Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು. ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರೋದ್ರಿಂದ ಸಂಚಾರ ಕಿರಿಕಿರಿ ಆಗಿದೆ. ರಸ್ತೆ ಮೇಲಿನ ಮಣ್ಣು, ಕಲ್ಲು ತೆರವು ಕಾರ್ಯ ನಡೆದಿದೆ.
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಹಾಸನ, ಕೊಡಗು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..! Rain Alert Today: ಉಳಿದಂತೆ ರಾಜ್ಯದ ಎಲ್ಲಾ...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ. ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
Hescom News; ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಅವಧಿಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ವ್ಯತ್ಯಯ ಮತ್ತು ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಕುರಿತಂತೆ ಜಿಲ್ಲೆಯ ಹೆಸ್ಕಾಂ ವಿಭಾಗದ ವತಿಯಿಂದ ಸರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಳೆಗಾಲದ ಸಮಯದಲ್ಲಿ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಳಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಶಿರಸಿ, ದಾಂಡೇಲಿ, ಕಾರವಾರ ಮತ್ತು ಹೊನ್ನಾವರ ಉಪ ವಿಭಾಗಗಳಲ್ಲಿ ವಿದ್ಯುತ್ ತಂತಿಗಳ ಮೇಲಿನ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಶಿರಸಿ ವಿಭಾಗದಲ್ಲಿ 30 ಬ್ಯಾಚ್ ಗಳಲ್ಲಿ 300 ಮಂದಿ ಕಾರ್ಮಿಕರು, ದಾಡೇಲಿ ವಿಭಾಗದಲ್ಲಿ 5 ಬ್ಯಾಚ್ ನಲ್ಲಿ 50, ಕಾರವಾರ ವಿಭಾಗದಲ್ಲಿ 11 ಬ್ಯಾಚ್ ನಲ್ಲಿ 103 , ಹೊನ್ನಾವರದಲ್ಲಿ 18 ಬ್ಯಾಚ್ ನಲ್ಲಿ 144 ಸೇರಿದಂತೆ ಒಟ್ಟು 64 ಬ್ಯಾಚ್ ಗಳಲ್ಲಿ 597 ಗುತ್ತಿಗೆ ಕಾರ್ಮಿಕರನ್ನು ಮಾನ್ಸೂನ್ ಅವಧಿಯಲ್ಲಿ ಕಾರ್ಯನಿರ್ವಹಿಸಲು ನೇಮಿಸಿಕೊಳ್ಳಲಾಗಿದೆ....
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
Stock Market Down Today : ಭಾರತೀಯ ಷೇರು ಮಾರುಕಟ್ಟೆ ಮಂಗಳವಾರ ಅಂದ್ರೆ ಮೇ 20 ರಂದು ಕುಸಿತ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ನಷ್ಟ ಅನುಭವಿಸಿವೆ. ಹೂಡಿಕೆದಾರರು ಒಂದೇ ದಿನದಲ್ಲಿ ಸುಮಾರು ₹5 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಇದ್ದ ನಿರೀಕ್ಷೆಗಳು ಕಡಿಮೆಯಾಗಿವೆ. ಮಾರುಕಟ್ಟೆಯ ಮೌಲ್ಯ ಹೆಚ್ಚಿರುವುದು, ಅಮೆರಿಕದ ಕ್ರೆಡಿಟ್ ರೇಟಿಂಗ್ ಇಳಿಕೆಯಾಗಿರುವುದು, ಮಾರುಕಟ್ಟೆ ಕುಸಿತಕ್ಕೆ ಮುಖ್ಯ ಕಾರಣಗಳಾಗಿವೆ.ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 873 ಪಾಯಿಂಟ್ಗಳಷ್ಟು ಕುಸಿದು 81,186.44 ಕ್ಕೆ ತಲುಪಿದೆ. ನಿಫ್ಟಿ 50 ಕೂಡ 262 ಪಾಯಿಂಟ್ಗಳಷ್ಟು ನಷ್ಟವಾಗಿ 24,683.90 ಕ್ಕೆ ಸ್ಥಿರವಾಗಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಏರಿಳಿತಗಳು ಭಾರತದ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿವೆ.ಸೆನ್ಸೆಕ್ಸ್ ದಿನದ ಆರಂಭದಲ್ಲಿ 82,116.17 ರಲ್ಲಿ ಪ್ರಾರಂಭವಾಯಿತು. ಹಿಂದಿನ ದಿನದ ಮುಕ್ತಾಯದ ಬೆಲೆ 82,059.42 ಆಗಿತ್ತು. ದಿನದ ವಹಿವಾಟಿನಲ್ಲಿ 906 ಪಾಯಿಂಟ್ಗಳಷ್ಟು ಕುಸಿದು 81,153.70 ಕ್ಕೆ ತಲುಪಿತು. ನಿಫ್ಟಿ 50 ಕೂಡ 24,996.20 ರಲ್ಲಿ ಪ್ರಾರಂಭವಾಗಿ...
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಅಂತಾ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ ಬೇಡಿಕೆ ಹೆಚ್ಚಿನ ಮಟ್ಟದಲ್ಲೇ ಇರುತ್ತದೆ. ಆ ದರೆ, ಚಿನ್ನದ ಬೆಲೆ ಇತ್ತೀಚೆಗೆ ತೀವ್ರ ಏರಿಳಿತಕ್ಕೆ ಒಳಗಾಗುತ್ತಿದೆ. ನಿನ್ನೆ ಸೋಮವಾರ ಏರಿಕೆ ದಾಖಲಿಸಿದ್ದ ಬಂಗಾರದ ಬೆಲೆಗಳು, ಇಂದು ಮಂಗಳವಾರ ದಿಢೀರ್ ಕುಸಿತ ಕಂಡಿದೆ. ಕಳೆದ 10 ದಿನಗಳಲ್ಲಿ ಸರಾಸರಿ ಚಿನ್ನದ ಬೆಲೆಗಳು ಇಳಿಕೆಯಾಗಿವೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ. ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ...
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಹೀಗಾಗಿ, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಕುಮಟಾದಲ್ಲಿ ಕಳೆದ ಮೂರು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯ ಪಕ್ಕದ ಚರಂಡಿ ಬ್ಲಾಕ್ ಆಗಿದ್ದು , ನೀರು ಸರಾಗವಾಗಿ ಹೋಗದೇ ರಸ್ತೆ ಮೇಲೆ ನೀರು ಹರಿಯುತ್ತಿದೆ. ಈ ಭಾಗದ ವಾಲ್ಗಳ್ಳಿಯ ಬಳಿ ಮನೆ ಜಮೀನುಗಳಿಗೆ ನೀರು ನುಗ್ಗುವ ಆತಂಕ ತಂದೊಡ್ಡಿದೆ. ಇನ್ನು ಕುಮಟಾ -ಸಿದ್ದಾಪುರ ರಸ್ತೆ ನೀರು...
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಅಂತಾ ಮುನ್ಸೂಚನೆ ನೀಡಲಾಗಿದೆ. ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..! ಹೀಗಾಗಿ, ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ. ದಟ್ಟಣೆ. ದುರ್ಬಲ ಸಂಚಾರ ಮರದ ಕೊಂಬೆಗಳನ್ನು ಕಿತ್ತುಹಾಕುವ ಸಾಧ್ಯತೆಯಿದೆ ಮನೆಯೊಳಗೆ ಇರಿ ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಅಂತಾ ಸೂಚಿಸಿರೋ...









