ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸ್ಥಳದಲ್ಲೇ ಸಾ*ವು, 18 ಜನರಿಗೆ ಗಾಯ..!

Bus Accident; ಅಂಕೋಲಾ: ತಾಲೂಕಿನ ಅಗಸೂರಿನ ಬಳಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 18 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೆಳಗಾವಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಕರನ್ನು ಕರೆದುಕೊಂಡು ಸಾಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.

ಸೋಮವಾರ ನಸುಕಿನ 2 ಗಂಟೆಗೆ ಸುಮಾರಿಗ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Bus Accident; ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಅಂಕೋಲಾ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನೂ ಗಂಭೀರ ಗಾಯಗೊಂಡ 5 ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಂಕೋಲಾ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ,👇

ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!

error: Content is protected !!