Home mundgod news

Tag: mundgod news

Post
ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ‌ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!

ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ‌ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!

    ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ‌. ಅಕ್ರಮ‌ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ‌. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ‌. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...

Post
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

  ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ‌ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ‌ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...

Post
ಮುಂಡಗೋಡಿನ ಯುವಕ ಕಣ್ಮರೆ, ಎಲ್ಲಾದ್ರೂ ಸಿಕ್ಕರೆ ಮಾಹಿತಿ ನೀಡಿ..!

ಮುಂಡಗೋಡಿನ ಯುವಕ ಕಣ್ಮರೆ, ಎಲ್ಲಾದ್ರೂ ಸಿಕ್ಕರೆ ಮಾಹಿತಿ ನೀಡಿ..!

ಮುಂಡಗೋಡಿನ ಯುವಕನೋರ್ವ ನಾಪತ್ತೆಯಾಗಿದ್ದಾನೆ. 23 ವರ್ಷದ ಯುವಕ ಜೂನ್ 3 ರಿಂದಲೇ ನಾಪರ್ತೆಯಾಗಿದ್ದು ಇದುವರೆಗೂ ಪತ್ತೆಯಾಗಿಲ್ಲ. ಹೀಗಾಗಿ, ನಾಪತ್ತೆಯಾಗಿರೋ ಯುವಕನನ್ನು ಹುಡುಕಿಕೊಡಿ ಅಂತಾ ಪೋಷಕರು ಮನವಿ ಮಾಡಿದ್ದಾರೆ‌. ಅಂದಹಾಗೆ, ಯುವಕನ ಹೆಸರು ಸಿದ್ದಾರೂಢ ಗೌಳಿ (23) ಈತ ಮುಂಡಗೋಡ ಪಟ್ಟಣದ ಆನಂದನಗರ ನಿವಾಸಿಯಾಗಿದ್ದು ಕಳೆದ ಜೂನ್ 3 ರಂದು ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋದವನು ಎರಡು ದಿನ ಕಳೆದರೂ ವಾಪಸ್ ಮನೆಗೆ ಬಂದಿಲ್ಲ‌. ಹೀಗಾಗಿ, ಕುಟುಂಬಸ್ಥರು ಪರಿಚಯವಿರುವ ಎಲ್ಲಾ ಕಡೆ ತಿರುಗಾಡಿ ಯುವಕನನ್ನು...

Post
ಸನವಳ್ಳಿಗಷ್ಟೇ ಸೀಮಿತವಾಯ್ತಾ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧದ ಸಮರ..? ಸಾಹೇಬ್ರೆ, ತಾಲೂಕಿನೆಲ್ಲೆಡೆ ಇದೆ ಅಕ್ರಮ ಭಟ್ಟಿಗಳು..! ಕ್ರಮ ಯಾವಾಗ..?

ಸನವಳ್ಳಿಗಷ್ಟೇ ಸೀಮಿತವಾಯ್ತಾ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧದ ಸಮರ..? ಸಾಹೇಬ್ರೆ, ತಾಲೂಕಿನೆಲ್ಲೆಡೆ ಇದೆ ಅಕ್ರಮ ಭಟ್ಟಿಗಳು..! ಕ್ರಮ ಯಾವಾಗ..?

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಹೆಜ್ಜೆಗೊಂದರಂತೆ ಇರೋ ಅಕ್ರಮ ಇಟ್ಟಿಗೆ ಭಟ್ಟಿಗಳ‌ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಸಾಹೇಬ್ರು ಸಮರ ಸಾರಿದ್ದಾರೆ‌. ನಿನ್ನೆ ಇಡೀ ಸನವಳ್ಳಿಯ ಅಕ್ರಮ ಇಟ್ಟಿಗೆ ಭಟ್ಟಿ ಮಾಲೀಕರಿಗೆ ಛಳಿ ಬಿಡಿಸಿದ್ದಾರೆ. ಹೀಗಾಗಿ, ತಾಲೂಕಿನ ಮಂದಿ ತಹಶೀಲ್ದಾರರ ಖಡಕ್ ಕ್ರಮಕ್ಕೆ ಶ್ಲಾಘನೆ ವ್ಯಕ್ತ ಪಡಿಸ್ತಿದಾರೆ. ನಿಜ..! ತಾಲೂಕಿನ ಸನವಳ್ಳಿಯಲ್ಲಿ ಇಟ್ಟಿಗೆ ಭಟ್ಟಿಗಳ ರಾಜಾರೋಶತನಕ್ಕೆ ಕಡಿವಾಣ ಹಾಕುವ ಅವಶ್ಯಕತೆ ಇದ್ದೇ ಇದೆ. ಅದನ್ನ ಇಡೀ ತಾಲೂಕಿನ ಜನ ಬಯಸಿದ್ರು. ಕಾರಣವೆಂದ್ರೆ, ಅಲ್ಲಿ ಸಾಕಷ್ಟು ಕಾನೂನುಗಳ ಉಲ್ಲಂಘನೆ ಆಗ್ತಿತ್ತು....

Post
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!

ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!

 ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...

Post
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?

ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?

ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...

Post
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

 ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Post
ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ‌ ಮಾಡಿ ಶುಭ ಕೋರಿದ ವಿಎಸ್ಪಿ..!

ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ‌ ಮಾಡಿ ಶುಭ ಕೋರಿದ ವಿಎಸ್ಪಿ..!

ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ‌ ಮಾಡಿ ಶುಭಕೋರಿದ್ರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.

error: Content is protected !!