Home Police news

Tag: Police news

Post
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!

ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಟಿಬೇಟಿಯ‌ನ್ ಕಾಲೋನಿ ಬಳಿ‌ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!

ಟಿಬೇಟಿಯ‌ನ್ ಕಾಲೋನಿ ಬಳಿ‌ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!

ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...

Post
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?

ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?

ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ‌ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ‌ ಮುಂಡಗೋಡ...

Post
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ‌‌..!

ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ‌‌..!

ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....

Post
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!

ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!

ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...

Post
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ

ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ

ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ.  ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!

ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ‌ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒ‌ಂದು ತಿಂಗಳ ಹಿಂದೆಯೇ ‌ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ. ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿ‌ನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ...

Post
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!

ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...

Post
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!

ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿ‌ನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ...

Post
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?

ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?

  ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ‌. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.  ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...

error: Content is protected !!