ಪಶ್ಚಿಮ ಪದವೀಧರ ಕ್ಷೇತ್ರ – ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಮುನ್ನಡೆ

ಧಾರವಾಡ; ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಧಾರವಾಡದಲ್ಲಿ ನಡೆಯುತ್ತಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ಗಮನಾರ್ಹ ಮುನ್ನಡೆ ಸಾಧಿಸಿದ್ದು ​2,206 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

​ಮೊದಲ ಸುತ್ತಿನಲ್ಲಿ ಒಟ್ಟು 14,000 ಮತಗಳ ಎಣಿಕೆ ಮುಕ್ತಾಯಗೊಂಡಿದ್ದು, ಸ್ಪರ್ಧಿಗಳು ಪಡೆದ ಮತಗಳ ವಿವರ ಇಲ್ಲಿದೆ:
​ಬಿಜೆಪಿ (ಎಸ್.ವಿ. ಸಂಕನೂರು): 6,483 ಮತಗಳು
​ಕಾಂಗ್ರೆಸ್ (ಮೋಹನ್ ಲಿಂಬಿಕಾಯಿ): 4,277 ಮತಗಳು

​2,206 ಮತಗಳ ಮುನ್ನಡೆ..!
ಮೊದಲ ಸುತ್ತಿನ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ತಮ್ಮ ಸಮೀಪದ ಸ್ಪರ್ಧಿ, ಕಾಂಗ್ರೆಸ್‌ನ ಮೋಹನ್ ಲಿಂಬಿಕಾಯಿ ಅವರಿಗಿಂತ 2,206 ಮತಗಳ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರಂಭಿಕ ಹಂತದಲ್ಲಿ ಹಿನ್ನಡೆ ಅನುಭವಿಸಿದ್ದು, ಮುಂದಿನ ಸುತ್ತುಗಳ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ.