Home BIG BREAKING ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಧಾರವಾಡ, ಕೊಪ್ಪಳ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಈ ಜಿಲ್ಲೆಗಳಿಗೆ ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ. ಡಿ.22ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಮಾರುತದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ.

ಮುಂದಿನ 2 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಕನಿಷ್ಠ ತಾಪಮಾನದ ಈಗಿನ ಪರಿಸ್ಥಿತಿ ಬಹುತೇಕ ಮುಂದುವರಿಯಲಿದೆ, ನಂತರದ ಕ್ರಮೇಣ 2-3°C ಏರಿಕೆಯಾಗಲಿದೆ ಎಂದು ತಿಳಿಸಲಾಗಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ, ಬಹುತೇಕ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.