Home ಮಹಾಮಳೆ

Tag: ಮಹಾಮಳೆ

Post
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

Post
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ...

Post
ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!

ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!

  ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ‌. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜ‌ನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ‌. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...

Post
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!

ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!

 ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ.  ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ‌. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32),...

Post
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್  ಜಲಾವೃತ, ಸಂಚಾರ ಬಂದ್..!

ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!

 ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.

Post
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...

error: Content is protected !!