Home Police news

Tag: Police news

Post
ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!

ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಕಲ್ಲಿನಿಂದ ಜಜ್ಜಿ ಅಣ್ಣ ಹಾಗೂ ತಂಗಿಯ ಬರ್ಭರ ಹತ್ಯೆ ಮಾಡಿರೊ ಘಟನೆ, ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕರಗೌಡ ಬಿರಾದಾರ್ (40), ನಾನಾಗೌಡ ಯರಗಲ್ (45) ಕೊಲೆಗೀಡಾದ ಅಣ್ಣ ಹಾಗೂ ತಂಗಿಯಾಗಿದ್ದಾರೆ. ರಾಜಶ್ರೀ ಪತಿ ಶಂಕರಗೌಡ ಹಾಗೂ ಇತರರು ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ಹೊರ ಭಾಗದಲ್ಲಿ ಘಟನೆ ನಡೆದಿದೆ‌. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ‌. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್‌ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...

Post
ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?

ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?

ಶಿರಸಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿರೋ ಪೊಲೀಸರು ಬುಕ್ಕಿ ಸೇರಿ,15 ಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಎಸ್ಪಿ, ಡಾ.ಸುಮನಾ ಪೆನ್ನೇಕರ್ ರಚಿಸಿರೋ ವಿಶೇಷ ಪೊಲೀಸ್ ಟೀಂ ಕಾರ್ಯಾಚರಣೆ ನಡೆಸಿದ್ದು, ಮಟ್ಕಾ ಆಡಿಸುತ್ತಿದ್ದ ದಂಧೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆನೆ, ಮಟ್ಕಾ ದಂಧೆಯಲ್ಲಿಬಕೈ ಬದಲಾಯಿಸುತ್ತ ಅಂದಾಜು 3-4 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ‌. ಶಿರಸಿ ನಗರ ಹಾಗೂ...

Post
ಶಿಗ್ಗಾವಿಯಲ್ಲಿ ಮುಂಡಗೋಡಿನ ಟಿಪ್ಪರ್ ಮಾಲೀಕ ಮರ್ಡರ್..! ಸಿಎಂ ತವರು ಕ್ಷೇತ್ರದಲ್ಲಿ ಏನಿದೇಲ್ಲ..?

ಶಿಗ್ಗಾವಿಯಲ್ಲಿ ಮುಂಡಗೋಡಿನ ಟಿಪ್ಪರ್ ಮಾಲೀಕ ಮರ್ಡರ್..! ಸಿಎಂ ತವರು ಕ್ಷೇತ್ರದಲ್ಲಿ ಏನಿದೇಲ್ಲ..?

ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿ ಕ್ರೈಮುಗಳ ಸಿಟಿಯಾಯ್ತಾ..? ಇಂತಹದ್ದೊಂದು ಅನುಮಾನ ಇಡೀ ಕ್ಷೇತ್ರದ ಪ್ರಜ್ಞಾವಂತರನ್ನ ಬೆಂಬಿಡದೇ ಕಾಡ್ತಿದೆ. ಇಲ್ಲಿ ಕೊಲೆ ಅನ್ನೋದು ಕಾರಣಗಳೇ ಇಲ್ಲದೇ ನಡೆದು ಹೋಗ್ತಿವೆ. ನಿನ್ನೆ ಸಂಜೆ ನಡೆದದ್ದೂ ಇದೆ. ಸರಗೊಲು ಆಡುತ್ತಿದ್ದಾಗ ಕೋಲು ಬಡಿಸಿಕೊಂಡ ಟಿಪ್ಪರ್ ಮಾಲೀಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಅನಾಮತ್ತಾಗಿ ಮರ್ಡರ್ ಆಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಉಮೇಶ್ ಶಿವಜೋಗಿಮಠ್ (45) ಎಂಬುವವನನ್ನು ಬರೋಬ್ಬರಿ ಏಳು ಜನರ ತಂಡ ಮನಬಂದಂತೆ ಥಳಿಸಿ ಕೊಂದು ಹಾಕಿದ್ದಾರೆ...

Post
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ‌ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!

ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ‌ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!

ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...

Post
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?

ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?

ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...

Post
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...

Post
ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!

ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ‌. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ‌. ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತ‌ಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ. ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ...

Post
ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ  ಆತ್ಮಹತ್ಯೆ, ಕಾರಣವಾದ್ರೂ ಏನು..?

ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ ಆತ್ಮಹತ್ಯೆ, ಕಾರಣವಾದ್ರೂ ಏನು..?

ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ‌. ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ‌ ಮೃತ ಪಟ್ಟಿದ್ದಾನೆ...

Post
ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?

ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ. 

error: Content is protected !!