿಸಬೇಕು ಎಂದು ಎಲ್ಲಾ ಗಣ್ಯರು ವಿದ್ಯಾರ್ಥಿಗಳಿಗೆ ಸೂಚಿಸಿದ್ರು. ಇದನ್ನೂ ಓದಿ👉 RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..! ಮುಖ್ಯ ಅತಿಥಿಗಳಾಗಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ ವೈ ದಾಸನಕೊಪ್ಪ, ತೋಟಗಾರಿಕಾ ಇಲಾಖೆ ರಮೇಶ್, ಪಟ್ಟಣ...
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
IPL Trophy: 18ನೇ ಆವೃತ್ತಿಯ ಐಪಿಎಲ್ನಲ್ಲಿ ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಹೊಮ್ಮಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಕಳೆದ 17 ವರ್ಷಗಳಿಂದ ಟ್ರೋಫಿಗಾಗಿ ಹೋರಾಡಿದ್ದ ಆರ್ಸಿಬಿ ಮೂರು ಬಾರಿ ಫೈನಲ್ಗೆ ಎಂಟ್ರಿ ಪಡೆದಿದ್ದರು ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಬೆಂಗಳೂರು ತಂಡ ಫೈನಲ್ಗೆ ಬಂದಿದ್ದರು, ಡೆಕ್ಕನ್ ಚಾರ್ಜಸ್, ಚೆನ್ನೈ ಸೂಪರ್ ಕಿಂಗ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಸೋಲನ್ನು ಕಂಡಿತು. ಇದಾದ ಬಳಿಕ 2020, 2021, 2022 ಮತ್ತು 2024ರಲ್ಲಿ ಒಟ್ಟು ನಾಲ್ಕು ಬಾರಿ ಪ್ಲೇಆಫ್ಗೆ ಎಂಟ್ರಿ ಪಡೆದಿದ್ದರು ಬೆಂಗಳೂರು ತಂಡ ಫೈನಲ್ಗೆ ತಲುಪಲು ಸಾಧ್ಯವಾಗಿರಲಿಲ್ಲ. ಇದೀಗ ಕಪ್ ಗೆಲ್ಲುವ ಹುಮ್ಮಸಿನೊಂದಿಗೆ ಐಪಿಎಲ್ 2025ರ ಆವೃತ್ತಿಯಲ್ಲಿ ಹೊಸ ತಂಡ ಮತ್ತು ನಾಯಕನೊಂದಿಗೆ ಕಣಕ್ಕಿಳಿದಿತ್ತು. ಆದರೆ ಈ ಹಿಂದೆ ಆಗಿದ್ದ ತಪ್ಪುಗಳು ಆಗದಂತೆ ಬೆಂಗಳೂರು ತಂಡ ಜವಾಬ್ದಾರಿಯುತವಾಗಿ ಪ್ರದರ್ಶನ ನೀಡಿತು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿತು. ಲೀಗ್ ಹಂತದಲ್ಲಿ...
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!
RCB Celebration Death: ಸಿದ್ದಾಪುರ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ Rcb ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಹಿಳೆ ಓರ್ವಳು ಮೃತಪಟ್ಟಿರುವುದು ವರದಿಯಾಗಿದೆ. ಅಕ್ಷತಾ ಪೈ ಘಟನೆಯಲ್ಲಿ ಮೃತಪಟ್ಟಿರುವ ಮಹಿಳೆಯಾಗಿದ್ದರೆ.ಇವರು ಸಿದ್ದಾಪುರದ ರವೀಂದ್ರ ನಗರದ ನಿವಾಸಿಯಾಗಿದ್ದು, ಅಕ್ಷತಾ ಪೈ ಸಿಎ ಮುಗಿಸಿ ಬೆಂಗಳೂರಿನಲ್ಲಿ ಕೆಲಸಮಾಡುತ್ತಿದ್ದಳು. RCB ತಂಡ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅಕ್ಷತಾ ಫೈ ಕೂಡ ಚೆನ್ನಸ್ವಾಮಿ ಕ್ರೀಡಾಗಂಣಕ್ಕೆ ತೆರಳಿದ್ದರು ಎನ್ನಲಾಗಿದೆ.ಈ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.ಮೃತ ದೇಹವನ್ನ ಸಿದ್ದಾಪುರ ಕ್ಕೆ ತರಲಾಗುತ್ತಿದೆ ಎನ್ನಲಾಗಿದೆ.ಮೂಲತಃ ಅಕ್ಷತಾ ಉಡುಪಿ ಜಿಲ್ಲೆ ಮೂಲ್ಕಿ ಯವರು ಸಿದ್ದಾಪುರದ ಸೊಸೆಯಾದ್ದರು.
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
RCB Fan Death: ಬೆಳಗಾವಿ: ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಐಪಿಎಲ್-2025 ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಆರ್ಸಿಬಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಫೈನಲ್ ಮ್ಯಾಚ್ ಮುಗಿದ ಬಳಿಕ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡುವಾಗಲೇ ಈ ದುರಂತ ಸಂಭವಿಸಿದೆ. ಆರ್ಸಿಬಿ ಅಭಿಮಾನಿ ಮಂಜುನಾಥ್ ಈರಪ್ಪ ಕುಂಬಾರ (25) ಮೃತಪಟ್ಟವರು. ಇದನ್ನೂ ಓದಿ👉 ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..! ಅವರಾದಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಕುಣಿಯುತ್ತಲೇ ಅವರು ಕುಸಿದು ಬಿದ್ದರು. ಕೂಡಲೇ ಗೆಳೆಯರೆಲ್ಲಾ ಸೇರಿ ಸಮೀಪದ ಮಹಾಲಿಂಗಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರೊಳಗೆ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಂಜುನಾಥ್ಗೆ ಕ್ರಿಕೆಟ್ ಕ್ರೇಜ್ ಬಹಳಷ್ಟಿತ್ತು. ಆರ್ಸಿಬಿ ಎಂದರೆ ಹುಚ್ಚು ಅಭಿಮಾನ. ಫೈನಲ್ ಪಂದ್ಯ...









