ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

Student Admitted;
ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 4 ನೂರು ವಿದ್ಯಾರ್ಥಿಗಳ ಪೈಕಿ 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ದಾಖಲಾಗಿದ್ದಾರೆ.

ಎಂದಿನಂತೆ ಶುಕ್ರವಾರ ಮದ್ಯಾನ್ಹ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ ತಾಲೂಕಾಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಧಿಕಾರಿಗಳ ಭೇಟಿ..!
ಮುಂಡಗೋಡ ಪಿಐ ರಂಗನಾಥ್ ಸೇರಿ ಹಲವು ಅಧಿಕಾರಿಗಳ ತಂಡ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನು ತಾಲೂಕಾಸ್ಪತ್ರೆಯ ವೈದ್ಯರ ತಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದೆ.

ಪಾಲಕರ ಆಕ್ರೋಶ..!
ತಮ್ಮ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಾಲೂಕಾಸ್ಪತ್ರೆಗೆ ಧಾವಿಸಿದ ವಿದ್ಯಾರ್ಥಿಗಳ ಪೋಷಕರು ಮಾದರಿ ಶಾಲೆಯ ಶಿಕ್ಷಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಾಲೆತ ಶಿಕ್ಷಕರೇ ಸರಿಯಿಲ್ಲ ಅಂತಾ ಆರೋಪಿಸಿದ್ದಾರೆ.

error: Content is protected !!