ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: Publicfirstnewz
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಬಾಚಣಕಿ ಸಮೀಪ ರಸ್ತೆ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಸ್ಥಗಿತ..!
ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿದೆ. ನಿರಂತರ ಮಳೆಯಿಂದ ಬೃಹತ್ ಮರ ರಸ್ತೆ ಮೇಲೆ ಉರುಲಕಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ. ರಸ್ತೆ ಬದಿ ಇದ್ದ ಮರ ಮದ್ಯಾಹ್ನ ಏಕಾಏಕಿ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಅಂದಹಾಗೆ, ಕಳೆದ ಹತ್ತು ದಿನಗಳಿಂದ ತಾಲೂಕಿನಲ್ಲಿ ನಿರಂತರವಾಗಿ ಬಿಟ್ಟೂ ಬಿಡದೇ ಸುರಿಯುತ್ತಿರೋ...
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
ರಾಕ್ಷಸ ಮಳೆ: ನದಿ ನೀರಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ..!
ಉಡುಪಿ: ರಾಕ್ಷಸ ಮಳೆಯ ರಣಭೀಕರತೆ ಮುಂದುವರೆದಿದೆ. 7 ವರ್ಷದ ಬಾಲಕಿಯೊಬ್ಬಳು ಕಾಲುಸಂಕದಿಂದ ಕೆಳಗೆ ಬಿದ್ದು, ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಬೀಜಮಕ್ಕಿಯಲ್ಲಿ ನಡೆದಿದೆ. 7 ವರ್ಷ ವಯಸ್ಸಿನ ಸನ್ನಿಧಿ ಎಂಬ ಬಾಲಕಿಯೇ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಶಾಲೆಯಿಂದ ಮನೆಗೆ ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ. ಭಾರಿ ಮಳೆಯ ನಡುವೆಯೇ ಶಾಲೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದ ಬಾಲಕಿ ಕಾಲುಸಂಕ ದಾಟುವಾಗ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ನದಿ ನೀರಿನ ರಭಸಕ್ಕೆ...
ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!
ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಚೌಡಳ್ಳಿ-ಮಲವಳ್ಳಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮುಖಂಡರಾದ ವೈ.ಪಿ ಪಾಟೀಲ್, ಅರ್ಜುನಪ್ಪ ಸಿಗ್ನಳಿ, ಪಿ. ಜಿ.ಪಾಟೀಲ, ಪರಶುರಾಮ್ ತಹಸೀಲ್ದಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ.ಭುಜಂಗಿ, ಪರಶುರಾಮ್ ಕುರಿಯವರ್, ಬಸವರಾಜ್ ಉಗ್ಗಿನಕೇರಿ, ರಾಮಚಂದ್ರ ರಾಥೋಡ್, ಮಹೇಶ್ ಅರ್ಕಸಾಲಿ, ಚವಡಳ್ಳಿ ಗ್ರಾಪಂ ಸದಸ್ಯ ಪ್ರದೀಪ್ ಚವಾಣ್, ಅಬ್ದುಲ್ ಖಾದರ್...
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.