ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ವ್ಯಕ್ತಿಯೋರ್ವನ ಮೇಲೆ ಆತನ ಮಗನಿಂದಲೇ ಭೀಕರ ಹತ್ಯೆಗೆ ಯತ್ನ ನಡೆದಿದೆ. ಪರಿಣಾಮ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಲ್ಲೆ ನಡೆಸಿದ ಶಿವರಾಜ ಪರಾರಿಯಾಗಿದ್ದಾನೆ‌. ಇನ್ನು ನಾಗಮ್ಮ ಎಂಬುವವಳನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ‌.

ಶಿವಾನಂದ (47) ಎಂಬುವವನ ಮೇಲೆ ಭೀಕರ ಹತ್ಯೆಗೆ ಯತ್ನ ನಡೆದಿದೆ. ಮಗನಿಂದಲೇ ಕಂದಲಿಯಿಂದ ಹಿಂದಿನಿಂದ ಬಂದು ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನ ನಡೆದಿದೆ. ಸದ್ಯ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶಿವಾನಂದನನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.

ಹಲ್ಲೆಗೊಳಗಾದ ಶಿವಾನಂದ

ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಲ್ಲೆ ಮಾಡಿದ ಆರೋಪಿ

ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ..