Home Publicfirstnewz

Tag: Publicfirstnewz

Post
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?

ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?

  ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ‌. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.  ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...

Post
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!

ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!

ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಚಿಗಳ್ಳಿ ಪ್ರೌಢಶಾಲೆಯ ಕಂಪೌಂಡ್ ರಾತ್ರೋ ರಾತ್ರಿ ಕೆಡವಿ ಹಾಕಿದ ದುಷ್ಟರು, ಅಯ್ಯೋ, ಜ್ಞಾನದೇಗುಲದ ಮೇಲೆ ಇದೇಂಥಾ ವಿಕೃತಿ..?

ಚಿಗಳ್ಳಿ ಪ್ರೌಢಶಾಲೆಯ ಕಂಪೌಂಡ್ ರಾತ್ರೋ ರಾತ್ರಿ ಕೆಡವಿ ಹಾಕಿದ ದುಷ್ಟರು, ಅಯ್ಯೋ, ಜ್ಞಾನದೇಗುಲದ ಮೇಲೆ ಇದೇಂಥಾ ವಿಕೃತಿ..?

ಮುಂಡಗೋಡ ತಾಲೂಕಿನಲ್ಲಿ ಕಾನೂನಿನ ಭಯವೇ ಹೊರಟು ಹೋಯ್ತಾ..? ಅಥವಾ ಆನೆ ನಡೆದದ್ದೇ ದಾರಿ ಅನ್ನುವ ಹುಂಬತನವಾ..? ಅಥವಾ ಬಂಢತನವಾ..? ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ರಾತ್ರೋ ರಾತ್ರಿ ಸಾರ್ಕಾರದ ಆಸ್ತಿಯೊಂದನ್ನ ಅನಾಮತ್ತಾಗಿ ಕೆಡವಿ ಹಾಕಲಾಗಿದೆ. ಚಿಗಳ್ಳಿಯ ದಿ. ದೇವಕಿ ಚಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಕಂಪೌಂಡ್ ನೆಲಸಮ ಮಾಡಿದ್ದಾರೆ ಕಿಡಿಗೇಡಿಗಳು..! ಆದ್ರೆ, ಯಾರು ಅಂದ್ರೆ ಯಾರೂ ಈ ಬಗ್ಗೆ ಮಾತಾಡ್ತಿಲ್ಲ.. ಇಡೀ ತಾಲೂಕಾಡಳಿತವೇ ಮೌನವಹಿಸಿದೆ.. ಈ ಕ್ಷಣದವರೆಗೂ ಯಾವೊಬ್ಬ ಅಧಿಕಾರಿಗಳೂ ತುಟಿ ಬಿಚ್ಚಿಲ್ಲ. ಇತಿಹಾಸವಿದೆ..! ಅಂದಹಾಗೆ, ಚಿಗಳ್ಳಿಯ ಸರ್ಕಾರಿ...

Post
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?

ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...

Post
ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!

ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!

ಬೆಳಗಾವಿ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಡಿಸಿ ಕಚೇರಿ ಎದುರು ನಡೆಯುತ್ತಿದ್ದ ಧರಣಿ ವಾಪಸ್ ಪಡೆದಿದ್ದಾರೆ ರೈತರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ನಿನ್ನೆ ತಡರಾತ್ರಿ ವಾಪಸ್ ಪಡೆದಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ರೈತರು, ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಮನವೊಲಿಸಿದ ಬಳಿಕ ವಾಪಸ್ಬ ಪಡೆದಿದ್ದಾರೆ. ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಇದೇ ತಿಂಗಳು 15 ರಂದು ಕಬ್ಬಿನ ದರ ನಿಗದಿಗಾಗಿ ಸಭೆ...

Post
ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!

ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!

ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ‌. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ‌. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...

Post
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?

ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?

ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...

Post
ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?

ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?

ಮುಂಡಗೋಡ: ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಮರಗಳ ಮಾರಣಹೋಮದ ಸುದ್ದಿ ಪಬ್ಲಿಕ್ ಫಸ್ಟ್ ನಲ್ಲಿ ಬಿತ್ತರಿಸಿದ್ದೇ ತಡ, ಕಾತೂರಿನ RFO ಸಾಹೇಬ್ರು ಉರಿದುಬಿದ್ದಿದ್ದಾರಂತೆ‌‌. ಅದೇಲ್ಲ ಬುಡುಚಿಗಳು ಹಳೆಯವು, ಅದರ ಮೇಲೆ ಈಗಾಗಲೇ ಕೇಸು ದಾಖಲಿಸಲಾಗಿದೆ ಅಂತೇಲ್ಲ ಬುಸುಗುಟ್ಟಿದ್ದಾರಂತೆ. ಆದ್ರೆ, ಒಂದು ಮಾತ್ರ ಅರ್ಥವಾಗ್ತಿಲ್ಲ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಕೇವಲ ಎಫ್ ಐ ಆರ್ ಗಷ್ಟೇ ಸೀಮಿತವಾಗಿಬಿಟ್ರಾ..? ಅಥವಾ ಅರಣ್ಯದಲ್ಲಿ ರಕ್ಷಣೆಯ ಜವಾಬ್ದಾರಿಯನ್ನೇ ಮರೆತ್ರಾ..? ಈ ಪ್ರಶ್ನೆ ಸದ್ಯ ಪರಿಸರ ಪ್ರಿಯರಿಗೆ ಕಾಡ್ತಿದೆ. 12 FIR ಆಗಿದೆಯಂತೆ..! ನಂಗೆ...

Post
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿ‌ನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ‌. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...

Post
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!

ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!

ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ‌. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...

error: Content is protected !!