Home crime news

Tag: crime news

Post
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ‌ನಿಮಗೂ ಹಾಕ್ತಾರೆ ಗಾಳ..!

ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ‌ನಿಮಗೂ ಹಾಕ್ತಾರೆ ಗಾಳ..!

ಯಲ್ಲಾಪುರ ಪೊಲೀಸರು ಕೊ‌ಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು‌. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...

Post
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!

ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!

 ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ.  ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...

Post
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?

ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?

 ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....

Post
ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!

ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!

 ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ‌ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ...

Post
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

 ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...

Post
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!

ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!

ಮುಂಡಗೋಡ: ತಾಲೂಕಿನ ಇ‌ಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ‌. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾ‌ನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!

ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!

 ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದೆ. ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ, ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ...

Post
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!

ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!

ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!