ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: Publicfirstnewz
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!
ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...
ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?
ಭಟ್ಕಳ: ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಿಳಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಗೆ ಬಹುಮುಖ್ಯ ಸುಳಿವು ಲಭ್ಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆಗಂತುಕ ಕೊಲೆಯಾದವರ ಸಂಬಂಧಿಯೇ ಆಗಿದ್ದಾನೆ ಅಂತಿದೆ ಪೊಲೀಸ್ ಮೂಲಗಳು. ಹೌದು, ಭಟ್ಕಳ ತಾಲೂಕಿನ ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40)...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಎಲ್ಲಿ ಗೊತ್ತಾ..?
ಸವಣೂರಿನಲ್ಲಿ ಕರುಳು ಹಿಂಡುವ, ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಾಲಮಾಡಿ ಮಗಳಮದುವೆ ಮಾಡಿದ್ದ ದಂಪತಿಗಳು ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ತಂದೆ, ತಾಯಿಯ ಸಾವು ಕಂಡ ಮಗಳೂ ಕೂಡ ನೇಣಿಗೆ ಶರಣಾಗಿದ್ದಾಳೆ. ಇದ್ರೊಂದಿಗೆ ಒಂದೇ ಕುಟುಂಬ ಮೂವರು ಸಾವಿನ ಹಾದಿ ಹಿಡಿದಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟಮೆ ನಡೆದಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!
ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!
ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಇದನ್ನೇಲ್ಲ ಅಲ್ಲೇ...
ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!
ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.









