ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ಟೋಬರ್ 23ರ ಸಂಜೆ ಬಿಡುಗಡೆಗೊಂಡಿರುವ ಹವಾಮಾನ ವರದಿಯ ಪ್ರಕಾರ, ರಾಜ್ಯದ ಒಳನಾಡು ಹಾಗೂ ಕರಾವಳಿ ಭಾಗದ ಸುಮಾರು 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದೆ.
ಮಳೆ ನಿರೀಕ್ಷಿತ ಪ್ರಮುಖ ಜಿಲ್ಲೆಗಳು..!
ಉತ್ತರ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳು.
ಇನ್ನು ಮಲೆನಾಡು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಭಾಗದ ತುಮಕೂರು, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ.
ಎಚ್ಚರಿಕೆ ಸಂದೇಶ..!
ಮಳೆಯ ಜತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ, ಸಾರ್ವಜನಿಕರು ಮರದ ಕೆಳಗೆ ನಿಲ್ಲದಂತೆ ಹಾಗೂ ವಿದ್ಯುತ್ ಕಂಬಗಳಿಂದ ದೂರವಿರುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
