Heavy rains forecast; ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗೂ ಭಾರಿ ಮಳೆಯ ಯೆಲ್ಲೋ ಅಲರ್ಟ್ ಇದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಅಕ್ಟೋಬರ್ 28ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ.) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು,...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
KDCC ELECTION; ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ KDCC ಬ್ಯಾಂಕ್ ಚುನಾವಣೆಯಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಟೀಂ ಗೆ ನಿರಾಸೆಯಾಗಿದೆ. ಶಾಸಕ ಹಾಗೂ ಹಾಲಿ KDCC ಅಧ್ಯಕ್ಷ ಶಿವರಾಮ್ ಹೆಬ್ಬಾರರ ಬಣ ಸಧ್ಯಕ್ಕೆ ಸ್ಪಷ್ಟ ಮುನ್ನಡೆ ಸಾಧಿಸಿದಂತಾಗಿದೆ. ಅಂದಹಾಗೆ, ಕೆಡಿಸಿಸಿ ಬ್ಯಾಂಕ್ನ ನಿರ್ದೇಶಕ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ, ಈವರೆಗೆ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಉಳಿದ ಕ್ಷೇತ್ರಗಳ ಮತ ಎಣಿಕೆ ಕುರಿತ ವಿಚಾರ ಕೋರ್ಟಿನಲ್ಲಿದೆ. ಹೀಗಾಗಿ, ಕೋರ್ಟ್ ತೀರ್ಮಾನದ ನಂತರವಷ್ಟೇ ಸ್ಪಷ್ಟತೆ ಸಿಗಲಿದೆ. ಮುಂದಿನ ಐದು ವರ್ಷಗಳ ಅವಧಿಗೆ ಹೊಸ ಆಡಳಿತ ಮಂಡಳಿಯನ್ನು ಆಯ್ಕೆ ಮಾಡಲು ಇಂದು (ಶನಿವಾರ) ಮತದಾನ ನಡೆದಿತ್ತು. ಉಪವಿಭಾಗಾಧಿಕಾರಿ ಕಾವ್ಯರಾಣಿ ಇಂದೇ ಸಂಜೆ ಮತ ಎಣಿಕೆಯ ಫಲಿತಾಂಶ ಪ್ರಕಟಿಸಿದರು. ಈ ಚುನಾವಣೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಮತ್ತು ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದೆ. ಈಗಾಗಲೇ ಹೊರಬಂದ ಫಲಿತಾಂಶಗಳ...
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, 45 ರಿಂದ 55 ಕೀಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆಯ ಹಿನ್ನೆಲೆಯಲ್ಲಿ , ಮಳೆಯ ಜೊತೆಗೆ ಗಾಳಿ ಕೂಡಾ 45-55 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಶಿಥಿಲವಾದ ಕಟ್ಟಡದಲ್ಲಿ ವಾಸಿಸುತ್ತಿರುವವರು ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಸಣ್ಣ...
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಹಾಸನ, ಮೈಸೂರು, ತುಮಕೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಅಲ್ಲದೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೂ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ...
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Accident News; ಮುಂಡಗೋಡ ತಾಲೂಕಿನ ಸನವಳ್ಳಿ ಪ್ಲಾಟ್ ಹತ್ತಿರ ಕಾರ್ ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಯಾರು ಅನ್ನೋದು ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಖ್ಯಾತ ಹಾಸ್ಯನಟ, ಕಲಿಯುಗದ ಕುಡುಕ ಖ್ಯಾತಿಯ, ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ವೃತ್ತಿ ರಂಗಭೂಮಿ, ಚಲನಚಿತ್ರ ಹಾಗೂ ಬಿಗ್ ಬಾಸ್ ಸೇರಿದಂತೆ ಸಾಕಷ್ಟು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಮನೆ ಮಾತಾಗಿದ್ದ ಕಲಿಯುಗದ ಕುಡುಕ ಎಂದೇ ಪ್ರಖ್ಯಾತರಾಗಿರುವ ರಾಜು ತಾಳಿಕೋಟೆಯವರು ಇಂದು ಮಣಿಪಾಲದಲ್ಲಿ ಸಂಜೆ ನಾಲ್ಕು ಗಂಟೆಗೆ ನಿಧನರಾಗಿದ್ದಾರೆ. ಶೂಟಿಂಗ್ ಗೆ ಬಂದಿದ್ದ ಸಮಯದಲ್ಲಿ ಅವರಿಗೆ ಸ್ವಲ್ಪ ಎದೆ ನೋವು ಕಾಣಿಸಿಕೊಂಡೊತ್ತು, ಹೀಗಾಗಿ ತಕ್ಷಣವೇ ಅವರನ್ನು ಹತ್ತಿರದ ಮಣಿಪಾಲಿಗೆ ಕರೆದುಕೊಂಡು ಹೋಗಿ, ಆಸ್ಪತ್ರೆಗೆ ಧಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ರಾಜು ತಾಳಿಕೋಟಿ ನಿಧನರಾಗಿದ್ದಾರೆ.
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ, ಅವರ ಅಧ್ಯಕ್ಷ ಗಾದಿಯ ಹಾದಿ ಬಹುತೇಕ ಸುಗಮವಾಗಿತ್ತು. ಹೀಗಾಗಿನೇ ಮಾಜಿ ಶಾಸಕ ವಿ.ಎಸ್.ಪಾಟೀಲ್ ಹಾಗೂ ವಿವೇಕ್ ಹೆಬ್ಬಾರ್ ನೆತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಅಧ್ಯಕ್ಷರ ಆಯ್ಕೆಯ ಖಚಿತತೆ ಸಿಕ್ಕಂತಾಗಿತ್ತು. ಅದಕ್ಕಾಗಿಯೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬೊಬ್ಬರಷ್ಟೇ ನಾಮಪತ್ರ ಸಲ್ಲಿಸಿ ಅವಿರೋಧ ಆಯ್ಕೆಯ ಹಾದಿ ಸುಗಮಗೊಳಿಸಿಕೊಂಡಿದ್ದರು. ಉಪಾಧ್ಯಕ್ಷರದ್ದು “ನಸೀಬಿ”ನ ಆಟ..! ಅಂದಹಾಗೆ, ಮಾರ್ಕೆಟಿಂಗ್ ಸೊಸೈಟಿಗೆ ಉಪಾಧ್ಯಕ್ಷರ ಆಯ್ಕೆ ನಿಜಕ್ಕೂ ಯಾರೂ ಉಹಿಸದ ಹಾಗೆ...
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನಂತರ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನುಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ19 ರ ರಾತ್ರಿ 11 ಗಂಟೆಯ ಸುಮಾರಿಗೆ ಚಿರತೆ ಸಹೋದರರ ಮೇಲೆ ದಾಳಿ ಮಾಡಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲನೆನಡೆಸಿದರು. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









