ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ ಮೆರವಣಿಗೆ ಇತ್ತು. ಡಿಜೆ ನೋಡುವುದಕ್ಕೆ ಹೊರಟಿದ್ದ ಬಾಲಕರು ಮಸಣಕ್ಕೆ ಸೇರಿದ್ದಾರೆ.
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು, ಪತಿ, ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ. 2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸುಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸಧ್ಯ ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಕರ್ನಲ್...
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಜೂನ್ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ, ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಹಾಗೂ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಮತ್ತು ಜುಲೈ ತಿಂಗಳಲ್ಲಿ ಸೋಲಾರ ಟೆಕ್ನೀಶಿಯನ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮೇ.25 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಯಶ್ವಸಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ...
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಕಾರವಾರ; ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್‌ಗಳು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ, ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಮೇ 7 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುರುಡೇಶ್ವರದ ಗೃಹ ಕಚೇರಿಯಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಜಿಲ್ಲೆಯ ಹಾಗೂ ಕ್ಷೇತ್ರದ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್ ಡ್ರಿಲ್) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್‌ನಲ್ಲಿ ಏ.22ರಂದು ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸತತ 11 ದಿನಗಳಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮೂಲಕ ಭಾರತವನ್ನು ಕೆಣಕುತ್ತಿದೆ. ಮತ್ತೊಂದೆಡೆ, ಉಗ್ರರು ಕನಸಿನಲ್ಲೂ ಊಹಿಸಿರದಂತಹ ತಿರುಗೇಟು ನೀಡುವುದಾಗಿ ಭಾರತ ಶಪಥ ಮಾಡಿದೆ. ಈ ಬೆಳವಣಿಗೆಗಳನ ನಡುವೆಯೇ ಕೇಂದ್ರ ಸರಕಾರ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳುವ ರಕ್ಷಣಾ ಕಾರ್ಯಾಚರಣೆಯ ಅಣುಕು ಕವಾಯತು ನಡೆಸುವಂತೆ ರಾಜ್ಯಗಳಿಗೆ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ. ಮಾಕ್ ಡ್ರಿಲ್‌ಗೆ ಭಾರತ ಸಜ್ಜು...
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಬಸಕ್ಕೆ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಸಾವು ಸಾವನಪ್ಪಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.









