ಪಶ್ಚಿಮ ಬಂಗಾಲ, ಅಸ್ಸಾಂ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹಿನ್ನೆಲೆಯಲ್ಲಿ ಮುಂಡಗೋಡಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ರು.

ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಬಿಜೆಪಿಗರು ಚುನಾವಣಾ ಗೆಲುವಿಗೆ ಸಂಭ್ರಮಿಸಿದರು. ಜಯಘೋಷಗಳನ್ನು ಕೂಗಿ
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ರಾಜ್ಯ ಮಾಧ್ಯಮ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಮಂಡಲ ಅಧ್ಯಕ್ಷ ಮಂಜುನಾಥ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಎಲ್ ಟಿ ಪಾಟೀಲ್ ಮತ್ತು ಅಶೋಕ್ ಚಲುವಾದಿ ಅನೇಕ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
