Soldier Dies News; ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭುನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4(A)ನಲ್ಲಿ ನಡೆದಿದೆ.
ಖಾನಾಪುರ ತಾಲೂಕಿನ ಸೂರಜ್ ದ್ರೌಪದ್ಕರ್ (29) ಎಂಬುವನೇ ಮೃತ ಯೋಧನಾಗಿದ್ದಾನೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ ಪರಿಣಾಮ, ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಯೋಧ ಸೂರಜ್ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ👇
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!