Home crime news

Tag: crime news

Post
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!

ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!

ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್...

Post
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!

ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!

ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ‌. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...

Post
ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ

ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ

ಮುಂಡಗೋಡ: ತಾಲೂಕಿನ ಮೂಡಸಾಲಿ ಕ್ರಾಸ್ ಬಳಿ ಬಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಎತ್ತಿನ ಚಕ್ಕಡಿಗೆ KSRTC ಬಸ್ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಕಡೆ ಹೊರಟಿದ್ದ ಚಕ್ಕಡಿಗೆ ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಗ್ರಾಮದ ಸಂತೋಷ ತಿಪ್ಪಣ್ಣ ಹರಿಜನ (30), ಮಂಜುನಾಥ್ ಬಸಪ್ಪ ಡೊಳ್ಳೇಶ್ವರ್ (38) ಎಂಬುವರಿಗೆ ಗಾಯವಾಗಿದೆ. KSRTC ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರೀ ಅವಘಡ ತಪ್ಪಿದಂತಾಗಿದೆ. ತಡರಾತ್ರಿಯಲ್ಲಿ ಘಟನೆ...

Post
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ‌. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...

Post
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...

Post
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾ‌ನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ‌ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...

Post
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...

Post
ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಅಂಕೋಲಾ: ಉದ್ಯಮಿ ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ‌‌‌.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ...

Post
ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ‌ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ‌. ತೀವ್ರವಾಗಿ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ‌. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌.

error: Content is protected !!