RCB Fans Dream Shattered: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್ಸಿಬಿ ಪ್ಲೇಆಫ್ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ ಫ್ಯಾನ್ಸ್ ಕಂಡಿದ್ದ ಆ ಕನಸು ಕೂಡ ಭಗ್ನ ಗೊಂಡಿದೆ. ಹೌದು, ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಟೆಸ್ಟ್ಗೆ ನಿವೃತ್ತಿ ಘೋಷಣೆ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಆರ್ಸಿಬಿ ಫ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಬಿಳಿ ಜೆರ್ಸಿ ಧರಿಸಿ ಮೈದಾನಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಪಾಕಿಸ್ತಾನಿಯ ಜೊತೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
Jyoti Malhotra News: ನವದೆಹಲಿ: ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಅಧಿಕಾರಿ ಅಲಿ ಹಸನ್ ಎಂಬಾತನೊಂದಿಗೆ ಜ್ಯೋತಿ ಸಂಪರ್ಕದಲ್ಲಿದ್ದು, ಇಬ್ಬರ ನಡುವಿನ ಸಂಭಾಷಣೆಗಳು ಈಗ ಬೆಳಕಿಗೆ ಬಂದಿದೆ. ಅಲಿ ಜತೆ ವಾಟ್ಸ್ಅಪ್ನಲ್ಲಿ ಚ್ಯಾಟ್ ಮಾಡುತ್ತಿದ್ದ ಜ್ಯೋತಿ, ‘ನನ್ನ ಮದುವೆಯನ್ನು ಪಾಕಿಸ್ತಾನದಲ್ಲಿ ಮಾಡಿಸು’ ಎಂದು ಕೇಳಿಕೊಂಡಿದ್ದಳು ಎಂದು ವರದಿಯಾಗಿದೆ. ಈ ಮೂಲಕ ಆಕೆಯ ಪಾಕ್ ಪ್ರೇಮ ಬಯಲಾಗಿದೆ. 2023ರಿಂದಲೂ ಜ್ಯೋತಿ ಆತನ ಸಂಪರ್ಕದಲ್ಲಿದ್ದಳು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ ಅಂತೆಯೇ, ಅವರಿಬ್ಬರು ಭಾರತದ ರಹಸ್ಯ ಕಾರ್ಯಾಚರಣೆಗಳ ಬಗ್ಗೆಯೂ ರಹಸ್ಯ ಭಾಷೆಯಲ್ಲಿ (ಕೋಡ್ ಮೂಲಕ) ಚರ್ಚಿಸುತ್ತಿದ್ದರು ಎಂದು ತಿಳಿದುಬಂದಿದೆ. ಜತೆಗೆ, ಜ್ಯೋತಿಗೆ ಸೇರಿದ 4 ಬ್ಯಾಂಕ್ ಖಾತೆಗಳ ವಿವರ ಪೊಲೀಸರ ಕೈ ಸೇರಿದ್ದು,...
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ ಬಳಿ ಇರುವ ಎಫ್ಬಿಐನ ವಾಷಿಂಗ್ಟನ್ ಫೀಲ್ಡ್ ಕಚೇರಿಯ ಎದುರಿನ ಗುಂಡಿನ ದಾಳಿಯನ್ನು ತನಿಖೆ ನಡೆಸುತ್ತಿದ್ದಾರೆ. ಇಸ್ರೇಲಿ ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..! ಗುಂಡಿನ ದಾಳಿ ನಡೆದಾಗ ಇಸ್ರೇಲಿ ರಾಯಭಾರಿ ಸ್ಥಳದಲ್ಲಿ ಇರಲಿಲ್ಲ ಎಂದು ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಸಿಎನ್ಎನ್ಗೆ ತಿಳಿಸಿದ್ದಾರೆ. ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದಲ್ಲಿ ನಡೆದ ಯಹೂದಿ...
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್ ಮಾರ್ಕ್ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಗ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಕುಸಿದಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..! ಮೇ 22ರಂದು ಗುರುವಾರ ಬಿಎಸ್ಇ ಸೆನ್ಸೆಕ್ಸ್ 850 ಪಾಯಿಂಟ್ಗಳಷ್ಟು ಕುಸಿದಿದೆ, ಅದು 80,750 ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ನಿಫ್ಟಿ ಕೂಡ 24,550 ಮಟ್ಟದಲ್ಲಿ 250 ಪಾಯಿಂಟ್ಗಳ ಕುಸಿತ ಕಂಡಿದೆ. ಸೆನ್ಸೆಕ್ಸ್ನ 30 ಷೇರುಗಳಲ್ಲಿ...
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..! ಮೇ 23ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿನ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,...
