Home Police news

Tag: Police news

Post
ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!

ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!

 ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ‌ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...

Post
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

 ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...

Post
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!

ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!

ಮುಂಡಗೋಡ: ತಾಲೂಕಿನ ಇ‌ಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ‌. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾ‌ನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!

ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!

 ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದೆ. ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ, ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ...

Post
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!

ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!

ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

Post
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

 ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...

Post
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?

ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?

ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ‌. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6  ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.  ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...

Post
ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!

ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!

ಧಾರವಾಡ – ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆಗೆ ಬಂದಿದ್ದ ಶ್ರೀಗಳ ಕಾರು ಅಪಘಾತವಾಗಿದೆ. ಬೆಳಗಾವಿ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ಕಾರ ನುಜ್ಜುಗುಜ್ಜಾಗಿದೆ. ಆದ್ರೆ ಏರಬ್ಯಾಗ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಗಳ ಕಾಲಿಗೆ ಚಿಕ್ಕಪುಟ್ಟ ಗಾಯವಾಗಿದೆ. ಸದ್ಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....

Post
ಸಿನಿಮಿಯ ರೀತಿಯಲ್ಲಿ ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು, ಅಷ್ಟಕ್ಕೂ ಹತ್ಯೆ ನಂತರ ಪೊಲೀಸರಿಗೆ ಕರೆ ಮಾಡಿದ್ರಾ ಹಂತಕರು..?

ಸಿನಿಮಿಯ ರೀತಿಯಲ್ಲಿ ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು, ಅಷ್ಟಕ್ಕೂ ಹತ್ಯೆ ನಂತರ ಪೊಲೀಸರಿಗೆ ಕರೆ ಮಾಡಿದ್ರಾ ಹಂತಕರು..?

 ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಹಂತಕರ ಅರೆಸ್ಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸ್ರು ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ. ಚಂದ್ರಶೇಖರ್ ಗುರೂಜಿಯವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಹಂತಕರು, ಬಟ್ಟೆ ಬದಲಿಸಿ ಕಾರಲ್ಲೇ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿದ್ರು. ಇದೇ ವೇಳೆ ಮೊಬೈಲ್ ಟವರ್ ಲೋಕೇಶನ್ ಆಧಾರದಲ್ಲಿ ಹತ್ಯೆಯಾದ ಕೇವಲ 4 ಗಂಟೆಯಲ್ಲೇ ಹಂತಕರನ್ನು ಎಳೆದು ತಂದಿದ್ದಾರೆ ಪೊಲೀಸರು. ಆರೋಪಿಗಳಿಂದಲೇ ಕರೆ..! ಇನ್ನು, ಹಾಗೆ ಗುರೂಜಿಯ ಹತ್ಯೆಯ...

error: Content is protected !!