Unity Walk Thon; ಮುಂಡಗೋಡ ಪೊಲೀಸ್ ಠಾಣಾ ವತಿಯಿಂದ ಸರ್ದಾರ ವಲ್ಲಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ನಿಮಿತ್ತ ಏಕತಾ ವಾಕ್ ಥಾನ್ ಆಚರಿಸಲಾಯಿತು. ಮುಂಡಗೋಡ ಪೊಲೀಸ್ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು. ರನ್ನ ಫಾರ್ ಯುನಿಟಿ ಎಂಬ ಘೋಷ ವಾಕ್ಯದಡಿ ಠಾಣೆಯಿಂದ ಬಂಕಾಪುರ ರಸ್ತೆ- ಕಂಬಾರಗಟ್ಟಿ ಪ್ಲಾಟ್- ಟಿ,ಡಿ,ಬಿ ರೋಡ-ಹುಬ್ಬಳ್ಳಿ ರಸ್ತೆ-ಬಸವನಬೀದಿ- ಬನ್ನಿಕಟ್ಟಾ-ಶಿವಾಜಿ ಸರ್ಕಲ್ ಮುಖಾಂತರ ಪೊಲೀಸ್ ಠಾಣೆಗೆ...
Top Stories
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
Tag: #mundgodnews
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
Students Protest; ಮುಂಡಗೋಡ ತಾಲೂಕಿನ ಪಾಳಾದಲ್ಲಿ ಸಮರ್ಪಕ ಬಸ್ ಕಲ್ಪಿಸುವಂತೆ ಆಗ್ರಹಿಸಿ, ಶಾಲಾ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ, ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹತ್ತಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರು, ಪೋಷಕರು ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಲೇ ಬೇಕು ಅಂತಾ ಹಠ ಹಿಡಿದು ಪ್ರತಿಭಟನೆ ಮುಂದುವರೆಸಿದ್ರು. ಅಸಲು, ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ...
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ...
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!
Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...









