ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!

ಮುಂಡಗೋಡ: ಈದ್ ಮೀಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಡಗೋಡ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಹಬ್ಬದ ಮುನ್ನಾದಿನವೇ ಪಟ್ಟಣದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರೂಟ್ ಮಾರ್ಚ್ ನಡೆಸಿ ಶಾಂತಿ–ಸುವ್ಯವಸ್ಥೆಯ ಸಂದೇಶ ಸಾರಿದರು.

ಪೊಲೀಸ್ ಠಾಣೆಯಿಂದ ಆರಂಭಗೊಂಡ ರೂಟ್ ಮಾರ್ಚ್ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಸಾಗಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮವಸ್ತ್ರದ ರೂಟ್ ಮಾರ್ಚ್ ಸಾರ್ವಜನಿಕರ ಗಮನ ಸೆಳೆಯಿತು.

ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಈದ್ ಮೀಲಾದ್ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.