Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ ಕಣ್ಣಿಗೆ ಕಾರದ ಪುಡಿ ಎರಚಿ, ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಹೀಗಾಗಿ, ಗುಂಡುಗಳು ತಲೆ ಹಾಗೂ ಎದೆಗೆ ತಗುಲಿದ್ದು ಭೀಮನಗೌಡ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹೀಗಾಗಿ, ಶವವನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದ ಹಿನ್ನಲೆ ಗುಂಡು ಹಾರಿಸಿರೋ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳು...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ಐ ಸಂತೋಷಕುಮಾರ್ ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ, ಅದು 2021 ರ ಕೊನೆಯ ದಿನ, ಅಂದ್ರೆ, ಡಿಸೆಂಬರ್ 31, ಇಡೀ ವಿಶ್ವವೇ ಹೊಸ ವರ್ಷ, ಹೊಸ ದಿನದ ನಿರೀಕ್ಷೆಯ ಖುಶಿಯಲ್ಲಿದ್ದರೆ, ಅವನೊಬ್ಬ ಮಾತ್ರ ತನ್ನ ಬುಲೆಟ್ಟು ಗಾಡಿಯ ಜೊತೆ ಜೊತೆಗೆ ಶವವಾಗಿ ಬಿದ್ದಿದ್ದ. ಕಲ್ಳಳ್ಳಿ ಹಾಗೂ ಹನಮಾಪೂರ ಗ್ರಾಮಗಳ ಮಧ್ಯದಲ್ಲಿರುವ ಕಲ್ಲಳ್ಳಿ ಹಳ್ಳದ ಚಿಕ್ಕಬ್ರಿಡ್ಜ್ ಕೆಳಗೆ ಶವವಾಗಿ ಸಿಕ್ಕಿದ್ದ. ಅವತ್ತು ಅಲ್ಲಿ ಸಿಕ್ಕವನ ಶವದ ಮೇಲೆ ರಕ್ತದ ಕುರುಹುಗಳಿದ್ದವು. ಯಾರೋ ಹಂತಕರು...
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ ಜೀವಾವಧಿ ಶಿಕ್ಷೆ, ಹಾಗೂ 10 ಸಾವಿರ ರೂ ದಂಡ ಪ್ರಕಟಿಸಲಾಗಿದೆ. ಅದ್ರಂತೆ, ಕೊಲೆಗೆ ಸಹಕರಿಸಿದ ಆರೋಪಿಗಳಾದ ಶರೀಫ್ ಮತ್ತು ನಾಝಿಯಾಗೆ ತಲಾ 3 ವರ್ಷ ಸಜೆ ಹಾಗು ತಲಾ 3 ಸಾವಿರ ರೂ ದಂಡ ವಿಧಿಸಲಾಗಿದೆ. ಅಷ್ಟೇ ಅಲ್ಲದೇ, ಕೊಲೆಯಾದ ಮೆಹಬೂಬ್ ಅಲಿ ಪತ್ನಿ ಬೇಬಿ ಆಯಿಶಾಗೆ 25 ಸಾವಿರ ರೂ ಪರಿಹಾರ ನೀಡುವಂತೆ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಪಬ್ಲಿಕ್...
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಅಂಬಿಗೇರ್, ನೌಕರ ಸಂಘದ ಅಧ್ಯಕ್ಷ ಅರುಣ್ ಹುಡೇದ್ ಗೌಡ್ರ, ಬೋಧಕೇತರ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಬೋಂಗಾಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು,ಸದಸ್ಯರು, ಹಾಗೂ ಶಿಗ್ಗಾವಿ ತಾಲೂಕಿನ ಶಿಕ್ಷಕ ವೃಂದ ತೀವ್ರ ಸಂತಾಪ ಸೂಚಿಸಿದೆ.
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
Police Raid News; ಉಡ್ತಾ ಬೆಳಗಾವಿಗೆ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅರೇಸ್ಟ್ ಆಗಿದೆ. ಕುಂದಾನಗರಿಯ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ, ಬೆಳಗಾವಿಗೆ ಗಾಂಜಾ, ಪೆನ್ನಿ, ಹೇರಾಯಿನ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಥೇಟು, ಪುಷ್ಪಾ ಚಿತ್ರದ ಸ್ಟೈಲ್ ನಲ್ಲಿ ಗ್ಯಾಂಗ್ ಕಟ್ಟಿಕೊಂಡು ಡ್ರಗ್ಸ್ ದಂಧೆಗಿಳಿದಿದ್ದವರು, ಮುಂಬೈನಲ್ಲಿ ಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಜೊತೆಗೆ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೆಕರ ಟೀಮ್ ನಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬೆಳಗಾವಿ ನಗರ ಪೊಲೀಸರಿಂದ ಇದೊಂದು ಅತಿ ದೊಡ್ಡ ಕಾರ್ಯಾಚರಣೆ ಎನ್ನಲಾಗಿದೆ. 50 ಕೆಜೆ ಗಾಂಜಾ, 9 ಜನ ಡ್ರಗ್ಸ್ ಸಪ್ಲೈಯರ್ ಅರೇಸ್ಟ್ ಆಗಿದ್ದಾರೆ. ಇದ್ರೊಂದಿಗೆ, ಬರೋಬ್ಬರಿ 30 ಲಕ್ಷ ಮೌಲ್ಯದ ಮಾದಕವಸ್ತು, 13 ಮೊಬೈಲ್, ಡಿಜಿಟಲ್ ಹ್ಯಾಂಗರ್ ತಕ್ಕಡಿ, ಎರಡು ಕಾರ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮತ್ತು ಗೋವಾ, ಮಹಾರಾಷ್ಟ್ರದಲ್ಲಿ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್, ಓಡಿಸಾ, ಮುಂಬೈ, ಪುಣೆ, ಮಧ್ಯಪ್ರದೇಶದಿಂದ ಗಾಂಜಾ ತೆಗೆದುಕೊಂಡು...
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಬುಧವಾರ, ಅಗಷ್ಟ 20 ರಂದು ಮುಂಡಗೋಡ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ, ಜಿಲ್ಲೆಯ 11 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಂತರ, ಮುಂಡಗೋಡ ತಾಲೂಕಾಡಳಿತ ಮುಂಡಗೋಡ ತಾಲೂಕಿನ ಶಾಲೆಗಳಿಗೆ ಮಳೆಯ ರಜೆ ಅಂತಾ ಘೋಷಣೆ ಮಾಡಿದ್ದಾರೆ.
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ, ಅಗಷ್ಟ 19 ರಂದು ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿನಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ.
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.









