ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಬೆಳಗಾವಿ ಸಮೀಪ ಕಣಬರಗಿ ಬಳಿ ಭೀಕರ ಅಪಘಾತವಾಗಿದೆ. ಕ್ರೂಸರ್ ನಾಲೆಗೆ ಉರುಳಿ ಬಿದ್ದ ಪರಿಣಾಮ, 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಎನ್ನಲಾಗಿದೆ. ಕೂಲಿ ಕೆಲಸಕ್ಕಾಗಿ ಕ್ರೂಸರ್ ವಾಹನದಲ್ಲಿ ಬೆಳಗಾವಿಯತ್ತ ಬರುತ್ತಿದ್ರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಳ್ಳಾರಿ ನಾಲೆಗೆ ಕ್ರೂಸರ್ ವಾಹನ ಪಲ್ಟಿಯಾಗಿ ಬಿದ್ದು 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಿನಗೂಲಿ ನೌಕರರು ರೈಲ್ವೆ ಬ್ರಿಡ್ಜ್...
Top Stories
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Tag: crime news
ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ. ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?
ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...
ವರೂರು ಬಳಿ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ..!
ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ ಎಲ್ ಬಳಿ ರಾ.ಹೆದ್ದಾರಿ 4 ರಲ್ಲಿ, ಭೀಕರ ಸರಣಿ ಅಪಘಾತವಾಗಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ವರೂರಿನ VRL ಬಳಿ, ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಕಂಡು ಮೃತ ವ್ಯಕ್ತಿಯನ್ನು ನೋಡಲು ಬಂದ ಐವರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಹೀಗಾಗಿ ಐವರಿಗೆ ಗಂಭೀರ ಗಾಯವಾಗಿದೆ. ಇದ್ರಲ್ಲಿ ಗಾಯಾಳುವನ್ನು ಸಾಗಿಸಲು ಬಂದಿದ್ದ ಅಂಬ್ಯುಲೆನ್ಸ್ ಸಿಬ್ಬಂದಿಗೂ ಗಾಯವಾಗಿದೆ....
ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!
ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ. ನಾಗರಾಜ ಹನುಮಂತ ಚವ್ಹಾಣ(45), ಆಶೋಕ ನಿಂಗಪ್ಪ ಮಂಜಣ್ಣನವರ್(28), ಫಕ್ಕೀರಾ ಸಾಕಪ್ಪ ಕಟ್ಟಿಮನಿ(30), ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.
ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!
ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...
40 ದಿನದ ಕಂದಮ್ಮನನ್ನೇ ಕೊಲೆ ಮಾಡಲು ಯತ್ನಿಸಿದ್ಲಾ ತಾಯಿ, ಆಸ್ಪತ್ರೆ ಕಿಟಕಿಯಿಂದ ಎಸೆದ ಮಗು ಏನಾಯ್ತು..?
ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅಪಹರಣವಾಗಿದೆ ಅಂತಾ ಸುಳ್ಳು ಕತೆ ಕಟ್ಟಿದ್ದ ಚಾಲಾಕಿ ಹೃದಯಹೀನ ತಾಯಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಡ್ರಾಮಾ..? ಕಳೆದ ಸೋಮವಾರ ಕಿಮ್ಸ್ ನಲ್ಲಿ ಮಗುವಿನ ಕಳ್ಳತನವಾಗಿದೆ, ಯಾರೋ ಮಗುವನ್ನು ನನ್ನ ಕೈಯಿಂದ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ ಅಂತಾ ದೂರು ನೀಡಿದ್ದಳು ಮಗುವಿನ ತಾಯಿ. ಹೀಗಾಗಿ, ಪ್ರಕರಣ ಭಾರೀ ಸದ್ದು ಮಾಡಿತ್ತು. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ವಿದ್ಯಾನಗರ ಠಾಣೆಯ ಪೊಲೀಸರಿಗೆ, ಮಗು ಕಾಣೆಯಾದ ಮರುದಿನವೇ...