ಕಾರವಾರ: ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷೆ ಫೆ.28 ರಿಂದ ಮಾ.17 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
