ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!

Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಬಸ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಏಳು ಮಂದಿ ಪ್ರಯಾಣಿಕರಿಗೆ ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ, ಯಲ್ಲಾಪುರ ಸಿಪಿಐ, ಪಿಎಸ್‌ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು ಶಿಗ್ಗಾವ್ ಪಟ್ಟಣದ ಅಪೋಲೋ ಫಾರ್ಮಸಿ ಎದರು ಕರೆದು, ಕಣ್ಣಿಗೆ ಕಾರಪುಡಿ ಎರಚಿ ಮಚ್ಚಿನಿಂದ ಹೊಡೆದಿದ್ದಾನೆ. ಅದೃಷ್ಟವಶಾತ್ ಗಂಗಪ್ಪ ಮಚ್ಚಿನ ಏಟಿನಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪಾರಾಗಿದ್ದಾನೆ. ಕತ್ತಿಗೆ ಬೀಳಬೇಕಾದ ಮಚ್ಚಿನ ಏಟು ಬೆನ್ನಿಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೀಗಾಗಿ, ಗಾಯಾಳುವನ್ನು ತಕ್ಷಣವೇ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿ ಮಹ್ಮದ್ ಸಲೀಂ ನನ್ನು ಪೊಲೀಸ್ರು ಬಂಧಿಸಿದ್ದಾರೆ. ಇದನ್ನೂ ಓದಿ👉ಹೆಂಡತಿಯ ಅಪ್ಪ,...

ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!

ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!

 Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ತನ್ನ ನೋವನ್ನು ವಿಡಿಯೋ ಮೂಲಕ ಹಂಚಿಕೊಂಡಿರೋ ಶಿವರಾಜ್, ಕಾರಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹುಬ್ಬಳ್ಳಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಸುದ್ದಿ ತಿಳಿದ ಅಕ್ಷಯ ಚಲವಾದಿ ಹಾಗೂ ಸ್ನೇಹಿತರು, ಕಾರಲ್ಲಿ ಒದ್ದಾಡುತ್ತಿರೋದನ್ನು ನೋಡಿ ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ‌. ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..! ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಳಕ್ಕೆ...

ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!

ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!

Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು ಹಾಗೂ ಸಂಬಂಧಿಕರಲ್ಲಿ ಹುಡುಕಾಡಿ ವಿಚಾರಿಸಿದ್ರೂ ಈವರೆಗೂ ಸಿಕ್ಕಿಲ್ಲ, ಹೀಗಾಗಿ, ಹುಡುಕಿ ಕೊಡುವಂತೆ ಅವ್ರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ👉ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!

ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!

ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!

ED Raid; ಕಾರವಾರ -ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆಯ ಮೇಲೆ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ದಾಳಿಯ ಸಮಯದಲ್ಲಿ ಶಾಸಕ ಸತೀಶ್ ಸೈಲ್ ಅವರು ಅಧಿವೇಶನಕ್ಕಾಗಿ ಬೆಂಗಳೂರಿಗೆ ತೆರಳಿದ್ದ ಕಾರಣ ಮನೆಯಲ್ಲಿ ಇರಲಿಲ್ಲ. ಇಡಿ ಅಧಿಕಾರಿಗಳ ತಂಡವು 4-6 ಕಾರುಗಳಲ್ಲಿ ಬಂದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ, ಮತ್ತು ಮನೆಯ ಮುಂಭಾಗದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ಪ್ರಕರಣದಲ್ಲಿ ಸತೀಶ್ ಸೈಲ್ ಅವರು ಈ ಹಿಂದೆ ಜಾಮೀನಿನ ಮೇಲೆ ಹೊರಗಿದ್ದರು. ಇದಕ್ಕೂ ಮೊದಲು, ಬೇಲೆಕೇರಿ ಅದಿರು ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರನ್ನು ದೋಷಿಯೆಂದು ಘೋಷಿಸಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು, ಆದರೆ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಈ ದಾಳಿಯು ಕರ್ನಾಟಕ, ಗೋವಾ, ಮತ್ತು ಮುಂಬೈನಲ್ಲಿ 15 ಸ್ಥಳಗಳಲ್ಲಿ ನಡೆಯುತ್ತಿದೆ ಎಂದು ಇಡಿ...

ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿ‌ನ ಇಬ್ಬರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿ‌ನ ಇಬ್ಬರ ಬಂಧನ..!

Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ‌. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ ಹುಬ್ಬಳ್ಳಿ ಕಡೆಗೆ ಗಾಂಜಾ ಮಾರಾಟ ಮಾಡಲು ಹೊರಟಿದ್ದವರ ಹಿಂದೆ, ಹಾನಗಲ್ಲಿನ ಚೋರ್ ಇಮ್ರಾನ್ ಕೈಚಳಕ ಇತ್ತು. ಆತನಿಂದಲೇ ಗಾಂಜಾ ಪಡೆದುಕೊಂಡು ಮಾರಾಟ ಮಾಡಲು ಹೊರಟಿದ್ದ ಇಬ್ಬರು ಮುಂಡಗೋಡ ಪೊಲೀಸರ ಬಲೆಗೆ ಬಿದ್ದಿದ್ದಾರೆ. 60 ಸಾವಿರ ಮೌಲ್ಯದ್ದು..! ಇನ್ನು, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಬಳಿ PSI ಪರಶುರಾಮ್ ಮಿರ್ಜಿಗಿ, ಮತ್ತವರ ಕ್ರೈಂ ಟೀಂ ಗೆ ಸಿಕ್ಕಿಬಿದ್ದಿರೋ ಆರೋಪಿಗಳ ಹತ್ರ ಇದ್ದ ಗಾಂಜಾ ಹಾನಗಲ್ಲಿನಿಂದ...

