ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Top Stories
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Tag: ಆತ್ಮಹತ್ಯೆ
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!
ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...