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Death News: ಬೆಂಗಳೂರಿನ ಹೊರವಲಯದಲ್ಲಿರುವ ರೈಲ್ವೆ ಸೇತುವೆಯ ಬಳಿ ಬುಧವಾರ ಸೂಟ್ಕೇಸ್ನಲ್ಲಿ ಸುಮಾರು ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆನೇಕಲ್ ತಾಲ್ಲೂಕಿನ ಹೊಸೂರು ಮುಖ್ಯ ರಸ್ತೆಯ ಬಳಿಯ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಹರಿದ ನೀಲಿ ಬಣ್ಣದ ಸೂಟ್ಕೇಸ್ ಪತ್ತೆಯಾಗಿದ್ದು, ಅದರೊಳಗೆ ಹುಡುಗಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಶವವನ್ನು ಸೂಟ್ಕೇಸ್ ಅನ್ನು ಚಲಿಸುವ ರೈಲಿನಿಂದ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರಂಭಿಕ ತಪಾಸಣೆ ನಡೆಸಿದರು. “ಸೂಟ್ಕೇಸ್ ಅನ್ನು ಬಹುಶಃ ಚಲಿಸುವ ರೈಲಿನಿಂದ ಎಸೆಯಲಾಗಿದೆ ಎಂದು ತೋರುತ್ತದೆ. ಸಾಮಾನ್ಯವಾಗಿ, ಅಂತಹ ಪ್ರಕರಣಗಳು ರೈಲ್ವೆ ಪೊಲೀಸ್ ವ್ಯಾಪ್ತಿಗೆ ಬರುತ್ತವೆ, ಆದರೆ ಅದು ನಮ್ಮ ಪ್ರದೇಶಕ್ಕೆ ಸಂಬಂಧಿಸಿರುವುದರಿಂದ, ನಾವು ಭಾಗಿಯಾಗಿದ್ದೇವೆ. ಯಾವುದೇ ಗುರುತಿನ ಕಾರ್ಡ್ ಅಥವಾ ವಸ್ತುಗಳು ಕಂಡುಬಂದಿಲ್ಲವಾದ್ದರಿಂದ ಮೃತಳ ಗುರುತನ್ನು ಇನ್ನೂ ದೃಢೀಕರಿಸಲಾಗಿಲ್ಲ,” ಎಂದು ಬೆಂಗಳೂರು ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬಾ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ಉಲ್ಲೇಖಿಸಿದೆ. ಪೊಲೀಸರು...
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Police News :ರಾಜ್ಯ ಪ್ರಭಾರಿ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ)ರಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ನೇಮಕವಾಗಿದ್ದಾರೆ. ಅಲೋಕಮೋಹನ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಗೆ ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೇವಾ ಹಿರಿತನ ಆಧಾರದ ಮೇರೆಗೆ ಡಿಜಿ-ಐಜಿಪಿ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತಕುಮಾರ ಠಾಕೂರ, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ ಮೊಹಂತಿ ಸೇರಿ ಏಳು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿದ್ದರು. ರಾಜ್ಯ ಡಿಜಿ-ಐಜಿಪಿಯಾಗಿದ್ದ ಡಾ. ಅಲೋಕಮೋಹನ ಮೇ 21ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ. ಹೀಗಾಗಿ 1993ನೇ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1993ನೇ ಬ್ಯಾಚ್ನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿರುವ ಇವರು, ಪೊಲೀಸ್ ಇಲಾಖೆಯಲ್ಲಿ ಕಳೆದ 30 ವರ್ಷಗಳಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ....
Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!
Naxalar Encounter News: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಮಾಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. 2003 ರಲ್ಲಿ ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜುನನ್ನು 50 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಕೊಲ್ಲಲಾಗಿದೆ. ಮಾಡ್ ವಿಭಾಗದ ಹಿರಿಯ ಮಾವೋವಾದಿ ಕೇಡರ್ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅಭುಜ್ಮದ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಪೊಲೀಸರ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಅಭುಜ್ಮದ್ ಮತ್ತು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಡುವಿನ ದಟ್ಟವಾದ ಕಾಡುಗಳಲ್ಲಿ ಈ ಎನ್ಕೌಂಟರ್ ನಡೆಯಿತು. ನಕ್ಸಲರ ವಿರುದ್ಧದ ಹೋರಾಟದಲ್ಲಿ ಈ “ಹೆಗ್ಗುರುತು ಸಾಧನೆ”ಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ....
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!
ED Raid News:ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇಂದು, ಬುಧವಾರ ಬೆಳಗ್ಗೆಯಿಂದ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಆರಂಭಿಸಿದ್ದಾರೆ. 9 ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.
Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!
Business News:ಟೆಸ್ಲಾ ಕಂಪನಿಯ ಭಾರತೀಯ ಮೂಲದ ಮುಖ್ಯ ಹಣಕಾಸು ಅಧಿಕಾರಿ ವೈಭವ್ ತನೇಜಾ ಅವರು 2024 ರಲ್ಲಿ $139 ಮಿಲಿಯನ್ (ಸುಮಾರು ರೂ. 1,157 ಕೋಟಿ) ಪಡೆದಿದ್ದಾರೆ. 2023 ರ ಬಡ್ತಿಯ ನಂತರದ ಅವರ ವೇತನ ಪ್ಯಾಕೇಜ್, ಷೇರು ಆಯ್ಕೆಗಳು ಮತ್ತು ಇಕ್ವಿಟಿಗಳಿಂದಾಗಿ ಹೆಚ್ಚಿನ ಹಣ ಪಡೆದಿದ್ದಾರೆ. ಇದು ಹಲವಾರು ಉನ್ನತ ಟೆಕ್ಕಂಪನಿಗಳ ಸಿಇಒಗಳ ಗಳಿಕೆಯನ್ನು ಮೀರಿಸಿದೆ. ವೈಭವ್ ತನೇಜಾ ಅವರ ಮೂಲ ವೇತನ $400,000 (ರೂ. 3.33 ಕೋಟಿ), ಆದರೆ ಒಟ್ಟು ಗಳಿಕೆಯು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರು $79.1 ಮಿಲಿಯನ್ (658 ಕೋಟಿ ರೂ. ) ಗಳಿಸಿದ್ದನ್ನು ಮತ್ತು ಆಲ್ಫಾಬೆಟ್ ಮುಖ್ಯಸ್ಥ ಸುಂದರ್ ಪಿಚೈ ಅವರು $10.73 ಮಿಲಿಯನ್ (89 ಕೋಟಿ ರೂ.) ಗಳಿಸಿದ್ದನ್ನು ಮೀರಿದೆ. Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..! 2017 ರಲ್ಲಿ ಟೆಸ್ಲಾ ಸೇರಿದ 47...