ಜನ-ಧನ್‌ ಅಕೌಂಟ್‌ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದೆ RBI, ಅಪ್‌ಡೇಟ್ ಮಾಡುವುದು ಹೇಗೆ..?

ಜನ-ಧನ್‌ ಅಕೌಂಟ್‌ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದೆ RBI, ಅಪ್‌ಡೇಟ್ ಮಾಡುವುದು ಹೇಗೆ..?

Jan-Dhan Account re-KYC News: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಬುಧವಾರ ಮುಕ್ತಾಯಗೊಂಡ ಹಣಕಾಸು ಸಮಿತಿ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು ಅಷ್ಟೇ ಅಲ್ಲದೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದೆ. ಇದೇ ವೇಳೆಯಲ್ಲಿ ಪ್ರಧಾನ ಮಂತ್ರಿ ಜನ ಧನ್ ಯೋಜನೆಯು 10 ವರ್ಷ ಪೂರೈಸಿರವುದರ ಹಿನ್ನೆಲೆ ಗ್ರಾಹಕರ ಅಕೌಂಟ್‌ ರಿ-ಕೆವೈಸಿ ಮಾಡಬೇಕೆದು ಹೇಳಿದೆ. ಹಣಕಾಸು ಸಮಿತಿಯ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಬ್ಯಾಂಕ್‌ಗಳು ಗ್ರಾಹಕರ ರಿ-ಕೆವೈಸಿ ಕುರಿತು ಕ್ಯಾಂಪ್ಸ್ ಶುರುಮಾಡಿವೆ ಎಂದು ತಿಳಿಸಿದ್ದಾರೆ. 2014ರಲ್ಲಿ ಶುರುವಾದ ಪ್ರಧಾನ ಮಂತ್ರಿ ಜನ ಧನ್ ಯೋಜನೆ(PMJDY) ಸುಾರ 56 ಕೋಟಿ ಗ್ರಾಹಕರ ಅಕೌಂಟ್‌ಗಳನ್ನು ಇದರಡಿ ಹೊಂದಿದೆ. ಈ ಅಕೌಂಟ್‌ಗಳು 2014 ರಿಂದ 2015ರ ನಡುವೆ ಓಪನ್ ಆಗಿದ್ದು, ಇದೀಗ 10 ವರ್ಷ ತಲುಪಿರುವ ಹಿನ್ನೆಲೆಯಲ್ಲಿ ಅಕೌಂಟ್‌ದಾರರ ರಿ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ” ಜನ-ಧನ್ ಯೋಜನೆಯು 10 ವರ್ಷಗಳನ್ನು ಪೂರೈಸಿದೆ, ತುಂಬಾ ಸಂಖ್ಯೆಯ ಅಕೌಂಟ್‌ಗಳು ಮರು-ಕೆವೈಸಿಗೆ ಒಳಗಾಗಿವೆ”...

ಮುಂಡಗೋಡ ಪೊಲೀಸರ ಮಿಂಚಿನ ದಾಳಿ,  ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೊ ಪೊಲೀಸರು15 ಸಾವಿರ ರೂ.ಮೌಲ್ಯದ 260 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸಿಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ, ಪಿಎಸ್ಐ ಪರಶುರಾಮ್, ಸಿಬ್ಬಂದಿಗಳಾದ ಕೋಟೆಶ್ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ್ ಮುಧೋಳ್, ಬಸವರಾಜ್ ಒಡೆಯರ್, ಮಂಜುನಾಥ್ ಓಣಿಕೇರಿ ಪಾಲ್ಗೊಂಡಿದ್ದರು.

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಸಿಡಿಪಿಒ)ಗಳಿಂದ ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಹಣ ಸಂದಾಯವಾಗಲಿದೆ. ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, ಬೆಳಗಾವಿಯಲ್ಲಿ 11,70,941 ಫಲಾನುಭವಿಗಳಿದ್ದರೆ, ಕೊಡಗು ಜಿಲ್ಲೆಯಲ್ಲಿ ಅತಿ ಕಡಿಮೆ 1,21,950 ಅರ್ಹರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳ ಪರಿಶೀಲಿಸಿದರು. ಈ ಪೈಕಿ 3 ಗಂಡು,17 ಹೆಣ್ಣು ಸೇರಿದಂತೆ ಒಟ್ಟು 20 ನವಿಲುಗಳು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಕೀಟನಾಶಕ ಸೇವಿಸಿ ನವಿಲುಗಳು ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಉದ್ದೇಶಪೂರ್ವಕವಾಗಿ ವಿಷಪ್ರಾಶನ ಮಾಡಿಸಲಾಗಿದೆಯೇ ಅಥವಾ ಬೆಳೆಗೆ ಸಿಂಪಡಿಸಿದ್ದ ಕೀಟನಾಶಕವನ್ನು ನವಿಲುಗಳು ಸೇವಿಸಿ ಸಾವನ್ನಪ್ಪಿವೆಯೇ ಎಂಬುದು ತಿಳಿದುಬಂದಿಲ್ಲ. ಘಟನೆಗೆ ಕಾರಣವೇನೆಂದು ತನಿಖೆ ನಡೆಸಿ 5 ದಿನಗಳಲ್ಲಿ ವರದಿ ಸಲ್ಲಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ...